MP Dr.K. Sudhakar Good news for private taxis

ಖಾಸಗಿ ಟ್ಯಾಕ್ಸಿಗಳಿಗೆ ಸಂಸದ ಡಾ.ಕೆ.ಸುಧಾಕರ್‌ ಗುಡ್ ನ್ಯೂಸ್

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ (Dr.K. Sudhakar) ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ.

ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು.

ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ.

ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ.

ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ.

ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ.

ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು.

ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಬಿ ಬಸವರಾಜು, ಪೊಲೀಸ್ ವರಿಷ್ಠರು, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಸೇರಿದಂತೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು, ಟ್ಯಾಕ್ಸಿ ಚಾಲಕ ಸಂಘದ ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!