Removing Valmiki banner was the reason for the Bellary tragedy: DCM D.K. Shivakumar

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬಳ್ಳಾರಿ: “ವಾಲ್ಮೀಕಿ ಅವರ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಅಸೂಯೆಯಿಂದ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಸ್ಥಳೀಯ ನಾಯಕರು ಇಲ್ಲಿ ಪುತ್ಥಳಿ ಆಗಬೇಕು ಎಂದು ಕೈಗೊಂಡಿರುವ ತೀರ್ಮಾನ ಸರಿಯಾಗಿದೆ. ಡಿ.24 ರಿಂದ ಡಿ.29 ರವರೆಗೆ ಈ ಜಿಲ್ಲೆಯ ಜನ ಬಹಳ ಸಂಭ್ರಮದಿಂದ ಪುತ್ಥಳಿ ಸ್ವಾಗತ ಕಾರ್ಯಕ್ರಮವನ್ನು ಹಬ್ಬದಂತೆ ಸಂಭ್ರಮಿಸಿದ್ದರು. ಈಗ ಕೇವಲ ಬ್ಯಾನರ್ ವಿಚಾರವಾಗಿ ಗಲಾಟೆ ನಡೆದಿದೆ.

ಜ.1 ರಂದು ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಕಟ್ಟಿದ್ದಾರೆ. ಸಾಮಾನ್ಯವಾಗಿ ಎಲ್ಲಾ ಕಡೆ ಬ್ಯಾನರ್ ಕಟ್ಟುತ್ತಾರೆ. ಬ್ಯಾನರ್ ಕಟ್ಟುವ ವಿಚಾರದಲ್ಲಿ ಜನಾರ್ದನ ರೆಡ್ಡಿ ಅಥವಾ ಶ್ರೀರಾಮುಲು ಅವರಿಗೆ ಅಸಮಾಧಾನವಿದ್ದಿದ್ದರೆ, ಪಾಲಿಕೆ ಆಯುಕ್ತರು, ಪೊಲೀಸ್ ಅಧಿಕಾರಿಗಳು, ಶಾಸಕರು, ಇತರೆ ನಾಯಕರಿಗೆ ಕರೆ ಮಾಡಿ, ನಮಗೆ ವಾಲ್ಮೀಕಿ ಅವರ ಬ್ಯಾನರ್ ನೋಡಿದರೆ ಆಗುವುದಿಲ್ಲ, ಈ ಜನಾಂಗ ನಮಗೆ ಮೋಸ ಮಾಡಿದೆ. ಕೇವಲ ಕಾಂಗ್ರೆಸ್ ನವರನ್ನು ಗೆಲ್ಲಿಸಿದ್ದಾರೆ.

ಬ್ಯಾನರ್ ತೆಗೆಯಿರಿ ಎಂದಿದ್ದರೆ ಅವರು ತೆರವು ಮಾಡುತ್ತಿದ್ದರು. ಆದರೆ ಅವರು ಯಾರಿಗೂ ಸೂಚನೆ ನೀಡಿಲ್ಲ. ಬದಲಿಗೆ ವಾಲ್ಮೀಕಿ ಅವರಿಗೆ ಅಪಮಾನವಾಗುವ ರೀತಿ ಬ್ಯಾನರ್ ತೆರವುಗೊಳಿಸಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತೆ ಬ್ಯಾನರ್ ಹಾಕಲು ಹೋಗಿದ್ದಾರೆ. ನಂತರದ ಘಟನೆಗಳನ್ನು ನಾನು ನೋಡಿದ್ದೇನೆ. ಅವರ ಮುಖಂಡತ್ವದಲ್ಲೇ ಬ್ಯಾನರ್ ಹರಿದುಹಾಕಿದ್ದಾರೆ. ಇದು ಸರಿಯೋ ತಪ್ಪೋ ಎಂದು ನಾನು ತೀರ್ಮಾನ ಮಾಡುವುದಿಲ್ಲ, ನೀವುಗಳೇ ತೀರ್ಮಾನ ಮಾಡಿ ಎಂದರು.

“ನಾನು ಯಾರ ಬಗ್ಗೆಯೂ ಅವಹೇಳನಕಾರಿ ಹೇಳಿಕೆ ನೀಡಲು ಇಲ್ಲಿಗೆ ಬಂದಿಲ್ಲ. ಕಾನೂನು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಪೊಲೀಸ್ ಅಧಿಕಾರಿಗಳು ಬಹಳ ದಿಟ್ಟವಾಗಿ ಅಗತ್ಯ ತೀರ್ಮಾನ ತೆಗೆದುಕೊಂಡಿದ್ದಾರೆ. ಭದ್ರತಾ ಸಿಬ್ಬಂದಿ ನಡೆ ಸರಿ ಎಂದು ನಾನು ಹೇಳುವುದಿಲ್ಲ. ಕಾನೂನು ಸೂಕ್ತ ಕ್ರಮ ಕೈಗೊಳ್ಳಲಿದೆ. ಪೊಲೀಸ್ ಅಧಿಕಾರಿಗಳು ಸಂಬಂಧಪಟ್ಟವರನ್ನು ಬಂಧಿಸಿದ್ದಾರೆ, ಖಾಸಗಿ ಭದ್ರತಾ ಸಿಬ್ಬಂದಿ ಹೊಂದಿರುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ

ಶಾಸಕರು ಹಾಗೂ ಸಂಸದರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಜನಾರ್ದನ ರೆಡ್ಡಿ ದಂಪತಿಗೆ ಐವರು ಭದ್ರತಾ ಸಿಬ್ಬಂದಿ ನೀಡಿದ್ದಾರೆ. ಬಳ್ಳಾರಿಯಲ್ಲಿ ಇಬ್ಬರು, ಕೊಪ್ಪಳದಲ್ಲಿ ಒಬ್ಬರು, ಅವರ ಧರ್ಮಪತ್ನಿಗೆ ಒಬ್ಬರು, ಸೋಮಶೇಖರ್ ಅವರಿಗೆ ಒಬ್ಬರು, ಶ್ರೀರಾಮುಲು ಅವರಿಗೆ ಇಬ್ಬರು ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗಿದ್ದು, ಈ ಭದ್ರತಾ ಸಿಬ್ಬಂದಿ ಅವರ ಜತೆಯಲ್ಲೇ ಇದ್ದಾರೆ.

ಜನಾರ್ದನ ರೆಡ್ಡಿ ಅವರು ತಮ್ಮನ್ನು ಕೊಲ್ಲುವ ಸಂಚು ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಅವರು ದೂರು ನೀಡಿದ್ದಾರಾ ಎಂದು ಕೇಳಿದೆ. ಯಾವುದೇ ದೂರು ನೀಡಿಲ್ಲ ಎಂಬ ವಿಚಾರ ತಿಳಿಯಿತು. ಜನಾರ್ದನ ರೆಡ್ಡಿ ಅವರಿಗೆ ದೂರು ನೀಡಲು ಸಾಧ್ಯವಾಗದಿದ್ದರೆ, ಅವರ ಗನ್ ಮ್ಯಾನ್ ಗಳು ದೂರು ನೀಡಲು ಅವಕಾಶವಿದೆ. ಅವರು ಝಡ್ ಕೆಟಗೆರಿ ಭದ್ರತೆ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು.

ಈ ಭದ್ರತೆಯನ್ನು ಯಾರು ನೀಡಬೇಕು ಎಂದು ನನಗೆ ಗೊತ್ತಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಈ ಭದ್ರತೆಯನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ತಿಳಿಯಿತು. ಝಡ್ ಕೆಟಗರಿ ಭದ್ರತೆ ಬೇಕಾಗಿರುವವರು ಕೇಂದ್ರ ಸರ್ಕಾರದಿಂದ ತೆಗೆದುಕೊಳ್ಳಲಿ. ನಮ್ಮ ಅಭ್ಯಂತರವಿಲ್ಲ ಎಂದು ತಿರುಗೇಟು ನೀಡಿದರು.

ಬಳ್ಳಾರಿ ಇತಿಹಾಸಕ್ಕೆ ಧಕ್ಕೆ ಬರುವಂತೆ ವರ್ತಿಸಬೇಡಿ

“ಈ ಅಹಿತಕರ ಘಟನೆ ಆಗಬಾರದಿತ್ತು. ನಾನು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಒಂದು ಮಾತು ಹೇಳಲು ಬಯಸುತ್ತೇನೆ. ಬಳ್ಳಾರಿ ಇತಿಹಾಸ ದೊಡ್ಡದಿದೆ. ದಯವಿಟ್ಟು ಇದರ ಗೌರವಕ್ಕೆ ಧಕ್ಕೆ ಬರುವ ರೀತಿ ನಡೆದುಕೊಳ್ಳಬೇಡಿ. ನಾನು ನಮ್ಮವರಿಗೆ ಬುದ್ಧಿವಾದ ಹೇಳಿದ್ದು, ಮುಂದೆಯೂ ಹೇಳುತ್ತೇನೆ. ಬಿಜೆಪಿಯವರಿಗೆ ಅವರ ನಾಯಕರು ಬಹಳ ದೊಡ್ಡವರಿದ್ದಾರೆ, ಅವರಿಗೆ ಬಿಡುತ್ತೇನೆ” ಎಂದು ತಿಳಿಸಿದರು.

ಈ ಹಿಂದೆ ನಡೆದ ಘಟನೆಗಳಿಂದ ಬಳ್ಳಾರಿ ಜಿಲ್ಲೆಗೆ ಆಗಿದ್ದ ಅಪಮಾನ, ತೊಂದರೆ, ಉದ್ಯೋಗ ನಷ್ಟ, ಆರ್ಥಿಕ ನಷ್ಟದಿಂದ ಹೊರಬಂದು ಕಳೆದ ಹತ್ತು ವರ್ಷಗಳಲ್ಲಿ ಚೇತರಿಸಿತ್ತು. ಈಗ ವಾಲ್ಮೀಕಿ ಅವರ ಪುತ್ಥಳಿ ಅನಾವರಣ ಮಾಡುವ ವಿಚಾರದಲ್ಲಿ ಇಂತಹ ಘಟನೆ ನಡೆದಿದೆ.

ಧಾರ್ಮಿಕವಾಗಿ ಇದನ್ನು ಉದ್ಘಾಟನೆ ಮಾಡಬೇಕು ಎಂಬ ಪ್ರಸ್ತಾವನೆಯನ್ನು ನಗರಾಭಿವೃದ್ಧಿ ಇಲಾಖೆಗೆ ನೀಡಲಾಗಿತ್ತು. ಆದರೆ ಇನ್ನು ಅನುಮತಿ ನೀಡುವುದು ಬಾಕಿ ಇತ್ತು. ಅರುಣ್ ಯೋಗಿರಾಜ್ ಅವರು ನಿರ್ಮಿಸಿರುವ ಪುತ್ಥಳಿ ಸ್ವಾಗತಿಸುವ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ನಾಯಕರು ಭಾಗವಹಿಸಿದ್ದರು.

ಮೂರು ದಿನಗಳ ಮುಂಚೆ ನಮ್ಮ ಮಿತ್ರ ಶ್ರೀರಾಮುಲು ಅವರು ಇದರ ಅಗತ್ಯವಿಲ್ಲ, ನನ್ನನ್ನು ಕರೆಯಬೇಡಿ ಎಂದು ಹೇಳಿದ್ದರು. ಇದು ಅವರ ವೈಯಕ್ತಿಕ ವಿಚಾರ ಎಂದರು.

ಯಾವ ಲೆಕ್ಕದಲ್ಲಿ 2 ಶವಪರೀಕ್ಷೆ ನಡೆದಿದೆ ಎಂದು ಕೇಂದ್ರ ಸಚಿವರು ಹೇಳಿದರು? ಅವರಿಗೆ ಈ ಮಾಹಿತಿ ಕೊಟ್ಟವರು ಯಾರು?

ಕುಮಾರಸ್ವಾಮಿ ಅವರು ಇಲ್ಲಿಗೆ ಬಾರದೇ, ಅಲ್ಲೆಲ್ಲೋ ಹೇಳಿಕೆ ನೀಡಿದ್ದಾರೆ. ಎರಡು ಬಾರಿ ಶವಪರೀಕ್ಷೆ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಅವರಿಗೆ ಯಾರು ಸಂಶೋಧನೆ ಮಾಡಿ ಈ ಮಾಹಿತಿ ನೀಡಿದರೋ ಗೊತ್ತಿಲ್ಲ. ಈ ವಿಚಾರವಾಗಿ ಜಿಲ್ಲಾ ವೈದ್ಯಾಧಿಕಾರಿ ಅವರನ್ನು ವಿಚಾರಿಸಿದೆ. ಅವರು ಶವಪರೀಕ್ಷೆಗೆ ಒಂದೇ ಒಂದು ಅರ್ಜಿ ಬಂದಿದೆ. ಬೆಳಗ್ಗೆ 6-8 ಗಂಟೆವರೆಗೂ ಶವಪರೀಕ್ಷೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಯಾವ ಲೆಕ್ಕದಲ್ಲಿ 2 ಶವಪರೀಕ್ಷೆ ನಡೆದಿದೆ ಎಂದು ಕೇಂದ್ರ ಸಚಿವರು ರಾಜ್ಯಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅವರ ಮಾಹಿತಿ ಮೂಲ ಏನು ಎಂದು ಮಾಧ್ಯಮಗಳು ಕೇಳಬೇಕು. ಅಂತ್ಯಸಂಸ್ಕಾರ ಆದ ನಂತರ ಶವ ತೆಗೆದು ಪರೀಕ್ಷೆ ಮಾಡಲಾಗಿದೆಯೇ ಎಂದು ನಾನು ತಿಳಿದುಕೊಳ್ಳಬೇಕು ಎಂದು ತಿರುಗೇಟು ನೀಡಿದರು.

ವಾಲ್ಮೀಕಿ ಅವರ ಬ್ಯಾನರ್ ಹರಿದುಹಾಕಿದ ತಪ್ಪನ್ನು ಮುಚ್ಚಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರಿಬ್ಬರು ಈಗ ತಬ್ಬಾಡುತ್ತಿದ್ದಾರೆ. ತಬ್ಬಾಡಲಿ, ತೊಂದರೆ ಇಲ್ಲ. ಈ ಹಿಂದೆ ಒಬ್ಬರು ಮತ್ತೊಬ್ಬರ ಮೇಲೆ ಎಷ್ಟು ಪ್ರೀತಿ, ಲವಲವಿಕೆ ಹೊಂದಿದ್ದರು, ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ನಡುವೆ ಸಂಬಂಧ ಹೇಗಿತ್ತು, ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವೆ ಸಂಬಂಧ ಹೇಗಿತ್ತು, ನಮಗೂ ಶ್ರೀರಾಮುಲು, ಕುಮಾರಸ್ವಾಮಿಗೆ ಏನಿತ್ತು ಎಂಬುದನ್ನು ಬದಿಗಿಡೋಣ.

ಅವರು ಒಟ್ಟಾಗಿರಲಿ, ನಾವು ಬೇಡ ಎನ್ನುವುದಿಲ್ಲ. ಆದರೆ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಸಾರ್ವಜನಿಕವಾಗಿ ಈ ರೀತಿ ಸುಳ್ಳು ಹೇಳುವುದರಿಂದ ನಿಮ್ಮ ಘನತೆಗೆ ಧಕ್ಕೆ ಬರುತ್ತದೆಯೇ ಎಂದು ಕಿಡಿಕಾರಿದರು.

ಈ ಪ್ರಕರಣದ ಪ್ರತಿ ಘಟನೆ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದೇನೆ. ಶ್ರೀರಾಮುಲು, ಜನಾರ್ದನ ರೆಡ್ಡಿ ಅವರ ಹೇಳಿಕೆ ನೋಡಿದ್ದೇನೆ. ಜನಾರ್ದನ ರೆಡ್ಡಿ ಅವರ ಹೇಳಿಕೆಯಂತೆ ಅವರ ಹತ್ಯೆಗೆ ಸಂಚು ರೂಪಿಸಿದ್ದರೆ ಅವರ ಮನೆ ಮಹಜರ್ ಮಾಡಿಸಬೇಕಿತ್ತು. ಅವರ ಮೇಲೆ ಗುಂಡು ಹಾರಿಸಿದ್ದರೆ ಅವರ ದೇಹದ ಯಾವ ಭಾಗಕ್ಕೆ ಗಾಯವಾಗಿತ್ತು, ಅವರ ಮನೆಯ ಯಾವ ಭಾಗಕ್ಕೆ ಹಾನಿಯಾಗಿದೆ ಎಂದು ತೋರಿಸಬೇಕಿತ್ತಲ್ಲವೇ? ಎಂದು ತಿಳಿಸಿದರು.

ಯಾರೂ ಉದ್ವೇಗಕ್ಕೆ ಒಳಗಾಗಬಾರದು ಎಂದು ಕಾರ್ಯಕರ್ತರಿಗೆ ತಿಳಿಸಿದ್ದೇವೆ. ನಮ್ಮ ಶಾಸಕರು ಯುವಕರು ಬಿಸಿ ರಕ್ತ. ಕಾರ್ಯಕರ್ತರನ್ನು ವಿಚಾರಿಸಲು ಹೋಗಿದ್ದಾರೆ. ನಮ್ಮ ಶಾಸಕರು ಕಾನೂನು ಚೌಕಟ್ಟು ಮೀರಿ ವರ್ತನೆ ಮಾಡಿದ್ದಾರಾ ಎಂದು ಪೊಲೀಸ್ ಅಧಿಕಾರಿಗಳನ್ನು ಕೇಳಿದೆ, ಇಲ್ಲ, ಅವರು ನಮಗೆ ಸಹಕಾರ ನೀಡಿದ್ದಾರೆ ಎಂದು ಹೇಳಿದರು.

ಘಟನೆ ನಡೆದಾಗ ಶ್ರೀರಾಮುಲು ಅವರು ಕರೆ ಮಾಡಿದಾಗ, ನಾನು ತಕ್ಷಣವೇ ಎಸ್ಪಿ ಜೊತೆ ಮಾತನಾಡಿದ್ದೇನೆ. ನಮ್ಮವರು ತಪ್ಪು ಮಾಡಿದ್ದರೂ ತಪ್ಪು ಎಂದು ಹೇಳುತ್ತೇವೆ. ಈ ರೀತಿ ಹೇಳದಿದ್ದರೆ ಅವರನ್ನು ತಿದ್ದಲು ಆಗುವುದಿಲ್ಲ ಎಂದರು.

ಮೃತ ಕಾರ್ಯಕರ್ತನ ಕುಟುಂಬದ ಜೊತೆ ಪಕ್ಷವಿದೆ

ಕಾರ್ಯಕರ್ತ ರಾಜಶೇಖರ್ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬದ ಜೊತೆ ಪಕ್ಷವಿದೆ ಎನ್ನುವ ಕಾರಣಕ್ಕೆ ನಾನು ಅವರ ಮನೆಗೆ ಭೇಟಿ ನೀಡಲು ಬಂದಿದ್ದೇನೆ” ಎಂದರು.

ಪ್ರಶ್ನೋತ್ತರ

ಮೃತ ಕಾರ್ಯಕರ್ತನ ಕುಟುಂಬಕ್ಕೆ ಪಕ್ಷದಿಂದ ನೆರವು ಹಾಗೂ ಸರ್ಕಾರಿ ಕೆಲಸ ನೀಡುವ ಬಗ್ಗೆ ಕೇಳಿದಾಗ, “ಕಾನೂನು ಚೌಕಟ್ಟಿನಲ್ಲಿ ನೌಕರಿ ನೀಡುವ ಬಗ್ಗೆ ಆಲೋಚನೆ ಮಾಡಲಾಗುವುದು. ಈ ಹಿಂದೆ ಯಾವ ತೀರ್ಮಾನ ಆಗಿದೆ ಎಂದು ನೋಡಬೇಕಿದೆ” ಎಂದರು.

ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಬಹುದಲ್ಲವೇ ಎಂದಾಗ, ನಿಮ್ಮ (ಮಾಧ್ಯಮಗಳ) ಸಲಹೆ ಕೇಳುತ್ತಿದ್ದೇನೆ. ಆನಂತರ ನೋಡೋಣ” ಎಂದರು.
ಎರಡೂ ಕಡೆ ಎಫ್ಐಆರ್ ಆಗಿದ್ದು, ದೊಡ್ಡವರ ಹೆಸರೂ ಇದೆ. ಆದರೆ ಬಂಧಿತರಲ್ಲಿ ಕೇವಲ ಕಾರ್ಯಕರ್ತರು ಮಾತ್ರ ಇದ್ದಾರೆ ಎಂದು ಕೇಳಿದಾಗ, “ಈ ವಿಚಾರವಾಗಿ ಗೃಹ ಸಚಿವರು ಹಾಗೂ ಪೊಲೀಸರು ನಿರ್ಧಾರ ಮಾಡುತ್ತಾರೆ.

ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ. ಪೊಲೀಸರು ಯಾವ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೋ, ಆ ಅಧಿಕಾರವನ್ನು ಅವರಿಗೆ ಬಿಡುತ್ತೇವೆ ಎಂದರು.

ಒಂದೇ ದಿನ ಎರಡು ಸಮಯದಲ್ಲಿ ಶವಪರೀಕ್ಷೆ ಮಾಡಬಾರದೇ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಮಹಿತಿ ಇಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಒಂದು ಬಾರಿ ಮಾತ್ರ ಶವ ಪರೀಕ್ಷೆಯಾಗಿದೆ. ಆದರೆ ರಾಜಕೀಯವಾಗಿ ಸುಳ್ಳು ಹೇಳಿ ದಾರಿ ತಪ್ಪಿಸುವ ಚಟ ಕೆಲವರಿಗೆ ಇರುತ್ತದೆ. ಮಾಧ್ಯಮಗಳ ಮುಂದೆ ಸುಳ್ಳು ಆರೋಪ ಮಾಡುವುದೇ ಅವರಿಗೆ ಚಟವಾಗಿರುತ್ತದೆ” ಎಂದರು.

ಅಧಿಕಾರಿಗಳಿಂದ ಸ್ಪಷ್ಟನೆ ನೀಡಿಸಬಹುದಲ್ಲವೇ ಎಂದು ಕೇಳಿದಾಗ, “ನಾನು ಅಧಿಕಾರಿಗಳಿಗಳಿಗೆ ಇದೇ ರೀತಿ ಮಾಡಿ ಎಂದು ನಿರ್ದೇಶನ ನೀಡುವುದಿಲ್ಲ. ಸಾರ್ವಜನಿಕ ಸೇವೆಯಲ್ಲಿ ಅವರು ಹೇಗೆ ಕೆಲಸ ಮಾಡುತ್ತಾರೋ ಅವರು ಮಾಡುತ್ತಾರೆ. ಪ್ರತಿ ವರದಿಯೂ ನ್ಯಾಯಾಲಯ ಹಾಗೂ ಪೊಲೀಸ್ ಅಧಿಕಾರಿಗಳಿಗೆ ರವಾನೆಯಾಗುತ್ತದೆ. ಮಾಧ್ಯಮಕ್ಕೆ ಸರಿಯಾದ ಸಮಯಕ್ಕೆ ಮಾಹಿತಿ ನೀಡಿ ಎಂದು ಸೂಚಿಸುತ್ತೇನೆ. ಮಾಧ್ಯಮಗಳ ಸಲಹೆ ಸೂಚನೆಗಳನ್ನು ಗೃಹ ಸಚಿವರಿಗೆ ತಿಳಿಸುತ್ತೇನೆ” ಎಂದು ತಿಳಿಸಿದರು.

ಅಧಿಕಾರ ವಹಿಸಿದ 7 ತಾಸಿನಲ್ಲಿ ಎಸ್ ಪಿ ಅವರನ್ನು ಅಮಾನತು ಮಾಡಿದ್ದು ಸರಿಯೇ ಎಂದು ಕೇಳಿದಾಗ, “ನನಗೆ ಈ ಗಲಾಟೆ ಬಗ್ಗೆ ಮೊದಲು ಮಾಹಿತಿ ನೀಡಿದ್ದು ಶ್ರೀರಾಮುಲು ಅವರು. ಅವರು ಕರೆ ಮಾಡಿದ ಬಳಿಕ ನಾನು ಮೊದಲು ಕರೆ ಮಾಡಿದ್ದು ಎಸ್ಪಿ ಅವರಿಗೆ. ಒಂದು ನಿಮಿಷ ಮಾತನಾಡಿದೆ. ಎಸ್ಪಿ ನನ್ನ ಜೊತೆ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ನಾನು ಹೆಚ್ಚಿನ ವಿಚಾರವನ್ನು ಬಹಿರಂಗಪಡಿಸುವುದಿಲ್ಲ. ಅವರು ನನಗೆ ಪ್ರತಿಕ್ರಿಯೆ ನೀಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ತಿಳಿಸಿದರು.

ಶಿವಕುಮಾರ್ ಅವರು ಬಳ್ಳಾರಿಗೆ ಯಾಕೆ ಬರುತ್ತಿದ್ದಾರೆ ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಜನಾರ್ದನ ರೆಡ್ಡಿ ಇತಿಹಾಸ ನನಗೆ, ನಿಮಗೆ ಗೊತ್ತಿದೆ. ಅವರ ಇಂತಹ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ” ಎಂದರು.

ಪಕ್ಷದ ಸತ್ಯಶೋಧನಾ ಸಮಿತಿ ವರದಿ ನೀಡಿದೆಯೇ ಎಂದು ಕೇಳಿದಾಗ, “ಅವರು ವರದಿ ನೀಡಿದ್ದಾರೆ. ನಮ್ಮ ಸರ್ಕಾರ, ಕಾರ್ಯಕರ್ತರು ವಾಲ್ಮೀಕಿ ಅವರ ಪುತ್ಥಳಿ ನಿರ್ಮಿಸುತ್ತಿರುವುದರ ಬಗ್ಗೆ ಜನರ ಪ್ರಶಂಸೆ ಸಹಿಸಲಾಗದೆ ಅಸೂಯೆಯಿಂದ ಬ್ಯಾನರ್ ಕಿತ್ತು ಹಾಕಿರುವುದರಿಂದ ಈ ಘಟನೆ ನೆಡೆದಿದೆ ಎಂದು ತಿಳಿಸಿದ್ದಾರೆ” ಎಂದರು.

ಪುತ್ಥಳಿ ಅನಾವರಣ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಿದ್ದೀರಾ ಎಂದು ಕೇಳಿದಾಗ, “ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು” ಎಂದರು.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!