2-day special session on VB Ji Ram Ji Act: DCM D.K. Shivakumar

ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರ ಸಭೆ ಬಳಿಕ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದರು.

“ಕೇಂದ್ರ ಸರ್ಕಾರ ಮನರೇಗಾ ಯೋಜನೆ ರದ್ದು ಮಾಡಿ, ವಿಬಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿರುವ ಹಿನ್ನಲೆಯಲ್ಲಿ ಇಂದು ಶಾಸಕರು, ಸಂಸದರ ಸಭೆ ನಡೆಸಲಾಗಿದೆ. ವಿಬಿ ಜಿ ರಾಮ್ ಜಿ ಕಾಯ್ದೆ ಹಿಂಪಡೆದು, ಮನರೇಗಾ ವಾಪಸ್ ತರಬೇಕು ಎಂದು ಒತ್ತಾಯಿಸಿ ಹೋರಾಟ ಮಾಡಲು ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.

ಸದ್ಯದಲ್ಲೇ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಹಾಗೂ ಬೂತ್ ಅಧ್ಯಕ್ಷರ ಸಭೆ ಕರೆಯಲಾಗುವುದು. ಕೇಂದ್ರ ಸರ್ಕಾರದ ಈ ಕಾನೂನು ದೇಶಕ್ಕೆ ಬಹು ದೊಡ್ಡ ಮಾರಕವಾಗಿದ್ದು, ಇದನ್ನು ತೆಗೆದುಹಾಕಿ, ಮನರೇಗಾ ಪುನಃ ಸ್ಥಾಪನೆಗೆ ಬೃಹತ್ ಹೋರಾಟ ನಡೆಸಲಾಗುವುದು.

ಗ್ರಾಮ ಪಂಚಾಯತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು. ಜ. 26 ರಿಂದ ಫೆ. 2ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ ಪಾದಯಾತ್ರೆ ನಡೆಸಲಾಗುವುದು. ಉದ್ಯೋಗ ಕಾರ್ಡ್ ಹೊಂದಿರುವ ಕಾರ್ಮಿಕರ ಜತೆ ಈ ಪಾದಯಾತ್ರೆ ಮಾಡಲಾಗುವುದು. ಈ ಪಾದಯಾತ್ರೆಯಲ್ಲಿ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

“ಮೂರು ದಿನ ಜಿಲ್ಲಾ ಕೇಂದ್ರಗಳಲ್ಲಿ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಲಾಗುವುದು. ಪ್ರತಿ ಪಂಚಾಯತಿಗಳಲ್ಲಿ ಜಾಗೃತಿ ಮೂಡಿಸಲಾಗುವುದು. ಮನರೇಗಾ ಬದಲಾವಣೆ ಮೂಲಕ 6000 ಕೋಟಿ ರೂ. ಮೊತ್ತದ ಕಾಮಗಾರಿಯನ್ನು ನಮ್ಮ ರಾಜ್ಯದಿಂದ ಕಸಿದುಕೊಳ್ಳಲಾಗಿದೆ” ಎಂದರು.

“ಇಷ್ಟು ದಿನ ಪಂಚಾಯ್ತಿಗಳು ಯಾವ ಕಾಮಗಾರಿ ಮಾಡಬೇಕು ಎಂಬ ತೀರ್ಮಾನ ಮಾಡುತ್ತಿದ್ದವು. ಈಗ ದೆಹಲಿಯಿಂದ ನಿರ್ದೇಶನ ಮಾಡಿದ ಕಾಮಗಾರಿಗಳನ್ನು ಮಾತ್ರ ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರ ಈ ಬದಲಾವಣೆ ಬಗ್ಗೆ ರಾಜ್ಯಗಳ ಜತೆ ಸಮಾಲೋಚನೆ ನಡೆಸಬೇಕಿತ್ತು. ಈ ಬದಲಾವಣೆಯಿಂದ ಗ್ರಾಮೀಣ ಭಾಗದ ಜನರ ಉದ್ಯೋಗ ಹಕ್ಕು ಕಸಿಯಲಾಗಿದೆ. ಸಂವಿಧಾನದ 73, 74ನೇ ತಿದ್ದುಪಡಿ ಪ್ರಕಾರದ ಹಕ್ಕನ್ನು ಕಸಿಯಲಾಗಿದೆ ” ಎಂದು ಆಗ್ರಹಿಸಿದರು.

“ಮನರೇಗಾ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ ಒಂದು ವಾರದಲ್ಲಿ ಕೂಲಿ ಕೊಡುವ ಶಕ್ತಿ ಇತ್ತು. ಇದನ್ನೆಲ್ಲಾ ಮುಗಿಸಿ ಹೊಸ ರೂಪದಲ್ಲಿ ಅನ್ಯಾಯ ಮಾಡಿದ್ದಾರೆ. ಮನರೇಗಾದಲ್ಲಿ 90% ಅನುದಾನ ಕೇಂದ್ರ ಸರ್ಕಾರ ನೀಡುತ್ತಿತ್ತು. ಈಗ 60% ಕೇಂದ್ರ ಸರ್ಕಾರ, 40% ರಾಜ್ಯ ಸರ್ಕಾರ ಕೊಡಬೇಕು ಎಂದು ಬದಲಾವಣೆ ತಂದಿದ್ದಾರೆ. ಇದು ಒಕ್ಕೂಟ ವ್ಯವಸ್ಥೆ ವಿಚಾರವಾಗಿದ್ದು, ಈ ವಿಚಾರಗಳನ್ನ ರಾಜ್ಯಗಳ ಜೊತೆ ಚರ್ಚೆ ಮಾಡಬೇಕಿತ್ತು. ಇದನ್ನೆಲ್ಲಾ ಬಿಟ್ಟು ರಾತ್ರೊ, ರಾತ್ರಿ ಏಕಾಏಕಿಯಾಗಿ ಬದಲಾವಣೆ ಮಾಡಿದ್ದಾರೆ” ಎಂದು ಹೇಳಿದರು.

ಬಳ್ಳಾರಿ ಗಲಭೆ ಸಮಿತಿ ವರದಿ ಸ್ವೀಕಾರ: ನೋಡಿದ ನಂತರ ಮಾಹಿತಿ

ಬಳ್ಳಾರಿ ಗಲಭೆ ಬಗ್ಗೆ ಕೇಳಿದಾಗ, “ಬಳ್ಳಾರಿ ಘಟನೆ ಬಗ್ಗೆ ಸಮಿತಿ ವರದಿ ಕೊಟ್ಟಿದೆ. ವರದಿ ನೋಡಿದ ಬಳಿಕ ಮಾಹಿತಿ ಕೊಡುತ್ತೇನೆ” ಎಂದು ತಿಳಿಸಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!