ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

Convinced the Governor about the Hate Speech Prevention Bill: R. Ashoka

ಬೆಂಗಳೂರು: ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ್ವೇಷಭಾಷಣ ಪ್ರತಿಬಂಧಕ ಮಸೂದೆಯ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡಬೇಕಿತ್ತು. ಇಂತಹ ಮಸೂದೆ ತರುವಾಗ ಅದು ಜನರ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನೋಡಬೇಕಾಗುತ್ತದೆ. ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿಸಿದ ಸಂವಿಧಾನದಲ್ಲಿ ಮಸೂದೆ ಬಗ್ಗೆ ಚರ್ಚೆ ನಡೆಸಲು ಅವಕಾಶವಿದೆ.

ವಿಧಾನಸಭೆ ಇರುವುದು ಮಸೂದೆ ಮಂಡನೆ ಹಾಗೂ ಚರ್ಚೆಗೇ ಹೊರತು ಗಲಾಟೆ ಮಾಡುವುದಕ್ಕಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಇದರ ಚರ್ಚೆಗೆ ಅವಕಾಶ ನೀಡಲಿಲ್ಲ. ನಾನು ಮಸೂದೆಯ ಬಗ್ಗೆ ಚರ್ಚೆ ಮಾಡಲು ಮುಂದಾದಾಗ ಕಾಂಗ್ರೆಸ್‌ ಶಾಸಕರು, ಸಚಿವರು ಭಯಗೊಂಡು ತರಾತುರಿಯಲ್ಲಿ ಮಸೂದೆ ಮಂಡನೆ ಮಾಡಿದರು. ಈ ವಿಚಾರದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರ ನಡೆಯೂ ನನಗೆ ಬೇಸರ ತಂದಿದೆ ಎಂದರು.

ಬಿಜೆಪಿಯಲ್ಲಿ 15 ಶಾಸಕರು ಈ ಬಗ್ಗೆ ಮಾತನಾಡುವುದಿತ್ತು. ಬಳಿಕ ಮಸೂದೆಯನ್ನು ಸದನ ಸಮಿತಿಗೆ ಒಪ್ಪಿಸಬೇಕೆಂದು ತೀರ್ಮಾನಿಸಿದ್ದೆವು. ಆದರೆ ಏಕಾಏಕಿ ಮಸೂದೆ ಪಾಸ್‌ ಮಾಡಲಾಗಿದೆ. ಈಗ ಅದು ರಾಜ್ಯಪಾಲರ ಬಳಿಗೆ ಹೋಗಿದೆ. ಸೋಮವಾರ ನಾನು, ರಾಜ್ಯಾಧ್ಯಕ್ಷರು ಹಾಗೂ ಇತರ ಮುಖಂಡರು ರಾಜ್ಯಪಾಲರ ಬಳಿಗೆ ಹೋಗಿ ಈ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಇದು ಜನರ ಹಾಗೂ ಮಾಧ್ಯಮಗಳ ಸ್ವಾತಂತ್ರ್ಯ ಕಸಿಯುವ ಮಸೂದೆ.

ತುರ್ತು ಪರಿಸ್ಥಿತಿ ತಂದು ವಾಕ್‌ ಸ್ವಾತಂತ್ರ್ಯ ಕಸಿದುಕೊಂಡಂತೆಯೇ ಇಲ್ಲಿ ಮಸೂದೆ ಮೂಲಕ ಸ್ವಾತಂತ್ರ್ಯ ಕಸಿಯಲಾಗುತ್ತಿದೆ. ನಮ್ಮ ಅಹವಾಲಿಗೆ ಸರ್ಕಾರ ಅವಕಾಶ ನೀಡುವುದಿಲ್ಲ. ಆದ್ದರಿಂದ ರಾಜ್ಯಪಾಲರ ಬಳಿಗೆ ಹೋಗುತ್ತಿದ್ದೇವೆ. ರಾಜ್ಯಪಾಲರು ಮೀಸಲಾತಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಕೇಳಿದ್ದಾರೆ. ಯಾವುದೇ ಕಾನೂನು ತರುವಾಗ ಹೀಗೆಯೇ ಚರ್ಚೆ ಮಾಡಬೇಕಾಗುತ್ತದೆ ಎಂದರು.

ಕೇರಳದ ಕನ್ನಡ ಶಾಲೆಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯನವರ ಆಪ್ತ ಪಾಲುದಾರರಾದ ಮುಖಂಡರೇ ಇದನ್ನು ಮಾಡಿದ್ದಾರೆ. ಇದರಲ್ಲಿ ಸಿಎಂ, ಡಿಸಿಎಂ ಕೈವಾಡ ಇದ್ದು, ಈ ಎಲ್ಲ ಬೆಳವಣಿಗೆಗಳು ಅವರಿಗೆ ಮೊದಲೇ ಗೊತ್ತಿತ್ತು. ನೀನು ಹೊಡೆದಂತೆ ಮಾಡು ನಾನು ಅತ್ತಂತೆ ಮಾಡುತ್ತೇನೆ ಎಂದು ಮೊದಲೇ ತೀರ್ಮಾನಿಸಿಕೊಂಡಿದ್ದರು.

ಇವರ ಬ್ರದರ್‌ಗಳು ಎಲ್ಲವನ್ನೂ ಮೊದಲೇ ಚರ್ಚೆ ಮಾಡಿಕೊಂಡು ಮ್ಯಾಚ್‌ ಫಿಕ್ಸಿಂಗ್‌ ಮಾಡಿದ್ದಾರೆ. ಮುಖ್ಯಮಂತ್ರಿಗಳು ಕೇರಳಕ್ಕೆ ಪತ್ರ ಬರೆದಿರುವುದು ಕೂಡ ಮೊದಲೇ ಹೊಂದಾಣಿಕೆ ಮಾಡಿಕೊಂಡಿರುವುದರ ಭಾಗ. ಕೇರಳ ಸಿಎಂ ಬುಲ್ಡೋಜರ್‌ ಎಂದಾಗ ಅದಕ್ಕೆ ಸಿಎಂ ಸಿದ್ದರಾಮಯ್ಯ ಏನೂ ಹೇಳಲಿಲ್ಲ. ಇದು ಕನ್ನಡಕ್ಕೆ ದ್ರೋಹ ಬಗೆದ ಸರ್ಕಾರ. ವೇದಿಕೆಯಲ್ಲಿ ಕೇರಳ ಮುಖ್ಯಮಂತ್ರಿಯನ್ನು ಭೇಟಿ ಮಾಡಿದಾಗಲೇ ಈ ಬಗ್ಗೆ ಚರ್ಚೆ ಮಾಡಬೇಕಿತ್ತು.

ಎಲ್ಲದಕ್ಕೂ ಮೋದಿಯಿಂದ ಅನ್ಯಾಯ ಎನ್ನುತ್ತಾರೆ. ಈಗ ಇದನ್ನು ಏಕೆ ಅನ್ಯಾಯ ಎಂದು ಹೇಳುತ್ತಿಲ್ಲ? ಸಿಎಂ ಸಿದ್ದರಾಮಯ್ಯ ಕನ್ನಡಕ್ಕೆ ಮಾರಕವಾದ ನಡೆ ಇಟ್ಟಿದ್ದಾರೆ. ಇದರ ವಿರುದ್ಧ ತೀವ್ರ ಪ್ರತಿಭಟನೆ ಮಾಡಲಿ. ಇಲ್ಲವಾದರೆ ಇದರಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಶಾಮೀಲಾಗಿದ್ದಾರೆ ಎಂದೇ ಭಾವಿಸುತ್ತೇವೆ ಎಂದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]