ದೊಡ್ಡಬಳ್ಳಾಪುರ: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನೆಲ್ಲುಕುಂಟೆ ಕ್ರಾಸ್ ಹಾಗೂ ಹೊಸಹಳ್ಳಿ ನಡುವೆ ಸಂಭವಿಸಿದೆ.
ಘಟನೆಯಲ್ಲಿ ಬೈಕ್ ಸವಾರರಾದ ಗುಂಡಮಗೆರೆ ಗ್ರಾಮದ ನರೇಂದ್ರ ಬಾಬು (26 ವರ್ಷ), ಶ್ರೀಧರ (28 ವರ್ಷ) ಎನ್ನುವವರಿಗೆ ತೀವ್ರ ಪೆಟ್ಟಾಗಿದ್ದು, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೊಸಹಳ್ಳಿ ಮೂಲಕ ದೊಡ್ಡಬಳ್ಳಾಪುರದ ಕಡೆಗೆ ಸಾಗುತ್ತಿದ್ದ ಕಾರು ಮತ್ತು ದೊಡ್ಡಬಳ್ಳಾಪುರ ಕಡೆಯ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.