ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

VB Ji Ram Ji Yojana has put an end to corruption: MP Dr. K. Sudhakar

ದೇವನಹಳ್ಳಿ: ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ (Dr. K. Sudhakar) ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್‌ ಜಿ ಯೋಜನೆ ತಂದಿದೆ. ಇದು 2047 ರ ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಪೂರಕವಾಗಿದೆ. 2005 ರ ಮೂಲ ಕಾಯಿದೆಯನ್ನು ಈಗಿನ ಕಾಲಕ್ಕೆ ತಕ್ಕಂತೆ ಸುಧಾರಣೆ ಮಾಡುವುದು ಅನಿವಾರ್ಯವಾಗಿತ್ತು.

ಯುಪಿಎ ಆಡಳಿತದ ಅವಧಿಯಲ್ಲಿ ಈ ಯೋಜನೆಯಡಿ ಭ್ರಷ್ಟಾಚಾರ ಹಾಗೂ ರಾಜಕೀಯ ಹಸ್ತಕ್ಷೇಪ ನಡೆಯುತ್ತಿತ್ತು. ಗ್ರಾಮ ಪಂಚಾಯಿತಿಗಳ ಪಾತ್ರ ಹೆಸರಿಗೆ ಮಾತ್ರವಿದ್ದು, ರಾಜಕೀಯ ತೀರ್ಮಾನಗಳೇ ಹೆಚ್ಚಾಗಿರುತ್ತಿತ್ತು. ಇದನ್ನು ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು.

ಹಾಜರಾತಿಯಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿದ್ದು, 10 ಜನ ಕೆಲಸಕ್ಕೆ ಬಂದರೆ 50 ಜನರ ಹೆಸರು ನೋಂದಾಯಿಸಲಾಗುತ್ತಿತ್ತು. ಯೋಜನೆಯ ಹಣದಲ್ಲಿ ಶೇ.40 ರಿಂದ 50 ರಷ್ಟು ಮೊತ್ತ ದುರುಪಯೋಗವಾಗಿದೆ ಎಂದು ಸಿಎಜಿ ವರದಿ ಕೂಡ ಹೇಳಿತ್ತು ಎಂದರು.

ಗುತ್ತಿಗೆದಾರರಿಗೆ ಕೆಲಸ ನೀಡುವುದು ಹಾಗೂ ಕೂಲಿ ಪಾವತಿಯಲ್ಲಿ 2 ರಿಂದ 4 ತಿಂಗಳ ವಿಳಂಬವಾಗುತ್ತಿತ್ತು. ಇದರಿಂದ ಶ್ರಮ ಪಟ್ಟ ಗ್ರಾಮೀಣ ಜನರಿಗೆ ತೀವ್ರ ಅನ್ಯಾಯವಾಗಿತ್ತು. ಬೋಗಸ್‌ ಬಿಲ್‌ಗಳನ್ನು ತಡೆಹಿಡಿರುವುದಕ್ಕೆ, ಮಹಾತ್ಮ ಗಾಂಧೀಜಿ ಹೆಸರಲ್ಲಿ ನೂರಾರು ಕೋಟಿ ಲೂಟಿ ಮಾಡಿರುವುದನ್ನು ತಡೆದಿರುವುದಕ್ಕೆ ಕಾಂಗ್ರೆಸ್‌ ಈಗ ಹೋರಾಟ ಮಾಡುತ್ತಿದೆ.

ಗಾಂಧೀಜಿಯವರು ಶ್ರೀರಾಮನನ್ನು ಇಷ್ಟಪಡುತ್ತಿದ್ದರು. ಆದರೆ ಕಾಂಗ್ರೆಸ್‌ಗೆ ಶ್ರೀರಾಮನ ಹೆಸರು ಆಗುತ್ತಿಲ್ಲ. ಆ ಹೆಸರನ್ನೇ ಕಾಂಗ್ರೆಸ್‌ ವಿರೋಧಿಸುತ್ತಿದೆ. ಕಾಂಗ್ರೆಸ್‌ ಹೋರಾಟದ ಮೂಲಕ ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತೇವೆ ಎಂಬ ಸಂದೇಶ ನೀಡುತ್ತಿದೆ ಎಂದರು.

ಹೊಸ ಯೋಜನೆಯಲ್ಲಿ ಪಾರದರ್ಶಕತೆ ತರಲಾಗಿದೆ. ಜಿಯೋ ಟ್ಯಾಗ್‌, ಸ್ಯಾಟಲೈಟ್‌ ಚಿತ್ರ, ಗ್ರಾಮ ಪಂಚಾಯಿತಿಗೆ ಅಧಿಕಾರ, ಗತಿಶಕ್ತಿ ಕಚೇರಿಗೆ ಸಂಪರ್ಕ ಮೊದಲಾದ ಕ್ರಮಗಳ ಮೂಲಕ ಯೋಜನೆಯಲ್ಲಿ ಅಕ್ರಮವನ್ನು ತಡೆಗಟ್ಟಲಾಗಿದೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಯಾವುದೇ ಹಣ ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಹವಾಮಾನ ವೈಪರೀತ್ಯ, ಆಸ್ತಿಯ ಸೃಜನೆ, ಜಲ ಸಂರಕ್ಷಣೆ, ರೈತರ ಕೃಷಿ ಭೂಮಿ ಫಲವತ್ತತೆ ಕಾಪಾಡುವುದು ಮೊದಲಾದ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದರು.

ಹೋಲಿಕೆ ನೋಡಿ

ಹಿಂದಿನ ಯುಪಿಎ ಅವಧಿಯಲ್ಲಿ ಯೋಜನೆಗೆ 2.13 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದರೆ, ಎನ್‌ಡಿಎ ಸರ್ಕಾರ 8.53 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಅಂದರೆ ಅನುದಾನ 4 ಪಟ್ಟು ಅಧಿಕವಾಗಿದೆ. ಹಿಂದೆ 1,660 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದ್ದರೆ, ನಮ್ಮ ಸರ್ಕಾರದ ಅವಧಿಯಲ್ಲಿ 3,210 ಕೋಟಿ ದಿನಗಳನ್ನು ಸೃಜಿಸಲಾಗಿದೆ.

ಹಿಂದೆ ವರ್ಷಕ್ಕೆ 153 ಲಕ್ಷ ಕಾಮಗಾರಿ ನಡೆಯುತ್ತಿದ್ದರೆ, ಈಗ 862 ಲಕ್ಷ ಆಗಿದೆ. ಅಂದರೆ 4 ಪಟ್ಟು ಹೆಚ್ಚಾಗಿದೆ. ಹಿಂದೆ ಆಸ್ತಿ ನಿರ್ಮಾಣ 12% ಆಗಿದ್ದರೆ, ಈಗ 62.95% ಆಗಿದೆ. ವರ್ಷದಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಹಾಗೂ ಪರಿಶಿಷ್ಟ ವರ್ಗ ಮತ್ತು ಗುಡ್ಡಗಾಡು ಪ್ರದೇಶಗಳಿಗೆ 150 ದಿನಗಳಿಗೆ ಹೆಚ್ಚಿಸಲಾಗಿದೆ. ಆದ್ದರಿಂದ ಈ ಹೋಲಿಕೆಯನ್ನು ನೋಡಬೇಕು ಎಂದು ಹೇಳಿದರು.

ಈ ಯೋಜನೆಯ ಮೂಲಕ ಮಹಾತ್ಮ ಗಾಂಧೀಜಿಯವರ ಸ್ವರಾಜ್ಯ ಕನಸಿನಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಹೆಸರು ಬದಲಾವಣೆಯ ನೆಪದಲ್ಲಿ ರಾಜಕೀಯ ಮಾಡುತ್ತಿದೆ. ಆದರೆ ದೇಶದ 600 ಕ್ಕೂ ಹೆಚ್ಚು ಸರ್ಕಾರಿ ಸಂಸ್ಥೆಗಳು ಒಂದೇ ಕುಟುಂಬದ ಹೆಸರಿನಲ್ಲಿ ಇರುವುದಕ್ಕೆ ಮೊದಲು ಕಾಂಗ್ರೆಸ್ ಉತ್ತರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]