ದೊಡ್ಡಬಳ್ಳಾಪುರ; ಹೆಲ್ಮೆಟ್ (Helmets) ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಪೊಲೀಸ್ ಠಾಣೆ ಮುಂಭಾಗದ ರಾಜ್ಯ ಹೆದ್ದಾರಿ ಬಳಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಹಿರಿಯರಿಗೆ, ವಿಶೇಷ ಚೇತನರಿಗೆ, ಹಳ್ಳಿ ಜನರಿಗೆ ಉಚಿತವಾಗಿ ಹೆಲ್ಮೆಟ್ ನೀಡಲಾಯಿತು. ಕೆಲವರಿಗೆ ಶೇ.50 ದರದಲ್ಲಿ ಹೆಲ್ಮೆಟ್ ವಿತರಣೆ ಮಾಡಲಾಯಿತು.
ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್, ಅಪರ ಸಿವಿಲ್ ನ್ಯಾಯಾಧೀಶರಾದ ಪ್ರೀತಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಹೆಲ್ಮೆಟ್ ಅಗತ್ಯವನ್ನು ಜನರಿಗೆ ಜಾಗೃತಿ ಮೂಡಿಸಿದರು.
ದೊಡ್ಡಬಳ್ಳಾಪುರ ನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ಮಾತನಾಡಿ, ಹೆಲ್ಮೆಟ್ ಧರಿಸದೇ ಇತ್ತೀಚಿನ ದಿನಗಳಲ್ಲಿ ತಲೆಗೆ ಪೆಟ್ಟು ಬಿದ್ದು ಅಪಘಾತಗಳಲ್ಲಿ ಸಾವಿಗೀಡಾಗಿದ್ದಾರೆ. ಹಿನ್ನಲೆ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ.
ಹೆಲ್ಮೆಟ್ ಧರಿಸದವರಿಗೆ 500ರೂ. ದಂಡ ವಿಧಿಸಲಾಗುತ್ತಿದೆ. ಹೆಲ್ಮೆಟ್ ಕಡ್ಡಾಯ ನಿಯಮದಿಂದ ಜನ ಸಾಮಾನ್ಯರಿಂದ ಮೆಚ್ಚುಗೆ ಪಡೆದಿದ್ದು ಶೇ.70 ವಾಹನ ಸವಾರರು ಹೆಲ್ಮೆಟ್ ಧರಿಸುತ್ತಿದ್ದು ಇದು ಪೂರ್ಣವಾಗಿ ಜಾರಿಯಾಗಬೇಕಿದೆ ಎಂದರು.
ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷ ಡಿ.ಎಂ.ರೇಣುಕಾ ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಕೆ.ಕನಕ ರಾಜು, ಉಪಾಧ್ಯಕ್ಷ ಅಧ್ಯಕ್ಷ ಜಗನ್ನಾಥ್. ಕೆ, ಖಜಾಂಚಿ ಗೀತಾ.ಆರ್ ಮತ್ತಿತರರಿದ್ದರು.