Enough with the hit and run, put the documents against me before the people: DK Shivakumar challenges H.D. Kumaraswamy

ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ; ಹೆಚ್.ಡಿ.ಕೆಗೆ ಡಿ.ಕೆ. ಶಿವಕುಮಾರ್ ಸವಾಲ್

ಬೆಂಗಳೂರು: ಮನರೇಗಾ ವಿಚಾರವಾಗಿ ಬಹಿರಂಗ ಚರ್ಚೆ ಮಾಡುವ ವಿರೋಧ ಪಕ್ಷಗಳ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ಅವರು ಯಾವಾಗ ಬೇಕಾದರೂ ಯಾವುದೇ ವೇದಿಕೆಯಲ್ಲಾದರೂ ಚರ್ಚೆ ಬರಲಿ, ನಾನು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿದರು.

ಅರಮನೆ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಮನರೇಗಾ ವಿಚಾರವಾಗಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಾವು ಅದನ್ನು ತೀರ್ಮಾನ ಮಾಡುತ್ತೇವೆ. ವಿರೋಧ ಪಕ್ಷದವರು ಚರ್ಚೆಗೆ ಸಿದ್ಧ ಎಂದಿದ್ದಾರೆ. ಅವರು ಯಾವುದೇ ಮಾಧ್ಯಮ ವೇದಿಕೆಯಲ್ಲಾದರೂ, ಯಾವಾಗ ಕರೆದರೂ ನಾನು ಚರ್ಚೆಗೆ ಬರುತ್ತೇನೆ” ಎಂದರು.

ಕುಮಾರಸ್ವಾಮಿ ಚರ್ಚೆಗೆ ಬಂದರೆ ಬಹಳ ಒಳ್ಳೆಯದು, ನಾನು ಸ್ವಾಗತಿಸುವೆ

ಕುಮಾರಸ್ವಾಮಿ ಅವರು ಚರ್ಚೆಗೆ ಬರುತ್ತಾರಂತೆ ಎಂದು ಕೇಳಿದಾಗ, “ನಾನು ಅವರನ್ನು ಸ್ವಾಗತಿಸುತ್ತೇನೆ. ಮೊದಲು ಅವರು ಬಂದರೆ ಬಹಳ ಒಳ್ಳೆಯದು. ಬಿಜೆಪಿ ರಾಜ್ಯ ಅಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಕುಮಾರಸ್ವಾಮಿ ಯಾರು ಬೇಕಾದರೂ ಬರಲಿ. ಅವರ ಪಂಥಾಹ್ವಾನ ಸ್ವೀಕಾರ ಮಾಡಿದ್ದೇನೆ. ಸಾರ್ವಜನಿಕ ವೇದಿಕೆ, ಅಧಿವೇಶನ ಅಥವಾ ಮಾಧ್ಯಮ ವೇದಿಕೆಯಾದರೂ ಸರಿ. ಚರ್ಚೆಗೆ ನಾನು ಸಿದ್ಧ” ಎಂದರು.

ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯುವ ಕುಮಾರಸ್ವಾಮಿ ಮಾತು ಗಂಭೀರವಲ್ಲ

ಸಿದ್ದರಾಮಯ್ಯ ಅವರನ್ನು ಲೀಸ್ಡ್ ಸಿಎಂ ಎಂಬ ಕುಮಾರಸ್ವಾಮಿ ಟೀಕೆ ಬಗ್ಗೆ ಕೇಳಿದಾಗ, ಅವರ ಮಾತನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ. ಮೊದಲಿನಿಂದ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆದು ಹೋಗುವುದನ್ನು ನೋಡಿದ್ದೇವೆ. ಅವರ ಟೀಕೆಗೆ ಸಿದ್ದರಾಮಯ್ಯ ಅವರು ತಿರುಗೇಟು ನೀಡುತ್ತಾರೆ. ಆ ಸಾಮರ್ಥ್ಯ ಅವರಿಗಿದೆ.

ಬಹಿರಂಗ ಚರ್ಚೆಗೆ ಯಾವಾಗ ಸಮಯ ನಿಗದಿ ಮಾಡುತ್ತೀರಾ ಹೇಳಿ. ಇವತ್ತು ಸಂಜೆಯಿಂದಲೇ ಚರ್ಚೆಗೆ ಸಿದ್ಧ. ನರೇಗಾ ವಿಚಾರದಲ್ಲಿ ನನಗೆ ಚರ್ಚೆ ಮಾಡಲು ಯಾವ ತಯಾರಿಯೂ ಬೇಕಾಗಿಲ್ಲ. ಎಲ್ಲಾ ಮಾಹಿತಿಗಳು ನನ್ನ ಬೆರಳ ತುದಿಯಲ್ಲಿವೆ. ಬೇರೆ ಎಲ್ಲೂ ಹೋಗಬೇಕಿಲ್ಲ. ನರೇಗಾ ಯೋಜನೆಯಲ್ಲಿ ನಮ್ಮ ಕನಕಪುರ ತಾಲ್ಲೂಕಿನಲ್ಲಿ ಎಷ್ಟು ಕೆಲಸ ಆಗಿದೆ ಎಂದು ನಮಗೆ ಗೊತ್ತಿದೆ.

ನರೇಗಾ ಯೋಜನೆ ಜಾರಿಯಲ್ಲಿ ಕನಕಪುರ ನಂಬರ್ 1 ಎಂದು ಬಿಜೆಪಿಯ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಈ ವಿಚಾರ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿಜಯೇಂದ್ರ ಅವರಿಗೆ ಗೊತ್ತಿದೆಯೋ ಇಲ್ಲವೋ. ನಮ್ಮ ತಾಲ್ಲೂಕಿನಲ್ಲಿ ಅವ್ಯವಹಾರ ಆಗಿದೆಯೇ ಇಲ್ಲವೇ ಎಂದು ಕೇಂದ್ರ ಸರ್ಕಾರ ಹತ್ತು ತಂಡ ಕಳುಹಿಸಿ ತನಿಖೆ ಮಾಡಿಸಿದೆ ಎಂದು ತಿಳಿಸಿದರು.

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ ನೀಡುತ್ತಾರೆ ಎಂಬ ಬಗ್ಗೆ ಕೇಳಿದಾಗ, “ರಾಜ್ಯ ರಾಜಕಾರಣ ಮಾತ್ರ ಯಾಕೆ ಹಳ್ಳಿಯಿಂದಲೇ ರಾಜಕಾರಣ ಮಾಡಲಿ” ಎಂದು ತಿಳಿದರು.

ಒಕ್ಕಲಿಗ ಉದ್ಯಮಿ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಯುವ ಒಕ್ಕಲಿಗ ಉದ್ಯಮಿಗಳನ್ನು ಸೇರಿಸಿ ಉತ್ತೇಜನ ನೀಡಲಾಗುತ್ತಿದೆ. ಇಲ್ಲಿ ಉದ್ಯಮಿಗಳು ಪರಸ್ಪರ ಸೇರಿದ್ದಾರೆ. ನಾನು ಇಲ್ಲಿರುವ ಉದ್ಯಮಿಗಳ ಬಗ್ಗೆ ಮಾಹಿತಿ ಪಡೆದೆ.ಅವರು ಬಹಳ ಶ್ರಮ ಪಡುತ್ತಿದ್ದಾರೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ. ಅವರಿಗೆ ಶುಭ ಹಾರೈಸುತ್ತಿದ್ದೇನೆ” ಎಂದು ತಿಳಿಸಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!