Yamaha EC-06 electric bike manufactured by River Mobility handed over to M.B. Patil

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಎಂ.ಬಿ. ಪಾಟೀಲ ಹಸ್ತಾಂತರ

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B. Patil) ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ಜ್ವಲ ಅಧ್ಯಾಯವಾಗಿದೆ.

ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ’ ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಈ ಘಟಕದಲ್ಲಿ ವರ್ಷಕ್ಕೆ ಇಂತಹ ಉತ್ಕೃಷ್ಟ ಗುಣಮಟ್ಟದ 2 ಸಾವಿರ ಇ.ವಿ. ಬೈಕ್ ತಯಾರಿಸಲಾಗುವುದು. ಇವಕ್ಕೆ ಇಲ್ಲೇ ತಯಾರಿಸುವ ಬ್ಯಾಟರಿ ಅಳವಡಿಸಲಾಗುವುದು. ಇದು 1 ಲಕ್ಷ ಕಿ.ಮೀ. ವರೆಗೂ ವಾಹನ ಓಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ 10 ವರ್ಷಗಳ ವಾರಂಟಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರಕಾರವು ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಪಾಟೀಲ ಹೇಳಿದ್ದಾರೆ.

ಸಚಿವರು ಇಡೀ ಕಾರ್ಖಾನೆಯಲ್ಲಿ ಓಡಾಡಿ, ಬೈಕ್ ತಯಾರಿಕೆಯನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.

ರಾಜಕೀಯ

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ರೈತನಿಗೆ ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್‌ಐಆರ್

ಕೆರೆಯ ಮಣ್ಣು ಸಾಗಾಟ ಸಂಬಂಧ ರೈತರೊಬ್ಬರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಹರಿಹರ ಕ್ಷೇತ್ರದ ಬಿಜೆಪಿ ಶಾಸಕ (BJP MLA ) ಬಿ.ಪಿ.ಹರೀಶ್ (B.P. Harish) ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ

[ccc_my_favorite_select_button post_id="118506"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!