ಟಾಕ್ಸಿಕ್ ಟೀಸರ್ ರೀಮೇಕ್: ಹೆಚ್‌ಡಿಕೆಗೆ ಮುಜುಗರ ತಂದ ದೊಡ್ಡಬಳ್ಳಾಪುರ ಜೆಡಿಎಸ್ ಕಾರ್ಯಕರ್ತರ ಸಭೆ..!

Toxic teaser remake: Embarrassment for HDK

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನೀರಿಕ್ಷಿತ ‘ಟಾಕ್ಸಿಕ್‌’ (Toxic) ಸಿನಿಮಾದ ಟೀಸರ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ.

ಅದೇ ಮಾದರಿಯಲ್ಲೇ ರಾಜ್ಯ ರಾಜಕಾರಣಕ್ಕೆ ಹೊಂದಿಸಿಕೊಂಡು ಎಐ ವಿಡಿಯೋವನ್ನು ರಚಿಸಲಾಗಿದೆ. ನಿಜವಾದ ಟೀಸರ್ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಅಲ್ಲಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಇರುವಂತೆ ವಿಡಿಯೋ ರಚಿಸಲಾಗಿದೆ.

ಎಐ ಟೀಸರ್‌ನಲ್ಲಿ 2028 ಎಂದು ತೋರಿಸಲಾಗುತ್ತದೆ. 2008ರ ವಿಧಾನಸಭೆ ಚುನಾವಣೆ ಹೊತ್ತಿಗೆ ಎಚ್‌.ಡಿ. ಕುಮಾರಸ್ವಾಮಿಯವರು ರಾಜ್ಯ ರಾಜಕಾರಣಕ್ಕೆ ಹಿಂದಿರುಗುತ್ತಾರೆ ಎಂದು ವಿಡಿಯೋ ಕೊನೆಯಲ್ಲಿ ಬಿಂಬಿಸಲಾಗಿದೆ.

ಹೆಚ್.ಡಿ.ಕೆಗೆ ಮುಜುಗರ ತಂದ ದೊಡ್ಡಬಳ್ಳಾಪುರ ಜೆಡಿಎಸ್ ಮುಖಂಡರ ಕಿತ್ತಾಟ

ಟಾಕ್ಸಿಕ್ ಟೀಸರ್ ರೀಮೇಕ್‌ಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಕೇಳಿ ಬಂದ ಬಣ ಬಡಿದಾಟದ ವಿಡಿಯೋ ಮುಂದಿಟ್ಟು ತಿರುಕನ ಕನಸು ಕಾಣುತ್ತಿರುವವರು ಯಾರು? 140 ಕ್ಷೇತ್ರ ಗೆದ್ದವರೋ, 18 ಕ್ಷೇತ್ರ ಗೆದ್ದವರೋ? ಎಂದು ಪ್ರಶ್ನಿಸಿದೆ.

ಅಚ್ಚರಿ ಎಂದರೆ ಇತ್ತೀಚೆಗೆ ದೊಡ್ಡಬಳ್ಳಾಪುರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿನ ವಿಡಿಯೋವನ್ನು ಕಾಂಗ್ರೆಸ್ ಬಳಸಿಕೊಂಡಿದೆ.

ಇದರಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ವೆಂಕಟೇಶ್ ಎನ್ನುವ ಕಾರ್ಯಕರ್ತ ಮಾತನಾಡಿ, ಒಂದು ವೇಳೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದಲ್ಲಿ ಅವರನ್ನು ಪಕ್ಷದ ಸ್ಥಳೀಯ ಮುಖಂಡರೇ ಸೋಲಿಸುತ್ತಾರೆ. ಅಂತಹ ಕಾಲೆಳೆಯುವ ಮುಖಂಡರು ಸ್ಥಳೀಯ ಜೆಡಿಎಸ್‌ನಲ್ಲಿದ್ದಾರೆ.

ಸದಾ ಒಬ್ಬರ ಕಾಲು ಮತ್ತೊಬ್ಬರು ಎಳೆಯುವುದರಲ್ಲೇ ಮುಳುಗಿರುವ ಸ್ಥಳೀಯ ಜೆಡಿಎಸ್‌ ಮುಖಂಡರಿಂದಾಗಿ ಇಲ್ಲಿರುವವರೆಗೂ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಸ್ಥಳೀಯ ಮುಖಂಡರ ವರ್ತನೆಯಿಂದ ಬೇಸರಗೊಂಡು ಪಕ್ಷದ ಶಾಲು ಕೆಳಗಿಟ್ಟು ಹೋಗುತ್ತಿದ್ದೇನೆ ಎಂದು ವೆಂಕಟೇಶ್ ಕಾರ್ಯಕರ್ತರ ಸಭೆಯಿಂದ ಹೊರನಡೆದಿದ್ದರು‌.

ಈ ವಿಡಿಯೋವನ್ನು ಕಾಂಗ್ರೆಸ್ ಬಳಸಿಕೊಂಡಿದ್ದು, ಕುಮಾರಣ್ಣ ಕನಸಿಗೆ ದೊಡ್ಡಬಳ್ಳಾಪುರ ಜೆಡಿಎಸ್ ಬಣ ಬಡಿದಾಟದ ಕೊಳ್ಳಿ ಇಟ್ಟಿದೆ. ಸ್ವಪ್ರತಿಷ್ಠೆಗೆ ಬಿದ್ದಿರುವ ದೊಡ್ಡಬಳ್ಳಾಪುರ ಜೆಡಿಎಸ್ ಮುಖಂಡರಿಂದಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗೇಲಿಗೆ ಒಳಗಾಗುವಂತಾಗಿದೆ ಎಂಬ ಆಕ್ರೋಶ ಕಾರ್ಯಕರ್ತರಲ್ಲಿ ಕೇಳಿಬಂದಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]