ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ಗ್ರಾಮ ಪಂಚಾಯಿತಿ (Gram Panchayats) ಸದಸ್ಯರ ಅವಧಿಯು ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.
ಈ ಹಿಂದೆ 2020-2025ನೇ ಸಾಲಿಗೆ ರಚಿತವಾಗಿದ್ದ ರಾಜ್ಯದ ಗ್ರಾಮ ಪಂಚಾಯಿತಿಗಳ ಅವಧಿಯು 2026ನೇ ಜನವರಿ, ಫೆಬ್ರವರಿ, ಮಾರ್ಚ್ ಹಾಗೂ ಮುಂದಿನ ತಿಂಗಳುಗಳ ವಿವಿಧ ದಿನಾಂಕಗಳಂದು ಮುಕ್ತಾಯಗೊಳ್ಳುತ್ತಿವೆ.
2026-2031ರ ಅವಧಿಗಾಗಿ ಈ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯುವ ದಿನಾಂಕದವರೆಗೆ ಈ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿಗಳು, ಆಡಳಿತಾಧಿಕಾರಿಗಳನ್ನು ನೇಮಿಸಲು ಅವಕಾಶವಿರುತ್ತದೆ.
ಇದರನ್ವಯ ಜಿಲ್ಲಾಧಿಕಾರಿಗಳು ಸಂಬಂಧ ಪಟ್ಟ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ರಚನೆಯಾಗಿರುವ ಹಾಗೂ ಮುಕ್ತಾಯಗೊಂಡಿರುವ ದಿನಾಂಕಗಳನ್ನು ಪಡೆದು ಪರಿಶೀಲಿಸಿ, ಗ್ರಾಮ ಪಂಚಾಯಿತಿಗಳು ಮುಕ್ತಾಯಗೊಳ್ಳಲಿರುವ ದಿನಾಂಕದ ಮುಂದಿನ ದಿನಾಂಕದಿಂದ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳನ್ನು ನೇಮಿಸಿ ಅಧಿಸೂಚಿಸುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯೆ ಪೀಠಾಧಿಕಾರಿ ಶಿವಕುಮಾರ್ ಸೂಚಿಸಿದ್ದಾರೆ.