ಬೆಂಗಳೂರು: ನರ್ಸ್ ಗಳಿಗೆ ವೇತನ ನೀಡುವುದಕ್ಕೂ ದಿವಾಳಿ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ವಾಗ್ದಾಳಿ ನಡೆಸಿದ್ದಾರೆ.
ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ 30,000 ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ 3 ತಿಂಗಳಿಂದ ಸಂಬಳವಾಗಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದು ಸಿಎಂ ಸಿದ್ದರಾಮಯ್ಯ ಅವರ ತುಂಬಿ ತುಳುಕುತ್ತಿರುವ ಬೊಕ್ಕಸದ ಅಸಲಿ ಹಣೆಬರಹ.
ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೆ, ಕರ್ನಾಟಕ ದಿವಾಳಿಯಾಗಿಲ್ಲ ಎಂದು ಸುಳ್ಳು ಹೇಳುವುದನ್ನು ನಿಲ್ಲಿಸಿ, ಕೂಡಲೇ ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಆರ್ ಅಶೋಕ ಅವರು ಒತ್ತಾಯಿಸಿದ್ದಾರೆ.