BJP leaders offer Rs 10 lakh compensation to Congress Activist's family..!

ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಮುಖಂಡರಿಂದ 10 ಲಕ್ಷ ರೂ. ಪರಿಹಾರ..!

ಬಳ್ಳಾರಿ; ಬಳ್ಳಾರಿಯ ಕಾರ್ಯಕರ್ತನ ಕೊಲೆಗೆ ಕಾಂಗ್ರೆಸ್‌ ಸರ್ಕಾರ (Congress Government) ನ್ಯಾಯ ನೀಡಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ಬಳ್ಳಾರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೊಲೆಗಡುಕ ಕಾಂಗ್ರೆಸ್‌ ಸರ್ಕಾರದ ಬಳಿ ನ್ಯಾಯ ಕೇಳಲು ಬಳ್ಳಾರಿಗೆ ಬಂದಿದ್ದೇವೆ. ಎರಡೂವರೆ ವರ್ಷದಿಂದ ಯಾರು ಆಡಳಿತ ನಡೆಸುತ್ತಿದ್ದಾರೆ ಎಂದು ಗೊತ್ತಾಗಿಲ್ಲ. ಗೃಹ ಸಚಿವರು ಯಾರೆಂದು ಇನ್ನೂ ತಿಳಿದಿಲ್ಲ.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಸಭೆಯಲ್ಲಿ ಉತ್ತರ ಕೊಡಲು ಮಾತ್ರ ಸೀಮಿತವಾಗಿದ್ದಾರೆ. ಉಳಿದಂತೆ ಪ್ರತಿ ಜಿಲ್ಲೆಗಳಲ್ಲಿ ಪ್ರತ್ಯೇಕ ಗೃಹ ಸಚಿವರಿದ್ದಾರೆ. ಕಾಂಗ್ರೆಸ್‌ ನಾಯಕರಿಂದಾಗಿ ಅಮಾಯಕ ಕಾರ್ಯಕರ್ತ ಬಲಿಯಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ ಎಂದರು.

ಜನವರಿ 1 ರಂದು ಎಲ್ಲ ಕಡೆ ಹೊಸ ವರ್ಷದ ಆಚರಣೆಗಾಗಿ ಪಟಾಕಿ ಸಿಡಿಯುತ್ತಿದ್ದರೆ, ಬಳ್ಳಾರಿಯಲ್ಲಿ ಗುಂಡಿನ ಸುರಿಮಳೆ ಆಗುತ್ತಿತ್ತು. ಗುಂಡು ಹಾರಿಸಿದವರು ಯಾರೆಂದು ಪೊಲೀಸರಿಗೆ ಇನ್ನೂ ಗೊತ್ತಿಲ್ಲ. ಜನಾರ್ದನ ರೆಡ್ಡಿ ಅಥವಾ ಶ್ರೀರಾಮುಲು ಕಡೆಯವರಿಂದ ಗುಂಡು ಹಾರಿದ್ದರೆ ಪೊಲೀಸರು ಪ್ರತಿ ಮನೆಗೆ ಬಂದು ಲಾಠಿ ಏಟು ಕೊಟ್ಟು ಎಲ್ಲರನ್ನೂ ಬಂಧಿಸುತ್ತಿದ್ದರು.

ಕಾಂಗ್ರೆಸ್‌ ಕಡೆಯವರೇ ಆಗಿರುವುದರಿಂದ ಕೊಲೆ ಮಾಡಿದವರನ್ನು ಇನ್ನೂ ಬಂಧನ ಮಾಡಿಲ್ಲ. ಗುಂಡು ಹಾರಿಸಿದ್ದ ಗನ್‌ಮ್ಯಾನ್‌ನನ್ನು ಬಂಧಿಸಲು ಪೊಲೀಸರ ಮೇಲೆ ಒತ್ತಡ ಹೇರಲಾಗಿದೆ. ಈ ಬಗ್ಗೆ ನಾನು ವಿಚಾರಿಸಿದಾಗ ಅಚಾನಕ್ಕಾಗಿ ಗುಂಡು ಹಾರಿದೆ ಎಂದು ಪೊಲೀಸರು ಹೇಳಿದ್ದಾರೆ. ಹೀಗೆ ಗುಂಡು ಹಾರಿಸಿದರೆ ಪೊಲೀಸರು ಬಿಟ್ಟುಬಿಡುತ್ತಾರೆಯೇ? ಈಗ ಕೊಲೆಗಾರರು ಬೆಂಗಳೂರಿನಲ್ಲಿ ಆರಾಮವಾಗಿ ಇದ್ದಾರೆ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು.

ಪೊಲೀಸರು ನ್ಯಾಯ ಕೊಡಲು ವಿಫಲರಾಗಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಬಳ್ಳಾರಿಯಲ್ಲಿ ಏನೂ ಅಭಿವೃದ್ಧಿಯಾಗಿಲ್ಲ. ಈಗ ಇಲ್ಲಿ ಪೆಟ್ರೋಲ್‌ ಬಾಂಬ್‌ ದಾಳಿ ನಡೆದಿದೆ. ಅಂತಹ ದಾಳಿ ಮಾಡಿದವರನ್ನು ಬಂಧಿಸಿ ಜೈಲಿಗೆ ಹಾಕಬೇಕಾಗಿತ್ತು. ಜನಾರ್ದನ ರೆಡ್ಡಿಯವರ ಮೇಲೆ ದಾಳಿ ಮಾಡಲು ಬೇರೆ ಬೇರೆ ಪ್ರಯತ್ನ ನಡೆದರೂ ಕ್ರಮ ವಹಿಸಿಲ್ಲ.

ಈ ಪ್ರಕರಣವನ್ನು ಮುಚ್ಚಿಹಾಕಲು ವ್ಯವಸ್ಥಿತ ಪ್ರಯತ್ನ ನಡೆದಿದೆ. ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಅಧಿಕಾರಿಗೆ ಬೆದರಿಕೆ ಹಾಕುತ್ತಾನೆ. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಬಲ ನೀಡುತ್ತಾರೆ. ಕುಕ್ಕರ್‌ ಬಾಂಬ್‌ ಹಾಕುವವರು, ಬೆದರಿಕೆ ಹಾಕುವವರು ಇವರಿಗೆ ಬ್ರದರ್‌ಗಳಾಗಿದ್ದಾರೆ ಎಂದರು.

ಎರಡು ವರ್ಷದ ಬಳಿಕ ಅಧಿಕಾರ ಇರುವುದಿಲ್ಲ ಎಂದು ಗೊತ್ತಾಗಿರುವುದರಿಂದಲೇ ಇಷ್ಟೆಲ್ಲ ಹಲ್ಲೆ ನಡೆಯುತ್ತಿದೆ. ಈ ಬಗ್ಗೆ ವಿಧಾನಸಭೆಯಲ್ಲೂ ಪ್ರಶ್ನೆ ಮಾಡಿ ಹೋರಾಟ ಮಾಡುತ್ತೇವೆ. ಸರ್ಕಾರಕ್ಕೆ ಸಾಧ್ಯವಾದರೆ ಜನರಿಗೆ ಒಳಿತು ಮಾಡಬೇಕು, ಇಲ್ಲವಾದರೆ ತೊಲಗಬೇಕು.

ಪೊಲೀಸರು ಜನರಿಗೆ ರಕ್ಷಣೆ ನೀಡಬೇಕು. ಆದರೆ 7 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪೊಲೀಸರೇ ಭಾಗಿಯಾಗಿದ್ದಾರೆ. ಕರ್ನಾಟಕ ಪೊಲೀಸ್‌ ಎಂದರೆ ದೇಶಕ್ಕೆ ಮಾದರಿಯಾಗಿತ್ತು. ಆ ವ್ಯವಸ್ಥೆಯನ್ನು ಕಾಂಗ್ರೆಸ್‌ ಹಾಳು ಮಾಡಿಬಿಟ್ಟಿದೆ ಎಂದರು.

ಜನರು ನೆನಪಿಸಿಕೊಳ್ಳುವಂತೆ ಪೊಲೀಸರು ಕೆಲಸ ಮಾಡಬೇಕು. ಆದರೆ ಬಳ್ಳಾರಿಯಲ್ಲಿ ಹೊಸ ವರ್ಷದಲ್ಲೇ ಒಂದು ಕುಟುಂಬದಲ್ಲಿ ಸೂತಕ ಕಂಡುಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ನೊಂದವರಿಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ನಾಯಕರಿಂದ ಪರಿಹಾರ

ಮೃತ ರಾಜಶೇಖರ ಅವರ ಬಡ ಕುಟುಂಬದವರನ್ನು ಭೇಟಿ ಮಾಡಿದ್ದೇವೆ. ಅವರ ತಾಯಿಯನ್ನೂ ಭೇಟಿ ಮಾಡಿದ್ದೇವೆ. ಅವರಿಗೆ 10 ಲಕ್ಷ ಪರಿಹಾರ ಕೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬ್ಯಾನರ್ ಕಟ್ಟುವ ವಿಚಾರವಾಗಿ ಜ.1ರಂದು ಶಾಸಕ ಜನಾರ್ದನ ರೆಡ್ಡಿ ನಿವಾಸದ ಎದುರು ನಡೆದ ಘರ್ಷಣೆ ವೇಳೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರರನ್ನು ಕೊಲೆ ಮಾಡಿದ್ದಾರೆ. ಅವರೇ ಗುಂಡು ಹಾರಿಸಿದ್ದರಿಂದ ಪ್ರಾಣ ಕಳಕೊಂಡಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ಬಳ್ಳಾರಿಯ (Bellary) ರಾಜಶೇಖರ್ ಸಾವಿನ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು, ಚೆಲ್ಲಾಟ ಆಡದೇ ಸಮಗ್ರ ತನಿಖೆ ಮಾಡಿಸಬೇಕು. ಬಡ ಕುಟುಂಬಕ್ಕೆ ನ್ಯಾಯ ಸಿಗಲು ಸಿಬಿಐ (CBI) ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!