Investment of Rs 800 crore in Doddaballapur: M.B. Patil

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕೆ.ಎಂ. ಸಂತೋಷ್. ಆರೂಢಿ (ದೊಡ್ಡಬಳ್ಳಾಪುರ): ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (M.B. Patil) ಶನಿವಾರ ತಿಳಿಸಿದ್ದಾರೆ.

ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದೊಂದಿಗೆ ದಾವೋಸ್ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಅವರು ಈ ವಿವರ ಮತ್ತು ಅಂಕಿಅಂಶಗಳನ್ನು ನೀಡಿದರು.

ರಾಜ್ಯಕ್ಕೆ ಹೂಡಿಕೆಯನ್ನು ಆಕರ್ಷಿಸುವ ಪ್ರಯತ್ನಗಳು ನಿರಂತರವಾಗಿ ಸಾಗಿದ್ದು, ಅದು ಕೇವಲ ಹೂಡಿಕೆದಾರರ ಸಮಾವೇಶಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಅವರು ಪ್ರತಿಪಾದಿಸಿದರು.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ತಯಾರಿಕೆ, ಮರುಬಳಕೆ ಇಂಧನ, ಡೇಟಾ ಕೇಂದ್ರಗಳು ಮತ್ತು ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಸ್ಥಾಪನೆ ಈ ವಲಯಗಳಲ್ಲಿ ಹಲವು ಅಗ್ರಗಣ್ಯ ಉದ್ಯಮ ಸಂಸ್ಥೆಗಳು ಈ ಹೂಡಿಕೆ ಮಾಡಲು ಆಸಕ್ತಿ ತೋರಿಸಿವೆ. ಈ ಪ್ರಸ್ತಾವನೆಗಳು ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಉದ್ಯೋಗ ಮಿತ್ರಕ್ಕೆ ಬರಲಿದ್ದು, ಮುಂದಿನ ಹಂತದ ಪ್ರಕ್ರಿಯೆಗಳು ತ್ವರಿತವಾಗಿ ನಡೆಯಲಿವೆ ಎಂದಿದ್ದಾರೆ.

11 ತಿಂಗಳಲ್ಲಿ ಆಕರ್ಷಿಸಿರುವ ಹೊಸ ಬಂಡವಾಳದಲ್ಲಿ ತಯಾರಿಕೆ ವಲಯದಲ್ಲಿ 66,293 ಕೋಟಿ, ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆಗೆ 20,913 ಕೋಟಿ, ಜಿಸಿಸಿ ಕೇಂದ್ರಗಳ ಸ್ಥಾಪನೆಗೆ 12,500 ಕೋಟಿ, ಮತ್ತು ಡೇಟಾ ಸೆಂಟರುಗಳ ಸ್ಥಾಪನೆಗೆ 6,350 ಕೋಟಿ ರೂಪಾಯಿ ಹೂಡಿಕೆ ಆಗಲಿದೆ ಎಂದು ಅವರು ಹೇಳಿದ್ದಾರೆ.

ಟೊಯೋಟಾ ಕಂಪನಿ ಜಿಗಣಿಯ ತನ್ನ ಘಟಕದಲ್ಲಿ ಗ್ಯಾಸೊಲಿನ್ ಮತ್ತು ಹೈಬ್ರಿಡ್ ಎಂಜಿನ್ನುಗಳ ತಯಾರಿಕೆಗೆ 1,330 ಕೋಟಿ ರೂ, ಕ್ಯೂಪೈಎಐ ಕಂಪನಿಯು ಬೆಂಗಳೂರಿನಲ್ಲಿ ತನ್ನ ಕ್ವಾಂಟಂ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ 1,136 ಕೋಟಿ ರೂ, ಎಟಿ&ಎಸ್ ಕಂಪನಿಯು ಎಲೆಕ್ಟ್ರಾನಿಕ್ ಬಿಡಿಭಾಗಗಳ ತಯಾರಿಕೆಗೆ ನಂಜನಗೂಡಿನಲ್ಲಿ 2,850 ಕೋಟಿ ರೂ, ವಿಪ್ರೋ ಹೈಡ್ರಾಲಿಕ್ಸ್ ಕಂಪನಿಯು ಎಲೆಕ್ಟ್ರಾನಿಕ್ಸ್ ಮತ್ತು ಪಿಸಿಬಿ ವಲಯಕ್ಕೆ ಬೇಕಾದ ತಾಮ್ರದ ಲ್ಯಾಮಿನೇಟ್ ತಯಾರಿಕೆಗೆ 499 ಕೋಟಿ ರೂ, ಝೆನ್-ಫೋಲ್ಡ್ ಬಯೋಸೈನ್ಸಸ್ ಲಿಮಿಟೆಡ್ ಔಷಧ ವಿಜ್ಞಾನ ಕ್ಷೇತ್ರಕ್ಕೆ ಬೇಕಾಗುವ ಕಿಣ್ವಗಳ ತಯಾರಿಕೆಗೆ 490 ಕೋಟಿ ರೂ. ಹೂಡಿಕೆ ಮಾಡುತ್ತಿವೆ ಎಂದು ಅವರು ಅಂಕಿಅಂಶ ನೀಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಉಳಿದಂತೆ ಜೆಜೆಜಿ ಏರೋಸ್ಪೇಸ್ ವಿಮಾನಗಳ ಬಿಡಿಭಾಗಗಳ ತಯಾರಿಕೆಗೆ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯಲ್ಲಿ 470 ಕೋಟಿ ರೂ, ಯಸಾಕಾವ, ಇದೇ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುನ್ಮಾನ ಉತ್ಪನ್ನಗಳ ತಯಾರಿಕಾ ಘಟಕ ಸ್ಥಾಪನೆಗೆ 330 ಕೋಟಿ ರೂ ಹೂಡಿಕೆ‌ ಮಾಡಲಾಗಿದೆ.

ಎಸ್ಎಪಿ ದೇವನಹಳ್ಳಿಯಲ್ಲಿ ತನ್ನ ಎರಡನೇ ಘಟಕ ಆರಂಭಕ್ಕೆ 1,960 ಕೋಟಿ ರೂ, ಗೂಗಲ್ ಬೆಂಗಳೂರಿನಲ್ಲಿ 2,500 ಕೋಟಿ ರೂ, ಎನ್.ಟಿ.ಟಿ. ತನ್ನ ಡೇಟಾ ಸೆಂಟರುಗಳ ಸ್ಥಾಪನೆಗೆ ದೇವನಹಳ್ಳಿಯಲ್ಲಿ 4,000 ಕೋಟಿ ರೂ, ಡೇಟಾ ಸಮುದ್ರ ಕಂಪನಿಯು ಮಂಗಳೂರು.

ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರಿನಲ್ಲಿ 1,350 ಕೋಟಿ ರೂ, ಹಳದಿರಾಮ್ಸ್ ಸಮೂಹವು ತುಮಕೂರಿನ ವಸಂತ ನರಸಾಪುರದಲ್ಲಿ ತನ್ನ ಕುರುಕಲು ತಿಂಡಿ ಘಟಕ ಸ್ಥಾಪನೆಗೆ 444 ಕೋಟಿ ರೂ. ಐನಾಕ್ಸ್ ವಿಂಡ್ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ವಿಂಡ್ ಟರ್ಬೈನ್ ತಯಾರಿಕಾ ಘಟಕ ಸ್ಥಾಪನೆಗೆ 305 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿವೆ ಎಂದು ಪಾಟೀಲ ಹೇಳಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!