Rs.20,000 honorarium for surveyors; CM Siddaramaiah

ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ವಾಗ್ದಾಳಿ ನಡೆಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು.

ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದರು.

ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ

ಶ್ರೀರಾಮುಲು, ಜನಾರ್ಧನ ರೆಡ್ಡಿ ಯವರು ಕಾಂಗ್ರೆಸ್ ನಾಯಕರನ್ನು ಏಕವಚನದಲ್ಲಿ ವಾಗ್ದಾಳಿ ಮಾಡಿರುವ ಬಗ್ಗೆ ಮಾತನಾಡಿ ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದರು.

ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ

ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.

ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ

ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು
ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ? ಎಂದು ಸಿಎಂ ಪ್ರಶ್ನಿಸಿದರು.

ವಿಬಿಜಿ ಗ್ರಾಮ್ ಮ್ ಜಿ ರದ್ದು ಮಾಡಲು ಒತ್ತಾಯಿಸಲು ಅಧಿವೇಶನ

ಅಧಿವೇಶನ ಆಯೋಜಿಸಿರುವುದು ರಾಜಕೀಯ ದುರ್ಬಳಕೆ ಎಂದು ಬಿಜೆಪಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ.ಅದಕ್ಕಾಗಿ ಕರೆದಿದ್ದೇವೆ.

MNREGA ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿಜಿ ಗ್ರಾಮ್ ಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು. ಅದರರ್ಥ ರಾಮ್ ಅಲ್ಲ ಎಂದರು.

ಲೋಕಾಯುಕ್ತ ದಾಳಿ: ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ

ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿಯಾಗಿರುವ ಬಗ್ಗೆ ಹಾಗೂ ಅಬಕಾರಿ ಸಚಿವರ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಮಾತಾಡಿ ಈ ಬಗ್ಗೆ ಕಾನೂನಿನ ಕ್ರಮಕ್ಕೆ ನಾವು ಅಡ್ಡಿಬರುವುದಿಲ್ಲ. 40% ಕಮಿಷನ್ ಪಡೆಯುತ್ತಾರೆ ಎಂದು ಗುತ್ತಿಗೆದಾರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಆರೋಪ ಮಾಡಿದ್ದರಲ್ಲ ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!