Doddaballapura: Accidental fire... Haystacks, jackfruit trees burnt to ashes

ದೊಡ್ಡಬಳ್ಳಾಪುರ: ಆಕಸ್ಮಿಕ ಬೆಂಕಿ.. ಹುಲ್ಲಿನ ಬಣವೆ, ಹಲಸಿನ ಮರ ಭಸ್ಮ..!| Video

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಸುಮಾರು 11 ಗಂಟೆ ಸುಮಾರಿಗೆ ಆಕಸ್ಮಿಕ ಬೆಂಕಿ (Accidental fire) ಅವಘಡ ಸಂಭವಿಸಿದೆ.

ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ನಿಮಿಷಗಳಲ್ಲಿ ವ್ಯಾಪಿಸಿಕೊಂಡು, ಗ್ರಾಮದ ರೈತ ವೆಂಕಟಪ್ಪ ಅವರಿಗೆ ಸೇರಿದ ಕೃಷಿಭೂಮಿಯಲ್ಲಿ ಇಟ್ಟುಕೊಂಡಿದ್ದ ಸುಮಾರು ಐದು ಟ್ರಾಕ್ಟರ್ ಲೋಡ್ ರಾಗಿ ಹುಲ್ಲಿನ ಬಣವೆ, ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದ ಹಲಸಿನ ಮರ, ಜೊತೆಗೆ ಟೊಮೋಟೊ ಬೆಳೆಗೆ ಅಳವಡಿಸಲಾಗಿದ್ದ ಅಪಾರ ಮೌಲ್ಯದ ಹನಿ ನೀರಾವರಿ ಪೈಪುಗಳು ಹಾಗೂ ಟೊಮೇಟೊ ಕಡ್ಡಿಗಳು ಬೆಂಕಿಗಾಹುತಿಯಾಗಿವೆ.

ಈ ಅವಘಡದಿಂದ ರೈತರಿಗೆ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ನೀರು, ಮಣ್ಣು ಬಳಸಿ ಬೆಂಕಿ ನಂದಿಸಲು ಯತ್ನಿಸಿದರೂ, ಬಿಸಿಲಿನ ತೀವ್ರತೆ, ಒಣಹವಾಮಾನ ಹಾಗೂ ಗಾಳಿಯ ವೇಗದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಿಸಿಕೊಂಡಿದೆ.

ಪರಿಸ್ಥಿತಿ ಕೈ ಮೀರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಸುದ್ದಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರೂ, ಅಷ್ಟರೊಳಗೆ ಬಹುತೇಕ ಕೃಷಿ ಸಾಮಗ್ರಿಗಳು ಭಸ್ಮವಾಗಿದ್ದರಿಂದ ನಷ್ಟ ತಪ್ಪಿಸಲು ಸಾಧ್ಯವಾಗಲಿಲ್ಲ. ನಂತರ ಬೆಂಕಿ ಇನ್ನಷ್ಟು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು.

ರೈತ ವೆಂಕಟಪ್ಪ ಅವರ ಕುಟುಂಬಕ್ಕೆ ರಾಗಿ ಹುಲ್ಲು, ಹಲಸಿನ ಕಾಯಿ ಹಾಗೂ ಟೊಮೇಟೊ ಬೆಳೆ ಮುಖ್ಯ ಆದಾಯದ ಮೂಲವಾಗಿತ್ತು. ಇಂತಹ ಸಂದರ್ಭದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವರ ಜೀವನಾಧಾರಕ್ಕೆ ಭಾರೀ ಹೊಡೆತ ನೀಡಿದೆ. ಮುಂದಿನ ಬೆಳೆಗಾಗಿ ಬಳಸಲು ಸಂಗ್ರಹಿಸಿದ್ದ ಹುಲ್ಲು ಹಾಗೂ ನೀರಾವರಿ ವ್ಯವಸ್ಥೆ ನಾಶವಾದುದರಿಂದ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಗ್ರಾಮಸ್ಥರು ಹಾಗೂ ರೈತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಯುವ ಮುಖಂಡ ಉದಯ ಆರಾಧ್ಯ ಮಾತನಾಡಿ, ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ನಷ್ಟಕ್ಕೆ ಒಳಗಾದ ರೈತ ವೆಂಕಟಪ್ಪ ಅವರಿಗೆ ತಕ್ಷಣ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು, ಜೊತೆಗೆ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ಮೊತ್ತ ಘೋಷಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿ ಮಾಡಿದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!