Two and a half thousand crores of bribery is illegal in the Excise Department.. R. Ashoka alleges against the minister

ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ಲಂಚ ಅಕ್ರಮ.. ಸಚಿವರ ಬಗ್ಗೆ ಆರ್‌.ಅಶೋಕ ಆರೋಪ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಎರಡೂವರೆ ಸಾವಿರ ಕೋಟಿ ರೂ. ಲಂಚ ವಹಿವಾಟು ನಡೆದಿದ್ದು, ಈ ಹಣವನ್ನು ಚುನಾವಣೆಗೆ ಬಳಸಿಕೊಳ್ಳಲಾಗುತ್ತಿದೆ. ಆದ್ದರಿಂದ ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದಿಂದ ಇಲಾಖೆಗಳಿಗೆ ಆದಾಯ ಸಂಗ್ರಹದ ಗುರಿ ನೀಡಲಾಗುತ್ತದೆ. ಆದರೆ ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್‌ಗಳನ್ನು ಹರಾಜು ಹಾಕಲಾಗುತ್ತಿದೆ. ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್‌ ನಾಯಕ್‌ 25 ಲಕ್ಷ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯನವರೇ ನೇರ ಹೊಣೆ.

ವಿಬಿ ಜಿ ರಾಮ್‌ ಜಿ ಯೋಜನೆ ವಿರೋಧಿಸಲು ಮಹಾತ್ಮ ಗಾಂಧೀಜಿಯನ್ನು ಕಾಂಗ್ರೆಸ್‌ ನಾಯಕರು ಬಳಸಿಕೊಂಡು ಅಧಿವೇಶನ ನಡೆಸುತ್ತಿದ್ದಾರೆ. ಇದೇ ಸರ್ಕಾರ ಇಡೀ ರಾಜ್ಯವನ್ನು ನಶೆಯಲ್ಲಿ ಮುಳುಗಿಸಿ ಗಾಂಧೀಜಿಯ ಆಶಯವನ್ನು ನಾಶ ಮಾಡಿದ್ದಾರೆ. ಅಬಕಾರಿ ಇಲಾಖೆಯ ಹಗರಣದ ಹಿನ್ನೆಲೆಯಲ್ಲಿ ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡದೇ ಇದ್ದರೆ ಮುಖ್ಯಮಂತ್ರಿಯೇ ಕಾರಣ ಎಂದು ಭಾವಿಸಬೇಕಾಗುತ್ತದೆ ಎಂದರು.

ಸಿಎಲ್‌ 7 ಗೆ 1.25 ಕೋಟಿ ರೂ. ಲಂಚ ನಿಗದಿಯಾಗಿದೆ. ಅಂದರೆ 750 ಲೈಸೆನ್ಸ್‌ ನೀಡಲು 1,225 ಕೋಟಿ ರೂ. ಲಂಚ ಪಡೆಯಲಾಗುತ್ತದೆ. ಸಿಎಲ್‌ 2 ಗೆ ಒಂದೂವರೆ ಕೋಟಿ ನಿಗದಿಯಾಗಿದ್ದು, 650 ಲೈಸೆನ್ಸ್‌ಗೆ 925 ಕೋಟಿ ರೂ. ಲಂಚ ಪಡೆಯಲಾಗುತ್ತದೆ. ಸಿಎಲ್‌ 9 ಗೆ ಒಟ್ಟು 92 ಕೋಟಿ ರೂ. ಲಂಚ ಪಡೆಯಲಾಗುತ್ತದೆ.

ಮಿನಿ ಬ್ರಿವರಿ ಲೈಸೆನ್ಸ್‌ಗೆ ಎರಡೂವರೆ ಕೋಟಿ ರೂ. ಆಗುತ್ತದೆ. ಎಲ್ಲ ಸೇರಿ ಎರಡೂವರೆ ಸಾವಿರ ಕೋಟಿ ರೂ. ಲಂಚವಾಗುತ್ತದೆ. ಇದನ್ನು ಅಸ್ಸಾಂ ಚುನಾವಣೆಗೆ ಕಳುಹಿಸುತ್ತಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ಕೂಡ ಬಂದಿದ್ದು, ಇದರಲ್ಲಿ ಸಚಿವರು ಅಥವಾ ಅವರ ಮಗನಿಗೆ ಹಣ ಕೊಡಬೇಕೆಂದು ತಿಳಿಸಲಾಗಿದೆ. ಇದೇ ಇವರಿಗೆ ಗಾಂಧೀಜಿ ಮೇಲಿರುವ ಪ್ರೀತಿ. ಅಬಕಾರಿ ಇಲಾಖೆಯ ಹಣ ಮಹಾರಾಷ್ಟ್ರ ಚುನಾವಣೆಗೆ ಬಳಕೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೂಡ ಹೇಳಿದ್ದಾರೆ ಎಂದರು.

ಗೃಹಲಕ್ಷ್ಮಿ ಯೋಜನೆಯಲ್ಲಿ 5,000 ಕೋಟಿ ರೂ., ವಾಲ್ಮೀಕಿ ನಿಗಮದ ಹಣ, ಕೋಗಿಲು ಕ್ರಾಸ್‌ನ 600 ಕೋಟಿ ರೂ. ಮೌಲ್ಯದ ಜಮೀನು ಹೀಗೆ ಎಲ್ಲ ಅಕ್ರಮಗಳನ್ನು ಬಿಜೆಪಿ ಬಯಲಿಗೆಳೆದು ಹಣವನ್ನು ಉಳಿಸಿದೆ. ಈಗ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಹೋರಾಟವನ್ನೂ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದರು.

ಡ್ರಗ್‌ ಮಾಫಿಯಾ

ಡ್ರಗ್‌ ಮಾಫಿಯಾ ಬಗ್ಗೆ ನಾನು ಅಧಿವೇಶನದಲ್ಲಿ ಮಾತಾಡಿದಾಗ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಉತ್ತರ ಕೊಟ್ಟಿದ್ದರು. ನಿನ್ನೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದಾಗ, ಪೊಲೀಸ್‌ ಇಲಾಖೆಯ ವೈಫಲ್ಯಗಳನ್ನು ಬಿಚ್ಚಿಟ್ಟಿದ್ದಾರೆ.

ಮಹಾರಾಷ್ಟ್ರದ ಪೊಲೀಸರು ಇಲ್ಲಿಗೆ ಬಂದಿರುವುದರಿಂದ ನೀವೇನು ಮಾಡುತ್ತಿದ್ದೀರಿ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. ಡ್ರಗ್‌ ಮಾಫಿಯಾದಲ್ಲಿ 180 ಜನರಿದ್ದಾರೆ. ಜೈಲುಗಳಲ್ಲೂ ಡ್ರಗ್‌ ಮಾಫಿಯಾ ನಡೆಯುತ್ತಿದ್ದು, ಪೊಲೀಸರು ಕೂಡ ಭಾಗಿಯಾಗಿದ್ದಾರೆ. ಏಕೆಂದರೆ ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ನ ಕಚೇರಿಗಳಾಗಿವೆ. ಹಣ ಕೊಟ್ಟರೆ ಮಾತ್ರ ಆಯಕಟ್ಟಿನ ಜಾಗ ನೀಡಲಾಗುತ್ತದೆ ಎಂದರು.

ಶಿಡ್ಲಘಟ್ಟದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಇನ್ನೂ ಬಂಧಿಸಿಲ್ಲ. ನಾನು ಈ ಬಗ್ಗೆ ಸರ್ಕಾರಕ್ಕೆ ಆಗ್ರಹ ಮಾಡಿದರೂ ಪೊಲೀಸರು ಕ್ರಮ ವಹಿಸಿಲ್ಲ. ಈಗ ಮುಖ್ಯಮಂತ್ರಿಗಳ ಕ್ಷೇತ್ರ ವರುಣಾದಲ್ಲಿ ಗ್ರಾಮದ ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಇದೇ ರೀತಿ ಎಲ್ಲ ಜಿಲ್ಲೆಗಳಲ್ಲೂ ಸಮಸ್ಯೆ ಇದೆ.

ಕಾಂಗ್ರೆಸ್‌ ಶಾಸಕರು ಹಾಗೂ ಪುಂಡರು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಾರೆ. ಸರ್ಕಾರ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕಿದೆ. ಮುಖ್ಯಮಂತ್ರಿಗೆ ಆಡಳಿತದ ಹಿಡಿತ ತಪ್ಪಿಹೋಗಿದೆ. ಈ ಸರ್ಕಾರದ ಪಾರ್ಶ್ವವಾಯು ಪೀಡಿತ ಸ್ಥಿತಿಯಲ್ಲಿದೆ ಎಂದರು.

ಬೀದಿ ದಾಸಯ್ಯನನ್ನು ಸಿಎಂ ಮಾಡಿದರೂ ಒಪ್ಪುತ್ತೇವೆಂದು ಸಚಿವ ಜಮೀರ್‌ ಹೇಳಿದ್ದಾರೆ. ಕೆಂಗಲ್‌ ಹನುಮಂತಯ್ಯನವರಂತಹ ಧೀಮಂತರು ಕುಳಿತಿದ್ದ ಹುದ್ದೆಯ ಬಗ್ಗೆ ಸಚಿವರೇ ಕೀಳಾಗಿ ಮಾತಾಡುತ್ತಾರೆ. ಅಂದರೆ ಜನರಿಂದ ಆಯ್ಕೆಯಾದ ಶಾಸಕರಿಗೆ ಯಾವುದೇ ಬೆಲೆ ಇಲ್ಲ ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!