ಬೆಂ.ಗ್ರಾ.ಜಿಲ್ಲೆ: ನವದೆಹಲಿಯಲ್ಲಿ ನಡೆಯಲಿರುವ 2026ನೇ ಸಾಲಿನ ಗಣರಾಜ್ಯೋತ್ಸವ ಕರ್ತವ್ಯ ಪಥ(ಪರೇಡ್)ದ ವೀಕ್ಷಣೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗರಿಕೇನಹಳ್ಳಿ ನಿವಾಸಿ ಆಶಾ. ಆರ್ (Asha.R) ಅವರನ್ನು ನಿಯೋಜನೆ ಮಾಡಲಾಗಿದೆ.
ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆ ನೀಡಿದ್ದು, ಸ್ವಸಹಾಯ ಗುಂಪುಗಳ ಸದಸ್ಯರನ್ನು ವಿಶೇಷ ಅತಿಥಿಗಳಾಗಿ ನಿಯೋಜನೆ ಮಾಡುವ ಸಂಬಂಧ ಜಿಲ್ಲೆಯಿಂದ ದೊಡ್ಡಬಳ್ಳಾಪುರದ
ಆರೂಡಿ ಗ್ರಾಮಪಂಚಾಯಿತಿಯ ಗರಿಕೇಹಳ್ಳಿ ಗ್ರಾಮದ ಸ್ವಸಹಾಯ ಗುಂಪಿನ ಸದಸ್ಯರಾದ ಆಶಾ ಆರ್ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.