Bengaluru district level Cereal walk launched

ಬೆಂ.ಗ್ರಾ.ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆಗೆ ದೇವನಹಳ್ಳಿಯಲ್ಲಿ ಚಾಲನೆ

ಬೆಂ.ಗ್ರಾ.ಜಿಲ್ಲೆ: ಇಂದಿನ ಜೀವನ ಶೈಲಿಯಿಂದ ನಾನಾ ಕಾಯಿಲೆಗಳು ಬರುತ್ತಿವೆ. ನಮ್ಮ ಆರೋಗ್ಯ ಸಮತೋಲನ ಕಾಪಾಡಿಕೊಳ್ಳಲು ಹಳೆ ಪದ್ದತಿಯ ಸಿರಿಧಾನ್ಯಗಳ ಆಹಾರ ಸೇವನೆಗೆ ಮರಳಬೇಕಿದ್ದು, ದಿನಂಪ್ರತಿ ನವಣೆ, ಸಜ್ಜೆ, ಉದ್ದು, ರಾಗಿ ಮತ್ತು ಜೋಳದಂತ ಸಿರಿಧಾನ್ಯ ಆಹಾರ ಸೇವನೆ ರೂಡಿಸಿಕೊಳ್ಳುವದು ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ (K.H. Muniyappa) ಅವರು ಹೇಳಿದರು.

ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಆಯೋಜಿಸಲಾದ “ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ” ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತದಲ್ಲಿ ಹಿಂದಿನ ಕಾಲದ ಪೂರ್ವಜರು 75 ಭಾಗದಷ್ಟು ಕೃಷಿ ಕೆಲಸದಲ್ಲಿ ತೊಡಗಿ, ಸಿರಿಧಾನ್ಯ ಪದಾರ್ಥ ಹಾಗೂ ಹಣ್ಣು-ಹಂಪಲು ಸೇವಿಸುತ್ತಾ, ಗಟ್ಟಿ ಶರೀರದಿಂದ 100 ವರ್ಷ ಬಾಳುತ್ತಿದ್ದರು. ಅವರ ಸರಿಯಾದ ಆಹಾರ ಪದ್ಧತಿಯಿಂದ ಸಮತೋಲನ ಜೀವನ ನಡೆಸಲು ಸಾಧ್ಯವಾಗುತ್ತಿತ್ತು ಎಂದರು.

ಇಂದಿನ ಪೀಳಿಗೆ ಫಾಸ್ಟ್‌ ಫುಡ್‌ ಸೇವನೆಯಿಂದ ಆರೋಗ್ಯ ಕುಗ್ಗುತ್ತಿದೆ. ಅವರಲ್ಲಿ ಸಿರಿಧಾನ್ಯ ಆಹಾರ ಸೇವನೆ ಬಗ್ಗೆ ಜಾಗೃತಿ ಅತ್ಯವಶ್ಯವಾಗಿದೆ. ಜತೆಗೆ ಬರ್ತ್ ಡೇ ಸಮಯದಲ್ಲಿ ಮಕ್ಕಳಿಗೆ ಕೇಕ್ ಬದಲು ಸಿರಿಧಾನ್ಯ, ಹಾಲು, ರಾಗಿ ಮೀಲ್ಟ್ ಸೇವನೆಗೆ ನೀಡಬೇಕು. ಇದರಿಂದ ಮಕ್ಕಳ ರೋಗನಿರೋಧಕ ಶಕ್ತಿ ವೃದ್ಧಿಗೂ ಸಹಕಾರಿಯಾಗುತ್ತದೆ. ಇದರ ಅರಿವು ಮೂಡಿಸುವ ಜವಬ್ದಾರಿ ಪ್ರತಿಯೊಬ್ಬ ಪಾಲಕರ ಮೇಲಿದೆ ಎಂದು ಸಚಿವರು ಕಿವಿ ಮಾತು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆರೋಗ್ಯ ವೃದ್ಧಿಸುವ ಸಿರಿಧಾನ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹಿಸುತ್ತಿದೆ ಎಂದರು.

ದೇವನಹಳ್ಳಿ ಟೌನ್ ಕ್ರೀಡಾಂಗಣದಿಂದ ನಗರದ ವಿವಿಧ ರಸ್ತೆಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಿರಿಧಾನ್ಯ ಜಾಗೃತಿ ನಡಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಬಿ.ರಾಜಣ್ಣ, ತಾಲ್ಲೂಕು ಅಧ್ಯಕ್ಷರಾದ ಸಿ.ಜಗನ್ನಾಥ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಸಹಾಯಕ ನಿರ್ದೇಶಕರಾದ ಶಶಿಲಮ್ಮ, ಕೆಪಿಸಿಸಿ ಸದಸ್ಯರಾದ ಚಿನ್ನಪ್ಪ, ತಹಶೀಲ್ದಾರ್ ಅನಿಲ್ ಕುಮಾರ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್. ರವಿಕುಮಾರ್ ಸೇರಿ ಕೃಷಿಕ ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!