ದೊಡ್ಡಬಳ್ಳಾಪುರ: ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ, ಸಚಿವ ಈಶ್ವರ್ ಖಂಡ್ರೆ (ishwar khandre) ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಖಿಲ ಭಾರತ ವೀರಶೈವ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷ ಎನ್ನಿಸಿಕೊಂಡಿದ್ದಾರೆ.
ಶುಭಾಶಯ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಈಶ್ವರ ಖಂಡ್ರೆಯವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ಅಧ್ಯಕ್ಷ ಲೋಕೇಶ್ ನಾಗಸಂದ್ರ ಅವರು ಶುಭಾಶಯ ಕೋರಿದ್ದಾರೆ.