ದೊಡ್ಡಬಳ್ಳಾಪುರ: ಡಾ. ಶಿವಕುಮಾರ ಮಹಾಸ್ವಾಮಿಜಿಯವರ (Dr. Shivakumara Swamiji) ಪುಣ್ಯಸ್ಮರಣೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯದ ಎಲ್ಲೆಡೆ ದಾಸೋಹ ದಿನವನ್ನಾಗಿ ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಶಿವಕುಮಾರ ಮಹಾಸ್ವಾಮಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಪುಷ್ಪ ನಮನ ಸಲ್ಲಿಸಲಾಯಿತು.
ಬಳಿಕ ದಾಸೋಹ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ, ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಉಪವಿಭಾಗಾಧಿಕಾರಿ ದುರ್ಗಾಶ್ರೀ, ವೀರಶೈವ ಸಮಾಜ ಅಧ್ಯಕ್ಷ ಸೋಮರುದ್ರ ಶರ್ಮ, ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸುಜಯ್, ಮಹಾ ಸಭಾ ಯುವಘಟಕ ಜಿಲ್ಲಾಧ್ಯಕ್ಷ ಲೋಕೇಶ್ ನಾಗಸಂದ್ರ, ಮಹಾಸಭಾ ಜಿಲ್ಲಾ ಉಪಾಧ್ಯಕ್ಷರಾದ ಲತಾಆರಾಧ್ಯ, ಮಹಾಸಭಾ ಪದಾಧಿಕಾರಿಗಳು, ಮುಖಂಡರಾದ ಸುನೀಲ್, ಪುಟ್ಟಬಸವರಾಜು, ಶಿವಾನಂದಪ್ಪ, ಮಹಾಸಭಾ ಜಿಲ್ಲಾ ನಿರ್ದೆಶಕರಾದ ಜಗದೀಶ್ ನೆಲಮಂಗಲ, ಮಂಜುನಾಥ್, ಸುಂದರೇಶ್, ಪ್ರಭಾಕರ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಾಪಣ್ಣ ಮತ್ತಿತರರಿದ್ದರು.