Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರ ಆರೋಗ್ಯದ ಮೇಲೆ ನಿಗಾ ಇರಲಿ

Astrology: ಗುರುವಾರ, ಜನವರಿ 22, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರು ವುದು. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ

ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. (ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕಟಕ ರಾಶಿ

ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.
ಶತ್ರು ಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ

ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ನಿಮ್ಮ ಇಷ್ಟಾರ್ಥಗಳು ಈಡೇರಬಹುದು. ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ

ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆ ಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಚತುರ್ಥಿ
ನಕ್ಷತ್ರ: ಶತಭಿಷ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!