Anarchy created in the state due to internal Congress infighting; B.Y. Vijayendra

ಕಾಂಗ್ರೆಸ್ ಸರಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕೆಲಸ: ಬಿ.ವೈ. ವಿಜಯೇಂದ್ರ ಆಕ್ಷೇಪ

ಬೆಂಗಳೂರು: ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನವನ್ನು ಬಳಸುತ್ತಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆಕ್ಷೇಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾನ್ಯ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇವತ್ತು ಮಾತನಾಡಿದ್ದಾರೆ. ಆದರೆ, ಸದನದ ಒಳಗಡೆ ಗೌರವಾನ್ವಿತ ರಾಜ್ಯಪಾಲರಿಗೆ ಅಗೌರವ ಸೂಚಿಸುವ ಕೆಲಸವನ್ನು ಆಡಳಿತ ಪಕ್ಷದವರು ಮಾಡಿದ್ದು ಖಂಡನಾರ್ಹ ಎಂದು ತಿಳಿಸಿದರು.

ಈ ಕಾಂಗ್ರೆಸ್ ಸರಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ಕೆಲಸ ಮಾಡಿದೆ. ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ದಾರಿಯಲ್ಲಿ ರಾಜ್ಯ ಸರಕಾರ ಸಾಗುತ್ತಿದೆ. ಸದನದ ದುರ್ಬಳಕೆಯನ್ನೂ ರಾಜ್ಯ ಸರಕಾರ ಮಾಡಲು ಹೊರಟಿರುವುದು ದುರ್ದೈವ ಎಂದು ಟೀಕಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕೇಂದ್ರ ಸರಕಾರವು ಮನ್ ರೇಗಾದಲ್ಲಿ ವಿಬಿ ಜಿ ರಾಮ್ ಜಿ ಎಂದು ಕೆಲವು ಮಾರ್ಪಾಡುಗಳನ್ನು ಮಾಡಿದ್ದಾರೆ. ಸುಧಾರಣೆಗಳನ್ನು ತಂದಿದ್ದಾರೆ. ಅದರ ವಿರುದ್ಧ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಅಪಪ್ರಚಾರಗಳನ್ನು ಪ್ರಾರಂಭಿಸಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪುಡಾರಿಗಳಿಗಾಗಿ ಯೋಜನೆ ಇದಲ್ಲ

ಪಾಪ, ಕಾಂಗ್ರೆಸ್ಸಿನವರು ಗೊಂದಲದಲ್ಲಿದ್ದಾರೆ. ಗ್ರಾಮೀಣ ಭಾಗದ ಬಡವರು, ಸಣ್ಣ ರೈತರು, ಕಾರ್ಮಿಕರಿಗೆ ಅನುಕೂಲ ಆಗಲೆಂದು ಉದ್ಯೋಗ ಖಾತ್ರಿ ಯೋಜನೆ ಜಾರಿಯಾಗಿದೆ. ಕಾಂಗ್ರೆಸ್ ಪುಡಾರಿಗಳಿಗಾಗಿ ಈ ಯೋಜನೆ ಅಲ್ಲ ಎಂದು ಬಿ.ವೈ.ವಿಜಯೇಂದ್ರ ಅವರು ಕಿವಿಮಾತು ಹೇಳಿದರು.

ಕಾಂಗ್ರೆಸ್ ಪಕ್ಷವು ಉದ್ಯೋಗ ಖಾತ್ರಿ ಯೋಜನೆ ಇರುವುದು ಕಾಂಗ್ರೆಸ್ ಪುಡಾರಿಗಳಿಗಾಗಿ ಎಂದು ಭಾವಿಸಿದಂತಿದೆ. ನರೇಂದ್ರ ಮೋದಿ ಜೀಯವರು ಸಾಕಷ್ಟು ಸುಧಾರಣೆಗಳೊಂದಿಗೆ ಕಾಯ್ದೆ ತಂದಿದ್ದು, ಅದನ್ನು ವಿರೋಧಿಸಿ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಅದರ ಮುಂದುವರೆದ ಭಾಗವಾಗಿ ಮಾನ್ಯ ರಾಜ್ಯಪಾಲರ ಮೂಲಕ ಕೇಂದ್ರ ಸರಕಾರದ ವಿರುದ್ಧ ರಾಜ್ಯದ ಜನರನ್ನು ಎತ್ತಿಕಟ್ಟುವಂಥ ಕುತಂತ್ರ, ಷಡ್ಯಂತ್ರಕ್ಕೆ ಕೈ ಹಾಕಿದ್ದರು. ಅದಕ್ಕೆ ಗೌರವಾನ್ವಿತ ರಾಜ್ಯಪಾಲರು ಅವಕಾಶ ನೀಡಿಲ್ಲ ಎಂದು ವಿಶ್ಲೇಷಿಸಿದರು.

ನಡವಳಿಕೆ ಸುಧಾರಣೆ ಮಾಡಿಕೊಳ್ಳದಿದ್ದರೆ..
ಕಾಂಗ್ರೆಸ್ ಸರಕಾರಕ್ಕೆ 140 ಶಾಸಕರ ಬೆಂಬಲ ಇದೆ ಎಂಬ ಕಾರಣಕ್ಕೆ ದಬ್ಬಾಳಿಕೆ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ಸರಕಾರವು ತಮ್ಮ ನಡವಳಿಕೆ ಸರಿ ಮಾಡಿಕೊಳ್ಳದೇ ಹೋದರೆ, ಒಕ್ಕೂಟದ ವ್ಯವಸ್ಥೆಗೆ ಕಲ್ಲು ಹಾಕುವ ಕೆಲಸವನ್ನು ಸುಧಾರಣೆ ಮಾಡಿಕೊಳ್ಳದೇ ಇದ್ದರೆ 140 ಶಾಸಕರಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ 40ಕ್ಕೆ ಇಳಿಸಬೇಕೆಂದು ಈಗಾಗಲೇ ರಾಜ್ಯದ ಜನರು ಕಾಯುತ್ತಿದ್ದಾರೆ. ಆ ದಿನಗಳೂ ದೂರ ಉಳಿದಿಲ್ಲ ಎಂದು ಎಚ್ಚರಿಸಿದರು. ಇದನ್ನು ಅರ್ಥ ಮಾಡಿಕೊಂಡು ಸರಕಾರವು ಸರಿಯಾದ ದಾರಿಯಲ್ಲಿ ಹೋಗಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಗೌರವ ಉಳಿಸಬೇಕೆಂದು ಅವರು ಆಗ್ರಹಿಸಿದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!