Governor's move is an insult to the assembly of people's representatives: CM Siddaramaiah

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

MGNREGA ವನ್ನು ವಿಬಿಜಿರಾಮ್ ಜಿ ಬದಲಾವಣೆ- ಸರ್ಕಾರದ ತೀವ್ರ ವಿರೋಧ

ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ.

ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. MGNREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿರಾಮ್ ಜಿ ( ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ ಎಂದರು.

ಕೆಲಸದ ಹಕ್ಕು ಖಾತ್ರಿಪಡಿಸುವ MGNREGA

ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮಾ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ, ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು.

ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗುತ್ತದೆ ಎಂದರು.

ವಿಬಿ ಜಿ ರಾಮ್ ಜಿ ವರ್ಷ ಪೂರ್ತಿ ಕೆಲಸದ ಭರವಸೆ ಇಲ್ಲ

ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ.

ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೇ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ ಎಂದು ವಿವರಿಸಿದರು.

ಹೊಸ ಕಾಯ್ದೆಗೆ ವಿರೋಧಪಕ್ಷದವರಿಂದ ಉದ್ದೇಶಪೂರ್ವಕ ಸಮರ್ಥನೆ

ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಯಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು ಎಂದರು.

ಹೊಸ ಕಾಯ್ದೆ ರದ್ದುಗೊಳ್ಳಲೇಬೇಕು

MGNREGA ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದೇ ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

MGNREGA ಮರುಸ್ಥಾಪನೆ ಮಾಡುವವರೆಗೆ ನಿರಂತರವಾಗಿ ನಮ್ಮ ಹೋರಾಟ ನಡೆಯಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದರು.

ರಾಜ್ಯಪಾಲರ ನಡೆ ಸಂವಿಧಾನದ ಉಲ್ಲಂಘನೆ

ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ.

ಸಂವಿಧಾನದ ಕಲಂ 176 ಮತ್ತು 163 ರಂತೆ ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ ಎಂದರು.

ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ

ಇದನ್ನು ನಮ್ಮ ಪಕ್ಷ ಮತ್ತು ಸರ್ಕಾರ , ಶಾಸಕರು, ಎಂಎಲ್ ಸಿ ಪ್ರತಿಭಟನೆ ಮಾಡುತ್ತದೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ ಎಂದರು.

ಚರ್ಚೆಯ ನಂತರ ಮುಂದಿನ ನಿರ್ಣಯ

ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್ ಸಿಗಳಿಗೆ ವಿತರಿಸಲಾಗಿದೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮೊಕ್ಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!