ದೊಡ್ಡಬಳ್ಳಾಪುರ: ಹಾಸನದಲ್ಲಿ ಇದೇ ತಿಂಗಳ 24 ರಂದು ನಡೆಯಲಿರುವ ಜೆಡಿಎಸ್ ಸಮಾವೇಶಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ಪದಾಧಿಕಾರಿಗಳು ಹಾಗೂ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಬಿ.ಮುನೇಗೌಡ (B. MuneGowda) ಮನವಿ ಮಾಡಿದ್ದಾರೆ.
ಈ ಕುರಿತಂತೆ ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, 2028ರ ವಿಧಾನಸಭೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಹಾಸನದ ಸಮಾವೇಶದ ಮೂಲಕ ಜನತಾದಳದ ಸಂಘಟನೆಗೆ ಚಾಲನೆ ಕೊಟ್ಟು ಸಂದೇಶ ಕೊಡುವ ಕಾರ್ಯಕ್ರಮ ಇದಾಗಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚುತ್ತಿರುವ ಆಂತರಿಕ ಕಚ್ಚಾಟ ಕಾರಣದಿಂದ ರಾಜ್ಯದ ಅಭಿವೃದ್ಧಿ ಸೊರಗುತ್ತಿದೆ. ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಸಿಎಂ ಕುರ್ಚಿ ಬಗ್ಗೆ ಮಾತನಾಡಲು ನನಗೆ ಇಷ್ಟ ಇಲ್ಲ. ಆದರೆ, ಇಡೀ ದೇಶದಲ್ಲಿ ಇಂತಹ ಕೆಟ್ಟ ಸರ್ಕಾರ ಇನ್ನೊಂದಿಲ್ಲ ಎಂದು ಬಿ.ಮುನೇಗೌಡ ಟೀಕಿಸಿದರು.