Fast unto death in Doddaballapur

ದೊಡ್ಡಬಳ್ಳಾಪುರದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ: ನಿತ್ರಾಣ ಹೋರಾಟಗಾರರ ಆರೋಗ್ಯ ತಪಾಸಣೆ

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): ಒಳಚರಂಡಿ ನೀರನ್ನು ಶುದ್ದೀಕರಿಸಿ ಬಿಡುವ ಸಲುವಾಗಿ ಎಸ್‌ಟಿಪಿ ಘಟಕ ಸ್ಥಾಪಿಸಬೇಕೆಂದು ಒತ್ತಾಯಿಸಿ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಹಾಗೂ ‘ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಭಾಗ ಆರಂಭಿಸಿರುವ ಆಮರಣಾಂತ ಉಪವಾಸ ಸತ್ಯಾಗ್ರಹ (Fast unto death) ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ವರು ಹೋರಾಟಗಾರರು ನಿತ್ರಾಣರಾಗಿದ್ದಾರೆ.

ಶುಕ್ರವಾರ ಸಂಜೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೃಷ್ಣಾ ರೆಡ್ಡಿ, ವೈದ್ಯಾಧಿಕಾರಿ ಡಾ. ಪರಮೇಶ್ವರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.

ಭರವಸೆ ಬೇಡ

ನಮಗೆ ಇಲ್ಲಿನ ಯಾವುದೇ ಅಧಿಕಾರಿಗಳ ಭರವಸೆ ಬೇಡ. ಎಸ್‌ಟಿಪಿ ಘಟಕಕ್ಕೆ 57 ಕೋಟಿ ರೂ ಮಂಜೂರು ಮಾಡುವ ಸರ್ಕಾರದ ಕಾರ್ಯದರ್ಶಿಗಳು ಇಲ್ಲಿಗೆ ಬಂದು ಉತ್ತರ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಉಪವಾಸ ಕೈಬಿಡಿ ಎಂದು ಭರವಸೆ ನೀಡಲು ಬಂದ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಪ್ರತ್ಯುತ್ತರ ನೀಡಿದರು.

ರಾಜ್ಯ ಸರ್ಕಾರ ದೊಡ್ಡಬಳ್ಳಾಪುರದ ಕೊಳಚೆ ನೀರಿಗೆ ಎಸ್‌ಟಿಪಿ ಘಟಕ ಮಾಡಲು ಹಣ ಇಲ್ಲ ಎಂದು ಲಿಖಿತ ರೂಪದಲ್ಲಿ ಕೊಟ್ಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಾಯಿಗಳಿಗೆ ಕೋಳಿ ಮಾಂಸ ಹಾಕಲು ಕೋಟಿ ಕೋಟಿ ಹಣವಿರುತ್ತದೆ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಾಪಿ ಕುಡಿಯಲು ಬಿಸ್ನತ್ ತಿನ್ನಲು 200 ಕೋಟಿಗೂ ಹೆಚ್ಚು ಹಣವಿರುತ್ತದೆ. ಆದರೆ ಸಾವಿರಾರು ಜನರು ಶುದ್ಧ ನೀರು ಕುಡಿಯಲು, ಕೊಳದ ನೀರನ್ನು ಶುದ್ಧ ಮಾಡಲು 50 ಕೋಟಿ ಹಣವಿರುವುದಿಲ್ಲ ಎಂದು ದೂರಿದರು.

ಸ್ಥಳಕ್ಕೆ ಆಗಮಿಸಿದ ನಗರಾಭಿವೃದ್ದಿ ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕ ರಮೇಶ್‌ ಮಾತನಾಡಿ, ನಾಗರಕೆರೆಯಿಂದ ಹರಿಯುತ್ತಿರುವ ಒಳ ಚರಂಡಿ ನೀರಿನ ಪೈಪ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿದೆ. ನಗರಸಭೆ ತ್ಯಾಜ್ಯ ನೀರಿನ ಮೂರನೇ ಹಂತದ ಶುದ್ದೀಕರಣ ಮಾಡಲು 57 ಕೋಟಿ ರೂಗೆ ಇನ್ನೂ ಅನುಮೋದನೆ ದೊರೆತಿಲ್ಲ. ಈ ಬಗ್ಗೆ ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ.

ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳ ಸಹ ಈ ಬಗ್ಗೆ ಗಮನ ಹರಿಸುತ್ತಿದ್ದು, ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ. ಉಪವಾಸ ಸತ್ಯಾಗ್ರಹವನ್ನು ಕೈಬಿಡಿ ಎಂದು ಮನವಿ ಮಾಡಿದರು.

ತಹಶೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಲಿ ಕಚೇರಿ ಇಲ್ಲಿಯೇ ಕಾರ್ಯಾರಂಭ ಮಾಡಲಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಸಹ ಸೂಚನೆ ನೀಡಿದ್ದಾರೆ. ಕೊಳಚೆ ನೀರಿನ ಶುದ್ದೀಕರಣಕ್ಕಾಗಿ ಖಾಸ್‌ಭಾಗ್ ಸಮೀಪ ಎರಡು ಎಕರೆ ಜಮೀನು ಗುರುತಿಸಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಈಗಾಗಲೇ ಇದನ್ನು ನಗರಸಭೆಗೆ ಹಸ್ತಾಂತರಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಅವರೊಂದಿಗೆ ವೈಯಕ್ತಿಕ ಚರ್ಚೆ ಸಹ ನಡೆಸಲಾಗಿದ್ದು, ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳುವುದಾಗಿ ತಿಳಿಸಿದ್ದಾರೆ. ಸರ್ಕಾರದ ಕಾರ್ಯದರ್ಶಿಗಳೂ ಸಹ ಆದ್ಯತೆ ಮೇರೆಗೆ ಕಾಮಗಾರಿಗೆ ಅನುದಾನ ಪಡೆಯುವ ಭರವಸೆ ನೀಡಿದ್ದಾರೆ ಎಂದರು.

ನಗರಸಭೆ ವ್ಯಾಪ್ತಿಯಿಂದ ಬರುತ್ತಿರುವ ಒಳಚರಂಡಿ ನೀರನ್ನು ಶುದ್ದೀಕರಿಸಿ ಬಿಡುವಂತೆ ಏಳು ವರ್ಷಗಳಿಂದಲೂ ಹೋರಾಟ ಮಾಡಲಾಗುತ್ತಿದೆ. ನಮಗೆ ಯಾವುದೇ ಭರವಸೆ ಬೇಡ. ಕ್ಯಾನ್ಸರ್‌, ಕಿಡ್ನಿ ಮೊದಲಾದ ಸಮಸ್ಯೆಗಳಿವೆ. ನಮ್ಮ ಆರೋಗ್ಯಕ್ಕಿಂತ ನಮ್ಮ ಊರಿನ ಜನರ ಆರೋಗ್ಯ ಮುಖ್ಯ. ಸರ್ಕಾರ ಕಣ್ಣು ತೆರೆಯಲ್ಲ.

ಹಿಂದೆ ದಯಾಮರಣ ಸಹ ನೀಡಿ ಎಂದಿದ್ದೆವು. ಈಗ ಕಾಮಗಾರಿ ಹಣವನ್ನು ಕಾರ್ಖಾನೆಗಳ ಬಳಿಯೇ ವಸೂಲಿ ಮಾಡಿ. ಸಧ್ಯಕ್ಕೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಗಣರಾಜ್ಯೋತ್ಸವ ದಿನದಂದು ಕಪ್ಪು ಬಾವುಟ ಹಾರಿಸುವುದು ನಿಶ್ವಿತ ಎಂದು ಹೋರಾಟಗಾರರು ತಮ್ಮ ಹೋರಾಟ ಮುಂದುವರೆಸಿದರು.

ಧರಣಿ ಮುಂದುವರಿಕೆ

ಧರಣಿ ಮಾಡಿ ಆದರೆ ಉಪವಾಸ ಮಾಡಬೇಡಿ ಎಂದು ಅಧಿಕಾರಿಗಳಾದಿಯಾಗಿ ಮಹಿಳಾ ಠಾಣೆ ಇನ್ಸ್ಪೆಕ್ಟರ್‌ ನವೀನ್‌ ಕುಮಾರ್‌ ಮನವಿ ಮಾಡಿದರೂ ಸತ್ಯಾಗ್ರಹ ನಿರತರು, ರಾತ್ರಿ 9 ಗಂಟೆಯಾದರೂ ಸಹ ಹೋರಾಟ ಮುಂದುವರೆಸಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!