ಸಿಎಂ ಕದ ತಟ್ಟಿದ ದೊಡ್ಡಬಳ್ಳಾಪುರದ ಆಮರಣಾಂತ ಉಪವಾಸ ಸತ್ಯಾಗ್ರಹ.. ದೊರೆತ ಭರವಸೆ ಏನು ಗೊತ್ತೆ..?

Doddaballapura: Fast-unto-death Satyagraha ends on 3rd day

ಕೆ.ಎಂ. ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ); ನಗರದ ತಾಲೂಕು ಕಚೇರಿ ಮುಂಭಾಗ ನಡೆಯುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹ (Fast-unto-death Satyagraha) ಮೂರನೇ ದಿನ ಶನಿವಾರ ಮಧ್ಯಾಹ್ನ ಅಂತ್ಯಗೊಂಡಿದೆ.

ಒಳಚರಂಡಿ ನೀರನ್ನು ಶುದ್ದೀಕರಿಸಿ ಬಿಡುವ ಸಲುವಾಗಿ ಎಸ್‌ಟಿಪಿ ಘಟಕ ಸ್ಥಾಪಿಸಬೇಕೆಂದು ಒತ್ತಾಯಿಸಿ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಹಾಗೂ ‘ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ಮೂರು ದಿನಗಳಿಂದ ತಾಲೂಕು ಕಚೇರಿ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು.

ಶುಕ್ರವಾರ ರಾತ್ರಿ ಅಸ್ವಸ್ಥರಾಗಿದ್ದ ಹೋರಾಟಗಾರರಿಗೆ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ನಮಗೆ ಇಲ್ಲಿನ ಯಾವುದೇ ಅಧಿಕಾರಿಗಳ ಭರವಸೆ ಬೇಡ. ಎಸ್‌ಟಿಪಿ ಘಟಕಕ್ಕೆ 57 ಕೋಟಿ ರೂ ಮಂಜೂರು ಮಾಡುವ ಸರ್ಕಾರದ ಕಾರ್ಯದರ್ಶಿಗಳು ಇಲ್ಲಿಗೆ ಬಂದು ಉತ್ತರ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಉಪವಾಸ ಕೈಬಿಡಿ ಎಂದು ಭರವಸೆ ನೀಡಲು ಬಂದ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಪ್ರತ್ಯುತ್ತರ ನೀಡಿದ್ದರು.

ಹೋರಾಟಗಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಈ ಬಗ್ಗೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ, ಶಾಸಕ ಧೀರಜ್‌ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿದ್ದರು.

ತಹಶೀಲ್ದಾರ್ ಮನವಿ

ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ಎಸ್‌ಟಿಪಿ ಕಾಮಗಾರಿಯ ಅಂದಾಜು ಯೋಜನಾ ವೆಚ್ಚದ ಕುರಿತಾಗಿ ವರದಿ ಸಲ್ಲಿಸಿದ್ದು, ಅನುದಾನಕ್ಕೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳಿಗೆ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಅಧಿಕಾರಿಗಳು ಮನವರಿಕೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ತುರ್ತಾಗಿ ಹುಬ್ಬಳ್ಳಿಗೆ ಹೋಗಬೇಕಾಗಿರುವುದರಿಂದ ಮಂಗಳವಾರ ಸಭೆ ನಡೆಸುತ್ತೇನೆ. ಉಪವಾಸ ಸತ್ಯಾಗ್ರಹ ಕೈಬಿಡಲು ಹೇಳಿ ಎಂದು ಹೇಳಿ ಕಳುಹಿಸಿದ್ದಾರೆ.

ಮುಂದೆ ನಡೆಯುವ ಮುಖ್ಯಮಂತ್ರಿಗಳ ಸಭೆಯಲ್ಲಿ ಹೋರಾಟಗಾರರು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಹೋರಾಟ ಕೈಬಿಡಿ ಎಂದು ಮನವಿ ಮಾಡಿದರು.

ಪೌರಾಯುಕ್ತ ಆರ್‌.ಕಾರ್ತಿಕೇಶ್ವರ ಮಾತನಾಡಿ, ಎಸ್‌ಟಿಪಿ ಘಟಕ ಸ್ಥಾಪನೆ ಅನುದಾನ ಬಂದರೆ ಎಲ್ಲಾ ಸಮಸ್ಯೆಗೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಭೇಟಿ ಫಲಪ್ರದವಾಗಿದೆ. ಇಲ್ಲಿನ ವಿದ್ಯಮಾನಗಳನ್ನು, ಸತ್ಯಾಗ್ರಹ ಕುರಿತ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ ಮನವರಿಕೆ ಮಾಡಿಕೊಡಲಾಗಿದೆ. ಮುಖ್ಯಮಂತ್ರಿಗಳು ಮಂಗಳವಾರ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಉಪವಾಸ ಅಂತ್ಯ:

ದೊಡ್ಡಬಳ್ಳಾಪುರ ನಗರಸಭೆ ಅನುದಾನವನ್ನು ಜಮೀನಿನ ಖರೀದಿಗೆ ಬಳಸಬೇಕು. ಹೆಚ್ಚುವರಿ ಅನುದಾನ ಎಸ್‌ಟಿಪಿ ಘಟಕ ಸ್ಥಾಪನೆಗೆ ವಿನಿಯೋಗಿಸಬೇಕು. ಮುಖ್ಯಮಂತ್ರಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಹೋರಾಟ ಹಿಂಪಡೆಯುತ್ತೇವೆ ಎಂದು ಹೋರಾಟಗರರು ಸತ್ಯಾಗ್ರಹ ಅಂತ್ಯಗೊಳಿಸಿದರು.

ಉಪವಾಸ ಸತ್ಯಾಗ್ರಹ ನಿರತರಿಗೆ ಎಳನೀರು ಕುಡಿಸುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]