ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು 29 ವರ್ಷಗಳ ಹಿಂದೆ ನಡೆದಿದ್ದ ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.
ಕಳೆದ 29 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದವನನ್ನು ಪತ್ತೆ ಮಾಡಲಾಗಿದ್ದು, ಕಾರ್ಯಾಚರಣೆಯಲ್ಲಿ ಮಹಿಳಾ ಪೇದೆ ಲಲಿತಾ ಪ್ರಮುಖ ಪಾತ್ರ ವಹಿಸಿದ್ದಾರೆಂದು ವರದಿಯಾಗಿದೆ.
1997ರ ಅಕ್ಟೋಬರ್ 11ರಂದು ಮಂಗಳೂರಿನ ಉರ್ವ ಮಾರಿಗುಡಿ ಕ್ರಾಸ್ ಬಳಿಯ ‘ಅನ್ವರ್ ಮಹಲ್’ ಎಂಬ ಮನೆಗೆ ನುಗ್ಗಿದ್ದ ದಂಡ ಪಾಳ್ಯ ಗ್ಯಾಂಗ್, ಮನೆಯಲ್ಲಿದ್ದ ಲೂಯಿಸ್ ಡಿಮೆಲ್ಲೊ (80 ವರ್ಷ) ಮತ್ತು ರಂಜಿತ್ ವೇಗಸ್ (19ವರ್ಷ) ಎಂಬುವರನ್ನು ಹತ್ಯೆ ಮಾಡಿ ಚಿನ್ನಾಭರಣಗಳನ್ನು ದೋಚಿದ್ದರು.
ಹಳೆ ಪ್ರಕರಣವನ್ನು ಭೇದಿಸುವಲ್ಲಿ ಮಹಿಳಾ ಕಾನ್‌ಸ್ಟೆಬಲ್ ಲಲಿತಾ ಲಕ್ಷ್ಮಿ ಪಾತ್ರ ದೊಡ್ಡದಿದೆ. ಸತತ ಶ್ರಮವಹಿಸಿ, ಹಳೆಯ ಕೋರ್ಟ್ ದಾಖಲೆಗಳನ್ನು ಪರಿಶೀಲಿಸಿ, ಆರೋಪಿ ತನ್ನ ಹೆಸರು ಬದಲಿಸಿಕೊಂಡಿರುವುದನ್ನು ಪತ್ತೆಹಚ್ಚಿದ್ದು, ಆರೋಪಿ ಸೆರೆಗೆ ಸಾಧ್ಯವಾಗಿದೆ.
ಭೀಕರ ಅಪಘಾತ: ತಾಯಿ, ಮಗ ಸಾವು
ನೆಲಮಂಗಲ: ಡಿ ಮಾರ್ಟ್‌ಗೆ ಹೋಗಿ ಬರುತ್ತಿದ್ದ ತಾಯಿ ಮತ್ತು ಮಗ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಶೈಲಜಾ(45 ವರ್ಷ), ಪ್ರಜ್ವಲ್ (26 ವರ್ಷ) ಮೃತ ತಾಯಿ, ಮಗ.
ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ತಾಯಿ ಮತ್ತು ಮಗ ಡಿ ಮಾರ್ಟ್‌ಗೆ ಹೋಗಿ ದಿನಸಿ ಸಾಮಗ್ರಿಗಳನ್ನು ತೆಗೆದುಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗೇಟ್ ಬಳಿ ವೇಗವಾಗಿ ಬಂದ ಟಾಟಾ ಏಸ್ ವಾಹನ ತಾಯಿ, ಮಗ ಇದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.