Will not allow even an inch of land acquisition: H.D. Kumaraswamy

ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ: ಬಿಡದಿಯಲ್ಲಿ ಗುಡುಗಿದ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಜಿಲ್ಲೆಯ ಬಿಡದಿ ಸುತ್ತಮುತ್ತಲಿನ ಫಲವತ್ತಾದ ಕೃಷಿ ಭೂಮಿಯನ್ನು ರಾಜ್ಯ ಸರ್ಕಾರ ಅಕ್ರಮವಾಗಿ ಸ್ವಾಧೀನ ಮಾಡಿಕೊಳ್ಳುವುದಕ್ಕೆ ಬಿಡುವುದಿಲ್ಲ. ಒಂದು ಇಂಚು ಭೂಮಿ ಸ್ವಾಧೀನಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದರು.

ಭೈರಮಂಗಲ ಮತ್ತು ಕಂಚುಗಾನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನಮ್ಮ ಭೂಮಿಯನ್ನು ಉಳಿಸಿಕೊಡಿ ಎಂದು ರೈತ ಮಹಿಳೆಯರು ಸೆರಗೊಡ್ಡಿ ಬೇಡಿದಾಗ ಅಕ್ಷರಶಃ ಗದ್ಗದಿತರಾದ ಕೇಂದ್ರ ಸಚಿವರು; ನನ್ನ ಸಹೋದರಿಯರ ಈ ಭೂಮಿಯನ್ನು ಉಳಿಸಿಕೊಡುವ ಭಾರ ನನ್ನದು. ಒಂದು ಇಂಚು ಭೂಮಿಯನ್ನು ಬಿಡುವುದು ಬೇಡ. ಅದು ಹೇಗೆ ಸ್ವಾಧೀನ ಮಾಡಿಕೊಳ್ಳುತ್ತಾರೋ ನೋಡೋಣ ಎಂದು ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.

ನೀವು ಯಾರೂ ಹೆದರಬೇಕಿಲ್ಲ. ನಿಮ್ಮ ಜತೆ ನಾನಿದ್ದೇನೆ. ಅದೇನೆ ಬಂದರೂ ಹೆದರಿಸೋಣ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ಆದರೆ ಜನರು ಶಾಶ್ವತ. ಸರ್ಕಾರಗಳು ಜನಾಭಿಪ್ರಾಯಕ್ಕೆ ಮಣಿಯಬೇಕು. ಇಲ್ಲವಾದರೆ ಹೇಗೆ ಬುದ್ಧಿ ಕಲಿಸಬೇಕು ಎಂಬುದು ಜನರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಗುಡುಗಿದರು.

ತಮ್ಮ ಮುಂದೆ ಕಣ್ಣೀರಿಟ್ಟುಕೊಂಡ ರೈತ ಮಹಿಳೆಯರಿಗೆ ಧೈರ್ಯ ಹೇಳಿದ ಕುಮಾರಸ್ವಾಮಿ ಅವರು, ನನ್ನ ಸಹೋದರಿಯರ ಕಣ್ಣಲ್ಲಿ ನೀರು ಬರುವುದು ಬೇಡ. ನಿಮ್ಮ ಕಣ್ಣೀರಿಗೆ ಕಾರಣರಾದವರಿಗೆ ತಕ್ಕ ಶಾಸ್ತಿ ಕಾದಿದೆ. 2028ಕ್ಕೆ ನಿಮ್ಮ ಶಕ್ತಿ ಏನೆಂಬುದನ್ನು ತೋರಿಸಿ. ಯಾವುದೇ ಕಾರಣಕ್ಕೆ ನಮಲ್ಲಿ ಒಗ್ಗಟ್ಟು ಒಡೆಯುವುದು ಬೇಡ. ರೈತರ ಒಗ್ಗಟಿಗೆ ಬೆಂಕಿ ಹಾಕಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೆಲವರು ಸ್ವಾಧೀನದ ಪರವಾಗಿದ್ದಾರೆ ಎನ್ನುವ ಮಾತು ಕೇಳಿದೆ. ಅದು ಒಳ್ಳೆಯದಲ್ಲ. ಸರ್ಕಾರ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಈ ಫಲವತ್ತಾದ ಭೂಮಿಯನ್ನು ಅಗ್ಗದ ಬೆಲೆಗೆ ಹೊಡೆದುಕೊಳ್ಳಲು ಹೊರಟಿದೆ. ಕೆಲವರು ಈಗಾಗಲೇ ಬೇನಾಮಿಗಳ ಹೆಸರಿನಲ್ಲಿ ಲ್ಯಾಂಡ್ ಬ್ಯಾಂಕ್ ಮಾಡಿಕೊಂಡು ದರೋಡೆ ಮಾಡಲು ಹೊರಟಿದ್ದಾರೆ. ಅವರು ಜನರಿಗೆ, ಸರಕಾರಕ್ಕೆ ಮೋಸ, ವಂಚನೆ ಮಾಡುತ್ತಿದ್ದಾರೆ. ಇಂತಹವರನ್ನು ಬೀದಿಯಲ್ಲಿ ನಿಲ್ಲಿಸುವ ದಿನಗಳು ದೂರವಿಲ್ಲ ಎಂದರು ಅವರು.

ಈ ಭಾಗದ ಕಾಂಗ್ರೆಸ್ ನಾಯಕರುಗಳು ಇಲ್ಲಿ ನಡೆಯುತ್ತಿರುವ ಮೋಡವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಈ ಸರ್ಕಾರದಲ್ಲಿ ಇರುವವರು ನಿಮ್ಮನ್ನು ಕೂಡ ಮೋಸ ಮಾಡುತ್ತಿದ್ದಾರೆ. ನಿಮ್ಮನ್ನು ದಾಳವನ್ನಾಗಿ ಮಾಡಿಕೊಂಡು ನಿಮ್ಮ ಬದುಕನ್ನು ಕೂಡ ಕಸಿದುಕೊಳ್ಳುತ್ತಿದ್ದಾರೆ. ನನ್ನ ಜೊತೆಯಲ್ಲೇ ಇದ್ದವರು ಅಧಿಕಾರ ದರ್ಪದಿಂದ ಮಾತನಾಡುತ್ತಿದ್ದಾರೆ. ಅವರಿಗೆ ಗೊತ್ತಿರಲಿ, ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ನನಗೂ ಅವರಿಗೂ ಹೋಲಿಸಬೇಡಿ

ಈ ಸರಕಾರದಲ್ಲಿ ಇರುವವರು ಮಾಡುತ್ತಿರುವ ಟೌನ್ ಶಿಪ್ ಬೇರೆ. ಅಂದು ನಾನು ಆಲೋಚನೆ ಮಾಡಿದ್ದ ಯೋಜನೆಯೇ ಬೇರೆ. ಅವರಿಗೂ ನನಗೂ ಹೋಲಿಕೆ ಮಾಡಬೇಡಿ. ಜನರು ಬೇಡ ಎಂದಾಗ ನಾನು ಎರಡನೇ ಮಾತಿಲ್ಲದೆ ಅದನ್ನು ನಿಲ್ಲಿಸಿದೆ. ಆಗ ಇಲ್ಲಿನ ಭೂಮಿಯ ಬೆಲೆ 1 ಲಕ್ಷದೊಳಗೆ ಇತ್ತು. ನಾನು ಅಂದು ನಿಮ್ಮೆಲ್ಲರನ್ನು ಕೃಷ್ಣಾ ಕಚೇರಿಗೆ ಕರೆದು ಚರ್ಚೆ ನಡೆಸಿದೆ. ನನ್ನ ನೈತಿಕತೆ ಅದು. ಆದರೆ, ಇವರಿಗೆ ರೈತರಿಗೆ ಮುಖ ಕೊಡುವ ಧೈರ್ಯವೇ ಇಲ್ಲ ಎಂದು ಅವರು ಕಿಡಿಕಾರಿದರು.

ನಾನು ಇವರಂತೆ ದಬ್ಬಾಳಿಕೆ ನಡೆಸಿಲ್ಲ. ಅವತ್ತೇ ನಾನು ಟೌನ್ ಶಿಪ್ ಮಾಡಿದಿದ್ರೆ ಚೆನ್ನಾಗಿರುತ್ತಿತ್ತು ಯಾರೋ ತಾಯಿ ಹೇಳಿದರು. ಇವತ್ತಿನ ಭೂಮಿಯ ಬೆಲೆ ಕ್ಷಣಕ್ಷಣಕ್ಕೂ ಏರುತ್ತಿದೆ. ಡಿ.ಕೆ. ಶಿವಕುಮಾರ್ ಅವರಿಗೆ ನಾನು ಹೇಳುವುದು ಇಷ್ಟೇ, ರೈತರ ಬದುಕಿನ ಬಗ್ಗೆ ಗೌರವ ಇಟ್ಟುಕೊಳ್ಳಿ.

ಈಗಲ್ ಟನ್ ಕರಾಬು ಭೂಮಿ ಬಗ್ಗೆ ಏನ್ ಮಾಡಿದ್ದೀರಿ ಎನ್ನುವುದು ಗೊತ್ತಿದೆ. ಎಕರೆಗೆ ₹13 ಕೋಟಿ ದಂಡ ನಿಗದಿ ಮಾಡಿದ್ದು ನೆನಪು ಇದೆ ತಾನೇ? ಆದರೆ, ಈ ರೈತರ ಭೂಮಿಗೆ ಎಕರೆಗೇ ಕೇವಲ ₹2.45 ಕೋಟಿ ಕೊಡ್ತೀವಿ ಅಂತೀರಿ? ಇದು ಯಾವ ನ್ಯಾಯ? ರೈತರಿಗೆ ಒಂದು ಲೆಕ್ಕ, ಈಗಲ್ ಟನ್ ಗೆ ಇನ್ನೊಂದು ಲೆಕ್ಕ ಇದೆಯೇ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲಾಧಿಕಾರಿ ನನ್ನ ಫೋನ್ ತೆಗೆಯಲ್ಲ

ಜಿಲ್ಲೆಯ ಜಿಲ್ಲಾಧಿಕಾರಿ ನನ್ನ ಮೊಬೈಲ್ ಕರೆಯನ್ನೇ ಸ್ವೀಕರಿಸಿಲ್ಲ. ನನ್ನ ನಂಬರ್ ನೋಡಿದ ಕೂಡಲೇ ತೆಗೆಯುವುದೇ ಇಲ್ಲ. ಅಧಿಕಾರಿಗಳಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಯಾರೋ ಒತ್ತಡ ಹೇರಿದರೂ ಅಂತ ತಪ್ಪು ಮಾಡಬೇಡಿ. ನಿವೃತ್ತರಾದರೂ ನೀವು ತಪ್ಪಿಸಿಕೊಳ್ಳಲು ಆಗಲ್ಲ.

ಚಿತ್ರದುರ್ಗದ ಎಂಜಿನಿಯರ್ ಒಬ್ಬರು ಇದ್ದರು. ಅಧಿಕಾರದಲ್ಲಿ ಇದ್ದಾಗ ಮುಖ್ಯ ಅಭ್ಯಂತರರಾಗಿ ಮಾಡಿದ ತಪ್ಪಿಗೆ ಈಗ ಜೈಲಿಗೆ ಹೋಗಿದ್ದಾರೆ. ಇಡೀ ರಾಜ್ಯದ ಅಧಿಕಾರಿಗಳಿಗೆ ಹೇಳ್ತಿದ್ದೀನಿ, ಈ‌ ಸರ್ಕಾರದ ಶಾಸಕರು, ಸಚಿವರ ಒತ್ತಡಕ್ಕೆ ಜನರಿಗೆ ದ್ರೋಹ ಬಗೆಯಬೇಡಿ ಎಂದು ಹೇಳಿದರು ಕೇಂದ್ರ ಸಚಿವರು.

ಮಾಗಡಿ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಅವರು ಸೇರಿದಂತೆ ಅನೇಕ ರೈತ ಮುಖಂಡರು, ರೈತರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!