All villages in the state will be named after Mahatma Gandhi - Cmsiddaramaiah

ಮೋದಿ ಸರ್ಕಾರಕ್ಕೆ ತಿರುಗೇಟು: ರಾಜ್ಯದ ಎಲ್ಲಾ ಗ್ರಾ‌ಪಂಗಳಿಗೆ ಮಹಾತ್ಮಾ ಗಾಂಧಿ ಹೆಸರು – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದ ಮೋದಿ ಸರ್ಕಾರ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚೆಗೆ ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (MGNREGA) ಕಾಯ್ದೆಯನ್ನು ರದ್ದು ಮಾಡಿ, ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಶನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ತಿಳಿಸಿದರು.

ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಚಿಂತಿಸುತ್ತದೆ

2005 ರಲ್ಲಿ ಮನಮೋಹನ್ ಸಿಂಗ್ ಪ್ರದಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳನ್ನು ಕಾಂಗ್ರೆಸ್ನ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದ ಜನಪರ ಕಾಯ್ದೆಗಳಾಗಿದ್ದುವು.

ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದರು.

ಬಡವರು ಸೇವಕರಾಗಿಯೇ ಇರಲು ಬಿಜೆಪಿ-ಆರ್ ಎಸ್ ಎಸ್ ನ ಕುತಂತ್ರ

ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ.

ಸುಮಾರು ಶೇ. 53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ ಕೇಂದ್ರ ಸರ್ಕಾರ, ಆರ್ ಎಸ್ ಎಸ್ ಅವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು

ಬಿಜೆಪಿಯವರು ಕಾಂಗ್ರೆಸ್ ನ ಜನಪರ ಗ್ಯಾರಂಟಿ ಯೋಜನೆಗಳ ಬಗ್ಗೆ ‘ವೋಟ್ ಗಾಗಿ ಮಾಡಿದ ಯೋಜನೆಗಳು’ ಎಂದು ಟೀಕಿಸುತ್ತಿದ್ದರು. ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ನರೇಗಾ ಯಿಂದ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು.

ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಈ ಮೊದಲು ಕೆಲಸವನನ್ನು ನಿರ್ಧರಿಸಲಾಗುತ್ತಿತ್ತು. ಆದರೆ ಈಗ ಬಡವರ ಗ್ರಾಮೀಣ ಬಡಜನರ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು , ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ಮನರೇಗಾ ದಿಂದ 100 ದಿನಗಳ ಕೆಲಸದ ಭರವಸೆಯಿತ್ತು

ಎಲ್ಲ ಗ್ರಾಮಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ, ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು.

ಬಡವರ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು, ಆದರೆ ವಿಬಿ ರಾಮ್ ಜಿ ಯ ಜಾರಿಯಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಹಿಂದೆ ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40 ರಷ್ಟು ರಾಜ್ಯ ಸರ್ಕಾರಗಳು ಕೊಟ್ಟು, ಕೇಂದ್ರ ಶೇ. 60 ರಷ್ಟು ಮಾತ್ರ ಪಾವತಿಸುತ್ತವೆ ಎಂದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ, ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಪುನರ್ ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

ವಿಬಿ ಜಿ ರಾಮ್ ಜಿ – ಆರ್ ಎಸ್ ಎಸ್ ಹುನ್ನಾರ

ವಿಬಿ ಜಿ ರಾಮ್ ಜಿ ಎಂದ ಕಾಯ್ದೆ ಬಡವರ ಹಕ್ಕನ್ನು ರಕ್ಷಿಸುವುದಿಲ್ಲ. ಈ ಹುನ್ನಾರದ ಹಿಂದೆ ಆರ್ ಎಸ್ ಎಸ್ ಇದೆ. ಬಡವರು ಬಲಯುತರಾಗದೇ, ಸೇವಕರಾಗಿಯೇ ಇರಬೇಕೆಂಬ ಕುತಂತ್ರ ಅವರದ್ದಾಗಿದೆ. ಸಮಾಜದಲ್ಲಿ ಅಸಮಾನತೆಯನ್ನು ಶಾಶ್ವತವಾಗಿಸುವುದೇ ಅರ್ ಎಸ್ ಎಸ್ ಹುನ್ನಾರ ಎಂದರು.

ನರೇಗಾ ರದ್ಧತಿ ಬಗ್ಗೆ ವಿಶೇಷ ಅಧಿವೇಶನ- ಬಿಜೆಪಿ ಚರ್ಚಿಸುತ್ತಿಲ್ಲ

ಡಾ.ಬಿ.ಆರ್. ಅಂಬೇಡ್ಕರ್ ಹೇಳಿದಂತೆ ದೇಶದಲ್ಲಿ ಸಮಾನತೆ ಸ್ಥಾಪನೆಯಾಗಿಸಲು ಆರ್ಥಿಕ ,ಸಾಮಾಜಿಕ ಸ್ವಾತಂತ್ರ್ಯ ಎಲ್ಲರಿಗೂ ದೊರೆಯಬೇಕು. ಮಹಾತ್ಮಾ ಗಾಂಧಿಯವರು ಗ್ರಾಮ ಸ್ವರಾಜ್ಯ ಪ್ರತಿಪಾದಿಸಿದರು.

ಗೋಡ್ಸೆಯವರು ಮಹಾತ್ಮಾಗಾಂಧಿಯವರ ಹತ್ಯೆಯನ್ನು ಮಾಡಿದರೆ, ಬಿಜೆಪಿಯವರು ನರೇಗಾ ಯೋಜನೆಯನ್ನು ರದ್ದುಗೊಳಿಸುವ ಮೂಲಕ, ಮಹಾತ್ಮಾ ಗಾಂಧಿಯವರನ್ನು ಮತ್ತೊಮ್ಮೆ ಹತ್ಯೆ ಮಾಡಿದಂತಾಗಿದೆ. ಬಿಜೆಪಿಯವರು ಈಗ ಸುಳ್ಳು ಹೇಳುತ್ತಿದ್ದಾರೆ.

ಈ ಕಾಯ್ದೆಯ ರದ್ದತಿಯ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಆದರೆ ಬಿಜೆಪಿಯವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಆದರೆ ರದ್ದತಿಯ ವಿರುದ್ಧ ಸರ್ಕಾರ ಖಂಡಿತ ನಿರ್ಣಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುಂದಿನ ಬಜೆಟ್-ಗ್ರಾಮಪಂಚಾಯತ್ ಗಳಿಗೆ ಮಹಾತ್ಮಾ ಗಾಂಧಿ ಹೆಸರು‌

ನರೇಗಾ ಯೋಜನೆಯ ಪುನರ್ ಸ್ಥಾಪನೆ ಹಾಗೂ ವಿಬಿ ಜಿ ರಾಮ್ ಜಿ ಯ ರದ್ದತಿಯನ್ನು ಒತ್ತಾಯಿಸಿ, ರಾಜಭವನಕ್ಕೆ ಮನವಿಯನ್ನು ತಲುಪಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ರಾಜ್ಯದ ಪ್ರತಿಯೊಬ್ಬರೂ ಕಾಂಗ್ರೆಸ್ ನ ಈ ಉದ್ದೇಶಕ್ಕೆ ಸಹಕರಿಸಬೇಕು.

ಮುಂದಿನ ಬಜೆಟ್ ನಲ್ಲಿ ಘೋಷಣೆಯಲ್ಲಿ 6000 ಗ್ರಾಮ ಪಂಚಾಯತಿಗಳ ಕಚೇರಿಗೂ ಮಹಾತ್ಮಾ ಗಾಂಧಿಯವರ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!