ದೊಡ್ಡಬಳ್ಳಾಪುರ: ಮೇಲ್ದರ್ಜೆಗೆರಿದ ಬಳಿಕ ಇದೇ ಮೊದಲ ಬಾರಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ.

ಬೆಳಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರಗಳನ್ನು ಸ್ವೀಕರಲು ಸಮಯ ನಿಗದಿ ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರೇಮ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಶ್ವೇತಾ ಮುರುಳಿಧರ್ ನಾಮಪತ್ರ ಸಲ್ಲಿಸಿದ್ದಾರೆ.
ಚುನಾವಣೆ ಅಧಿಕಾರಿ ತಹಶಿಲ್ದಾರ್ ಮಲ್ಲಪ್ಪ.ಕೆ.ಯರಗೋಳ ಅವರ ನೇತೃತ್ವದ ಚುನಾವಣೆ ಸಭೆ ಆರಂಭವಾಗಲಿದ್ದು, 1.15 ರಿಂದ 1.30ರ ವರೆಗೆ ನಾಮಪತ್ರ ಪತ್ರ ಪರಿಶೀಲನೆ ನಡೆಯಲಿದೆ.
ಅವಿರೋಧ ಆಯ್ಕೆ
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 19 ವಾರ್ಡ್ಗಳಲ್ಲಿ ಬಿಜೆಪಿ 14 ರಲ್ಲಿ ಜಯಗಳಿಸಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.