Hindu Samajotsava in Doddaballapur from today

ಇಂದಿನಿಂದ ದೊಡ್ಡಬಳ್ಳಾಪುರದಲ್ಲಿ ಹಿಂದೂ ಸಮಾಜೋತ್ಸವ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜ್ಯೋತ್ಸವ (Hindu Samajotsava) ಸಮಿತಿ ಅಡಿಯಲ್ಲಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.28 ಮತ್ತು 29 ರಂದು ಹಿಂದೂ ಸಮಾಜೋತ್ಸವ ನಡೆಯಲಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.

ಹಿಂದೂ ಸಮಾಜೋತ್ಸವ ಕಾರ್ಯಕ್ರಮವು ಬರೀ ಧಾರ್ಮಿಕ ಉತ್ಸವವಲ್ಲ. ಸಮಾಜದ ಏಕತೆ, ಸಂಸ್ಕೃತಿ ಉಳಿವು ಮತ್ತು ಧಾರ್ಮಿಕ ಜಾಗೃತಿಯ ಪ್ರತೀಕವಾಗಿದ್ದು, ಎಲ್ಲಾ ಹಿಂದೂಗಳಿಗೆ ಕಾರ್ಯಕ್ರಮಕ್ಕೆ ಮುಕ್ತ ಆಹ್ವಾನವಿದೆ. ಕಾರ್ಯಕ್ರಮದ ಅಂಗವಾಗಿ ಈಗಾಗಲೇ ಜ.24ರಂದು ಭಜನೆ ಕಾರ್ಯಕ್ರಮ ನಡೆದಿದೆ. ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ಬೃಹತ್‌ ವೇದಿಕೆ ಸಿದ್ದವಾಗುತ್ತಿದೆ.

ಜ. 28 ರಂದು ಸಂಜೆ 4.00ಕ್ಕೆ ಬೈಕ್ ರ್ಯಾಲಿ ನಗರದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ಆರಂಭಗೊಳ್ಳುವ ಬೈಕ್ ಯಾರ್ಲಿ ಡಿ.ಕ್ರಾಸ್, ಗಾಂಧಿ ವೃತ್ತ, ತೇರಿನ ಬೀದಿ, ಕೊಂಗಾಡಿಯಪ್ಪ ಕಾಲೇಜು ರಸ್ತೆ, ತಾಲ್ಲೂಕು ಕಚೇರಿ ಮೂಲಕ ಭಗತ್‌ ಸಿಂಗ್ ಕ್ರೀಡಾಂಗಣ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಿಂದೂ ಬಾಂಧವರು ಹೆಲ್ಮೆಟ್ ಧರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಜ. 29ಕ್ಕೆ ಶ್ರೀ ರಾಮ ಶೋಭಾಯಾತ್ರೆ

ಜ.29 ರಂದು ಬೆಳಿಗ್ಗೆ 8 ಗಂಟೆಗೆ ತಾಲ್ಲೂಕಿನ ಎಲ್ಲಾ ಶಕ್ತಿ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ನಂತರ ಸುದರ್ಶನ ಹೋಮ ನಡೆಯಲಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಭಜನಾ ಮಂಡಳಿಗಳಿಂದ ‘ಭಕ್ತಿ ಪಾರಾಯಣ’ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಮಹಾಮಂಗಳಾರತಿ , ಪ್ರಸಾದ ವಿನಿಯೋಗವಿದೆ.

ಜ.29 ರಂದು ಮಧ್ಯಾಹ್ನ 2.30ಕ್ಕೆ ನಗರದ ನೆಲದಾಂಜನೇಯ ದೇವಾಲಯದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಲಿದೆ.

ನಂತರ ಸಂಜೆ 5 ಗಂಟೆಗೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಸಾನಿಧ್ಯವನ್ನು ಹಂಪಿ ಹೇಮಕೂಟ ಗಾಯತ್ರಿ ಪೀಠ ಮಹಾಸಂಸ್ಥಾನ ಮತ್ತು ದೇವಾಂಗ ಜಗದ್ಗುರು ದಯಾನಂದಪುರಿ ಮಹಾಸ್ವಾಮೀಜಿ, ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ವಹಿಸಲಿದ್ದಾರೆ.

ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಡೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!