BJP MLA Ramamurthy faces setback in Supreme Court too..!

ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿಗೆ ಸುಪ್ರೀಂನಲ್ಲೂ ಹಿನ್ನಡೆ..!

ಬೆಂಗಳೂರು: ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ, ಹೈಕೋರ್ಟ್ ಆದೇಶ ಪ್ರಶ್ನಿಸಿ ಜಯನಗರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (C.K. Rama murthy) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ವಿಚಾರಣೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯ ಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹಾ ಹಾಗೂ ಎನ್.ವಿ. ಅಂಜಾ ರಿಯಾ ಅವರಿದ್ದ ತ್ರಿಸದಸ್ಯ ಪೀಠವು ವಜಾಗೊಳಿಸಿದೆ.

ಜಯನಗರ ಕ್ಷೇತ್ರದಿಂದ 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದ ಅಭ್ಯರ್ಥಿ ಸಿ.ಕೆ ರಾಮಮೂರ್ತಿ ಅವರ ಆಯ್ಕೆ ಅಸಿಂಧುಗೊಳಿಸಬೇಕೆಂದು ಕೋರಿ, ಸೌಮ್ಯಾರೆಡ್ಡಿ ರೆಡ್ಡಿ ಅವರು ಹೈಕೋರ್ಟ್‌ಗೆ ಸಲ್ಲಿಸಿದ ಚುನಾವಣಾ ತಕರಾರು ಅರ್ಜಿಯಲ್ಲಿ ಮನವಿ ಮಾಡಿದ್ದರು.

ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳಿಂದ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ, ಚುನಾವಣೆಯಲ್ಲಿ ಗೆದ್ದಿದ್ದ ಬಿಜೆಪಿಯ ಸಿ.ಕೆ.ರಾಮಮೂರ್ತಿ ವಿರುದ್ದ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಕುರಿತು ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಸೌಮ್ಯಾರೆಡ್ಡಿ ಅವರಿಗೆ ಹೈಕೋರ್ಟ್ ಸೂಚನೆ ನೀಡಿತ್ತು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿ.ಕೆ ರಾಮಮೂರ್ತಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಅಲ್ಲದೇ ಪ್ರಕರಣದ ವಿಚಾರಣೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಜಾಗೊಂಡಿದೆ ಎಂದು ವರದಿಯಾಗಿದೆ.

16 ಮತಗಳಿಂದ ಸೌಮ್ಯಾ ರೆಡ್ಡಿ ಪರಾಭವ

2023ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸಿ.ಕೆ. ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಸೌಮ್ಯಾ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಕೇವಲ 16 ಮತಗಳಿಂದ ಪರಾಭವಗೊಂಡಿದರು. ಆದರೆ ಸಿ.ಕೆ.ರಾಮಮೂರ್ತಿ ಅವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸೌಮ್ಯಾ ರೆಡ್ಡಿ, ಮತಎಣಿಕೆ ಪ್ರಕ್ರಿಯೆಯಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ದೊಡ್ಡಬಳ್ಳಾಪುರದಲ್ಲಿ ಮಾ.27 ರಿಂದ ಶ್ರೀರಾಮ ಶೋಭಾಯಾತ್ರೆ: ಹೆಲಿಕ್ಯಾಪ್ಟರ್‌ ಮೂಲಕ ಪುಷ್ಪ ವೃಷ್ಟಿ

ವಿಶ್ವ ಹಿಂದೂ ಪರಿಷತ್‌ ಬಜರಂಗ ದಳ ವತಿಯಿಂದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಶ್ರೀ ರಾಮೋತ್ಸವ ಹಾಗೂ ಬೃಹತ್‌ ಶ್ರೀರಾಮ ಶೋಭಾಯಾತ್ರೆ (Sobhayatre) ಮತ್ತು ಶ್ರೀ ರಾಮ ರಥಯಾತ್ರೆ ಕಾರ್ಯಕ್ರಮ ಮಾ.27 ರಿಂದ ಮೂರು ದಿನಗಳ ಕಾಲ

[ccc_my_favorite_select_button post_id="120440"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!