Maddur riot case: B.Y. Vijayendra says the police department has completely failed

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಜಾಹೀರಾತಿನಲ್ಲಿ ಎಲ್ಲ ಸುಳ್ಳು ಮಾಹಿತಿಯನ್ನು ನೀಡುವ ಕೆಲಸವನ್ನು ಮಾಡಿದೆ. ಇದೇ ಜಾಹೀರಾತನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ನೀಡಿದರೆ ನಮ್ಮ ವಿರೋಧ ಇರಲಿಲ್ಲ. ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಈ ಕಾಂಗ್ರೆಸ್ ಸರಕಾರಕ್ಕೆ ಮಾನ ಮರ್ಯಾದೆ ಇಲ್ಲ. ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ವಿರುದ್ಧ ಪತ್ರಿಕೆಗಳ ಮುಖಪುಟದಲ್ಲಿ ರಾಜ್ಯ ಸರಕಾರ ಜಾಹೀರಾತು ನೀಡಿದ್ದನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.

ಈ ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಗೌರವ ಇಲ್ಲ. ಇವತ್ತು ಕೊಟ್ಟಿರುವ ಜಾಹೀರಾತಿನ ಮೂಲಕ ಅಕ್ಷರಶಃ ಸಂಪೂರ್ಣ ತಪ್ಪು ಮಾಹಿತಿಯನ್ನು ರಾಜ್ಯದ ಜನತೆಗೆ ಕೊಡುವ ಕೆಲಸಕ್ಕೆ ಕಾಂಗ್ರೆಸ್ ಸರಕಾರ ಕೈಹಾಕಿದೆ. ಈ ಜಾಹೀರಾತಿನ ಮುಖೇನ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದು ಖಂಡಿಸಿದರು.

ಪ್ರಿಯಾಂಕ್ ಖರ್ಗೆಯವರು ತಮ್ಮ ಸಾಧನೆಯನ್ನು ಮುಖಪುಟದ ಜಾಹೀರಾತಾಗಿ ಕೊಡಲಿ ನೋಡೋಣ. ರಾಜ್ಯ ಸರಕಾರದ ಸಾಧನೆ ಏನು ಮಾಡಿದ್ದಾರೋ ಅದನ್ನು ಮುಖಪುಟದಲ್ಲಿ ಜಾಹೀರಾತಾಗಿ ನೀಡಲಿ ನೋಡೋಣ, ಇದನ್ನೆಲ್ಲ ಬಿಟ್ಟು ನರೇಂದ್ರ ಮೋದಿಯವರ ಸರಕಾರ, ಕೇಂದ್ರ ಸರಕಾರವು ಮಹಾತ್ಮ ಗಾಂಧಿಯವರಿಗೆ ಅಪಮಾನ ಮಾಡಿದ್ದಾರೆಂದು ತಪ್ಪು ಸಂದೇಶ ನೀಡಿದ್ದು ಸರಿಯಲ್ಲ. ಇವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆಯೂ ಇಲ್ಲ ಎಂದು ಆಕ್ಷೇಪಿಸಿದರು.

ಇದೆಂಥ ಲಜ್ಜೆಗೆಟ್ಟ ಸರಕಾರವೆಂದರೆ, ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ 600-700 ಬಾರ್ ಲೈಸೆನ್ಸ್ ಅನ್ನು ಜಾಸ್ತಿ ಮಾಡಲು ಹೊರಟಿದ್ದಾರೆ. ಇವರು ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡಲು ಯೋಗ್ಯತೆ ಇದೆಯೇ ಎಂದು ಪ್ರಶ್ನೆ ಮಾಡಿದರು.

ಮಹಾತ್ಮ ಗಾಂಧಿಯವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಈ ಕಾಂಗ್ರೆಸ್ಸಿನವರು ಅಯೋಗ್ಯರಿದ್ದಾರೆ; ನಾಲಾಯಕ್ ಇದ್ದಾರೆ ಎಂಬ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯಾನಂತರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ವಿಸರ್ಜಿಸಲು ತಿಳಿಸಿದಂತೆ ಕಾಣುತ್ತದೆ.

ಈ ಅಯೋಗ್ಯರಿಗೆ ಇದನ್ನು ಮುಂದುವರೆಸಲು ಬಿಟ್ಟರೆ, ಸ್ವಾತಂತ್ರ್ಯ ಹೋರಾಟಗಾರರಿಗೂ ಅಪಮಾನ ಮಾಡುತ್ತಾರೆ ಎಂದು ಗೊತ್ತಿದ್ದೇ ಮಹಾತ್ಮ ಗಾಂಧೀಜಿಯವರು ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಲು ಹೇಳಿದಂತಿದೆ ಎಂದು ವಿಶ್ಲೇಷಿಸಿದರು.

ಹೇಳಿಕೊಳ್ಳಲು ಇವರ ಬಳಿ ಸಾಧನೆ ಇಲ್ಲ. ತರಾತುರಿಯಲ್ಲಿ ಅಧಿವೇಶನ ಕರೆದಿದ್ದಾರೆ. ಸರಕಾರವು ಲೋಪದೋಷಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಈ ರೀತಿ ತಪ್ಪು ಜಾಹೀರಾತು ನೀಡಿ ಜನರ ದುಡ್ಡನ್ನೂ ಹಾಳು ಮಾಡಿದ್ದಾರೆ. ರಾಜ್ಯವನ್ನೂ ಅರಾಜಕತೆಗೆ ಒಯ್ದಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾದ ಜಾಹೀರಾತು ನೀಡಿದ್ದಾರೆ ಎಂದು ಅವರು ದೂರಿದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣ ಕೊಟ್ಟು ಜಾಹೀರಾತು ನೀಡಿದ್ದು, ಆ ಹಣವನ್ನು ವಾಪಸ್ ಪಡೆದು ಕಾಂಗ್ರೆಸ್ ಪಕ್ಷದಿಂದ ಕೊಡಲಿ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದು ಸವಾಲು ಹಾಕಿದರು. ತೆರಿಗೆದಾರರ ಹಣವನ್ನು ಈ ರೀತಿ ಪೋಲು ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!