ದೊಡ್ಡಬಳ್ಳಾಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶತಮಾನೋತ್ಸವದ ಅಂಗವಾಗಿ ಹಿಂದೂ ಸಮಾಜ್ಯೋತ್ಸವ ಸಮಿತಿ ಅಡಿಯಲ್ಲಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಹಿಂದೂ ಸಮಾಜೋತ್ಸವದ (Hindu Samajyotsava) ಅಂಗವಾಗಿ ಗುರುವಾರ ಸಂಜೆ ಶೋಭಾ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ನಗರದ ನೆಲದಾಂಜನೇಯ ದೇವಾಲಯದಿಂದ ಹೊರಟ ಬೃಹತ್ ಶೋಭಾಯಾತ್ರೆಯಲ್ಲಿ ಭಾರತ ಮಾತೆಯ ಭಾವಚಿತ್ರದೊಂದಿಗೆ, ವಿವಿಧ ವಾದ್ಯಗೋಷ್ಟಿಗಳೊಂದಿಗೆ ನೂರಾರು ಹಿಂದು ಪರ ಕಾರ್ಯಕರ್ತರು ಹಿಂದೂ ಪರ ಘೋಷಣೆಗಳೊಂದಿಗೆ ಹೆಜ್ಜೆ ಹಾಕಿದರು. ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಯಾತ್ರೆ ಸಮಾಪ್ತಿಗೊಂಡಿತು.
ಶಕ್ತಿ ದೇವತೆಗಳ ಪ್ರತಿಷ್ಟಾಪನೆ
ಹಿಂದೂ ಸಮಾಜೋತ್ಸವದ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಸುಮಾರು 100 ಶಕ್ತಿ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು.
ಶಕ್ತಿ ದೇವತೆಗಳನ್ನು ಪ್ರತಿಷ್ಠಾಪಿಸಿ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಬೆಳಿಗ್ಗೆ ಸುದರ್ಶನ ಹೋಮ ತಾಲ್ಲೂಕಿನ ವಿವಿಧ ಭಜನಾ ಮಂಡಳಿಗಳಿಂದ ‘ಭಕ್ತಿ ಪಾರಾಯಣ’ ನಡೆಯಿತು.
ಮಧ್ಯಾಹ್ನ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.