BJP supports transport workers' protest: R. Ashoka

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಬೆಂಗಳೂರು: ವಿಬಿ ಜಿ ರಾಮ್‌ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ (Mahatma Gandhi) ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್‌ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರ ತೆರಿಗೆ ಹಣದಲ್ಲಿ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆಯ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿದೆ.

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆಯ ಚರ್ಚೆಯ ಸಮಯದಲ್ಲಿ ಅದರ ಬಗ್ಗೆ ಸಂಸತ್ತಿನಲ್ಲಿ ಮಾತನಾಡಬಹುದು. ಕಾಯ್ದೆ ಜಾರಿಯ ನಂತರ ಅದನ್ನು ಹೀಗೆ ಟೀಕೆ ಮಾಡುವ ನೈತಿಕತೆ ಇರುವುದಿಲ್ಲ. ಇದರಲ್ಲಿ ಮಹಾತ್ಮ ಗಾಂಧೀಜಿಯ ಪಾತ್ರವಿಲ್ಲದಿದ್ದರೂ, ಅವರ ಚಿತ್ರ ಬಳಸಿ ಜಾಹೀರಾತಿನಲ್ಲಿ ಅವರೇ ಮಾತನಾಡುವಂತೆ ಮಾಡಲಾಗಿದೆ.

ಸ್ವಾತಂತ್ರ್ಯ ಹೋರಾಟಕ್ಕಾಗಿ ಕಾಂಗ್ರೆಸ್‌ ಪಕ್ಷವನ್ನು ರಚಿಸಿದ್ದು, ಇನ್ನು ರದ್ದು ಮಾಡಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಇನ್ನು ಮುಂದೆ ಮನೆಹಾಳು ಕಾಂಗ್ರೆಸ್ಸಿಗರು ಬರಲಿದ್ದಾರೆ ಎಂದು ಅವರಿಗೆ ಮೊದಲೇ ಗೊತ್ತಿತ್ತು ಎಂದರು.

ಉದ್ಯೋಗ ಖಾತರಿ ಯೋಜನೆಯಲ್ಲಿ ಕಾಂಗ್ರೆಸ್‌ ಮುಖಂಡರು ಲೂಟಿ ಮಾಡಿದ್ದರು. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಕೂಡ ಇದರಲ್ಲಿ ಲೂಟಿ ನಡೆಯುತ್ತಿದೆ ಎಂದು ಹೇಳಿದ್ದರು. ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಕೂಡ ಅದನ್ನೇ ಹೇಳಿದ್ದರು. ಸಾವಿರಾರು ಕೋಟಿ ರೂ. ಬೋಗಸ್‌ ಬಿಲ್‌ ಮಾಡಿ ಲೂಟಿ ಮಾಡಿದ್ದಾರೆ ಎಂದು ಸಿಎಜಿ ವರದಿಯಲ್ಲೂ ಇದೆ. ಇದನ್ನು ತಡೆಯಲು ಪಾರದರ್ಶಕವಾದ ಯೋಜನೆಯನ್ನು ಕೇಂದ್ರ ಸರ್ಕಾರ ತಂದಿದೆ. ಆದರೆ ರಾಜ್ಯದ ಕಾಂಗ್ರೆಸ್‌ ಸರ್ಕಾರ ರಾಹುಲ್‌ ಗಾಂಧಿ ಮಾತು ಕೇಳಿಕೊಂಡು ಜಾಹೀರಾತು ಪ್ರಕಟಿಸಿದೆ.

ಜಾಹೀರಾತಿನಲ್ಲಿರುವ ಮಾತುಗಳನ್ನು ಗಾಂಧೀಜಿ ಎಂದೂ ಹೇಳಿಲ್ಲ. ಅದನ್ನು ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಮೂಲಕ ಗಾಂಧೀಜಿಗೂ ಅಪಮಾನ ಮಾಡಲಾಗಿದೆ ಎಂದು ದೂರಿದರು.

ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಪ್ರಕಟ ಮಾಡಿದರೆ ಅದು ದೊಡ್ಡ ತಪ್ಪು. ಗಾಂಧೀಜಿ ಚಿತ್ರ ಬಳಸಲು ಅವರ ಕುಟುಂಬದವರು ಅಧಿಕಾರ ನೀಡಿಲ್ಲ. ಕಾನೂನು ಪ್ರಕಾರ ಗಾಂಧೀಜಿಯ ಚಿತ್ರ ಬಳಸಲು ಅವಕಾಶವೇ ಇಲ್ಲ. ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್‌ ಮೋಜು ಮಸ್ತಿ ಮಾಡುತ್ತಿದೆ. ಇದನ್ನು ಬಿಜೆಪಿ ಖಂಡಿಸಿ ಹೋರಾಟ ಮಾಡುತ್ತದೆ ಎಂದರು.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!