Anarchy created in the state due to internal Congress infighting; B.Y. Vijayendra

ನಕಲಿ ಕಾಂಗ್ರೆಸ್ ಪಕ್ಷದಿಂದ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಹಿಂದೊಮ್ಮೆ 415 ಸಂಸದರ ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಪಕ್ಷವು ಇವತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇವಲ 99 ಸ್ಥಾನಗಳಿಗೆ ತೃಪ್ತಿ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ವಿಶ್ಲೇಷಿಸಿದರು.

ವಿಧಾನಸಭೆಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಂಥ ಹೀನಾಯ ಪರಿಸ್ಥಿತಿ ಬಂದಿದೆ ಎಂದು ಒಂದು ಕ್ಷಣ ಯೋಚಿಸಬೇಕಾಗುತ್ತದೆ. ಹಿಂದೆ ಸೀತೆಯನ್ನು ರಾವಣ ಅಪಹರಿಸಿ ಲಂಕೆಗೆ ತೆಗೆದುಕೊಂಡು ಹೋದನೋ, ಅದೇ ರೀತಿ ಕಾಂಗ್ರೆಸ್ಸಿನವರು ಮಹಾತ್ಮ ಗಾಂಧಿಯವರ ಹೆಸರನ್ನು ಬಳಸಿಕೊಂಡಿದೆ. ಈ ನಕಲಿ ಕಾಂಗ್ರೆಸ್ ಪಕ್ಷವು, ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ಅಷ್ಟೇ ಅಲ್ಲ; ಬಡತನ ನಿರ್ಮೂಲನೆ ಮಾಡುತ್ತೇವೆ; ಗರೀಬಿ ಹಠಾವೋ ಎಂದು ಹೇಳಿ, ಈ ದೇಶದ ಬಡವರಿಗೂ ಮಕ್ಮಲ್ ಟೋಪಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಿದ ಪರಿಣಾಮವಾಗಿ ಇಂಥ ಹೀನಾಯ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ರಾಜ್ಯದಲ್ಲಿ ಬಂದಿದೆ ಎಂದು ನುಡಿದರು.

ಕಾಂಗ್ರೆಸ್ ಪಕ್ಷವು ದೇಶದಲ್ಲಿ ಇಂಥ ಹೀನಾಯ ಪರಿಸ್ಥಿತಿಗೆ ಇವತ್ತು ಯಾಕೆ ಬಂದಿದೆ ಎಂದು ಬೆಳಕು ಚೆಲ್ಲಬೇಕಾಗಿತ್ತು. ಈ ದೇಶದಲ್ಲಿ 1961ರಲ್ಲಿ ಕಾಂಗ್ರೆಸ್ಸಿನ 364 ಸಂಸದರಿದ್ದು, 1984ರಲ್ಲಿ 415 ಸಂಸದರು ಸಂಸತ್ತಿನಲ್ಲಿದ್ದರು ಎಂದು ಗಮನಕ್ಕೆ ತಂದರು.

ನಮ್ಮ ರಾಜ್ಯದಿಂದ ಜಿಎಸ್‍ಟಿ ತೆರಿಗೆ ಮೂಲಕ ಕೇಂದ್ರಕ್ಕೆ ಎಷ್ಟು ಮೊತ್ತ ಹೋಗಿದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಆಗಿವೆ ಎಂದ ಅವರು, ಆಡಳಿತ ಪಕ್ಷದವರ ಮಾತನ್ನು ಕೇಳುತ್ತಿದ್ದರೆ ನಮ್ಮ ರಾಜ್ಯದ ತೆರಿಗೆ ಹಣದಿಂದ ಕೇಂದ್ರ ಸರಕಾರವು ಬಹಳ ಭ್ರಷ್ಟಾಚಾರ ಮಾಡಿದೆ; ಲೂಟಿ ಮಾಡಿದೆ; ಈ ದೇಶದಲ್ಲಿ, ರಾಜ್ಯದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂಬ ಅರ್ಥದಲ್ಲಿ ಮಾತನಾಡುತ್ತಿದ್ದಾರೆ. ಇದು ಒಂದು ರೀತಿ ಅರ್ಥಹೀನ ಎಂದು ತಿಳಿಸಿದರು.

ಭ್ರಷ್ಟಾಚಾರದ ಬಗ್ಗೆಯೇ ಚರ್ಚೆ ನಡೆಯುತ್ತಿತ್ತು

ನಮ್ಮ ರಾಜ್ಯ ಮತ್ತು ಹೊರರಾಜ್ಯಗಳಿಂದ ತೆರಿಗೆ ಮೂಲಕ ಕೇಂದ್ರವು ಜಿಎಸ್‍ಟಿ ಸಂಗ್ರಹ ಮಾಡುತ್ತಿದೆ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ, ಇಡೀ ದೇಶದಲ್ಲಿ 2 ಜಿ ಸ್ಕ್ಯಾಮ್, ಕಲ್ಲಿದ್ದಲು ಹಗರಣ, ಕಾಮನ್‍ವೆಲ್ತ್ ಗೇಮ್ಸ್ ಹಗರಣದ ಚರ್ಚೆ ಆಗುತ್ತಿತ್ತು. ಈ ದೇಶದಲ್ಲಿ ಅಭಿವೃದ್ಧಿ ಕುರಿತು ಚರ್ಚೆಯೇ ಆಗುತ್ತಿರಲಿಲ್ಲ. ಭ್ರಷ್ಟಾಚಾರದ ಬಗ್ಗೆಯೇ ಚರ್ಚೆ ನಡೆಯುತ್ತಿತ್ತು ಎಂದು ಹೇಳಿದರು.

ಮೋದಿಯವರ ಸರಕಾರದ ಭ್ರಷ್ಟಾಚಾರರಹಿತ ಆಡಳಿತ

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ವಿಶೇಷವಾಗಿ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರ ಅಧಿಕಾರ ನಡೆಸುವ ನಂತರದಲ್ಲಿ ಇವತ್ತು ಈ ದೇಶದಲ್ಲಿ ಭ್ರಷ್ಟಾಚಾರದ ಬಗ್ಗೆ ಚರ್ಚೆ ಆಗುತ್ತಿಲ್ಲ.

2014ರಿಂದ 2025ರ ಅವಧಿಯಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ವಿರುದ್ಧ ಯಾವುದೇ ಒಂದು ಭ್ರಷ್ಟಾಚಾರದ ಆರೋಪ ಮಾಡಲು ಕಾಂಗ್ರೆಸ್ಸಿನವರಿಗೆ ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ನರೇಂದ್ರ ಮೋದಿಯವರು ಆ ರೀತಿಯ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದನ್ನು ಈ ದೇಶದ ಜನರು ಚರ್ಚೆ ಮಾಡುತ್ತಿದ್ದಾರೆ ಎಂದು ಗಮನ ಸೆಳೆದರು.

ಇವತ್ತು ದೇಶದಲ್ಲಿ ವಿಕಸಿತ ಭಾರತದ ಕುರಿತು ಚರ್ಚೆ ಆಗುತ್ತಿದೆ. ಭಾರತದ ಅಭಿವೃದ್ಧಿ ಪಥದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಜಿಎಸ್‍ಟಿ ವಿಷಯದಲ್ಲಿ ರಾಜ್ಯಕ್ಕೆ ಸಾಕಷ್ಟು ಅನ್ಯಾಯ ಆಗುತ್ತಿದೆ ಎಂಬ ಚರ್ಚೆ ಆಗುತ್ತಿದೆ. ಆದರೆ, ದೇಶದಲ್ಲಿ 2014ರಿಂದ 2025ರ ನಡುವೆ ಆಗಿರುವ ಆಡಳಿತದಲ್ಲಿನ ಆಮೂಲಾಗ್ರ ಬದಲಾವಣೆ ಕುರಿತು ಯಾರೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.

ಕೇಂದ್ರ ಸರಕಾರವು ಜಿಎಸ್‍ಟಿಯ ಲಕ್ಷಾಂತರ ಕೋಟಿ ಮೊತ್ತವನ್ನು ಬಂಡವಾಳವಾಗಿ ಹೂಡುತ್ತಿರುವ ಕುರಿತು ಚರ್ಚೆ ಮಾಡಬೇಕಿದೆ. ಮೋದಿಯವರ ಸರಕಾರವು ಈ ದೇಶದ ಮೂಲಭೂತ ಸೌಕರ್ಯ, ಭದ್ರತಾ ವ್ಯವಸ್ಥೆ, ಉದ್ಯೋಗ ಸೃಷ್ಟಿ ಕ್ಷೇತ್ರಕ್ಕೆ ಆದ್ಯತೆಯಿಂದ ಹಣ ನೀಡುತ್ತಿದೆ. ನರೇಂದ್ರ ಮೋದಿಯವರ ನೇತೃತ್ವದ ಎನ್‍ಡಿಎ ಸರಕಾರವು ರಾಷ್ಟ್ರ ಮೊದಲು ಚಿಂತನೆಯಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಮುಂದಾಗಿದೆ ಎಂದು ವಿವರಿಸಿದರು.

ದೇಶದಲ್ಲಿ 2 ಲಕ್ಷ ಸ್ಟಾರ್ಟಪ್‍ಗಳಿಗೆ ಅವಕಾಶ

ರಕ್ಷಣಾ ಬಜೆಟ್ ಮೊತ್ತ ಹಲವು ಪಟ್ಟು ಹೆಚ್ಚಾಗಿದೆ. ಹೆದ್ದಾರಿಯ ನಿರ್ಮಾಣವೂ ಭರದಿಂದ ಸಾಗಿದೆ ಎಂದು ಗಮನಕ್ಕೆ ತಂದರು. ಉದ್ಯೋಗ ಸೃಷ್ಟಿಗೆ ಪೂರಕವಾಗಿ ಕಾಯ್ದೆಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.

ಕೇಂದ್ರ ಸರಕಾರದ ನೀತಿಯ ಪರಿಣಾಮವಾಗಿ ಇಡೀ ದೇಶದಲ್ಲಿ 2 ಲಕ್ಷ ಸ್ಟಾರ್ಟಪ್‍ಗಳಿಗೆ ಅವಕಾಶವಾಗಿದೆ ಎಂದರು. ಯೂನಿಕಾರ್ನ್‍ಗಳೂ ಆರಂಭವಾಗಿದ್ದು, ಇದರಿಂದ 2024ರವರೆಗೆ 16.6 ಲಕ್ಷ ನೇರ ಉದ್ಯೋಗ ದೇಶದಲ್ಲಿ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಶೇ 74 ರಷ್ಟು ಗ್ರಾಮೀಣ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ..
ದೇಶದಲ್ಲಿ ಸ್ವಾತಂತ್ರ್ಯಾನಂತರದ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತ ನಡೆಸಿದೆ. ಆದರೂ, ಶೇ 17 ಗ್ರಾಮೀಣ ಜನರಿಗೆ ಮಾತ್ರ ಕುಡಿಯುವ ನೀರಿನ ವ್ಯವಸ್ಥೆ ಆಗಿತ್ತು. ಆದರೆ, ನರೇಂದ್ರ ಮೋದಿಯವರ ಪ್ರಾಮಾಣಿಕ ಪ್ರಯತ್ನದಿಂದಾಗಿ ಶೇ 74 ರಷ್ಟು ಗ್ರಾಮೀಣ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಆಗಿದೆ. ಸುಮಾರು 12 ಕೋಟಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವು ಕೇಂದ್ರ ಸರಕಾರದ ನೇತೃತ್ವದಲ್ಲಿ ಆಗಿದೆ ಎಂದರು.

ಈ ದೇಶದ ಸುರಕ್ಷತೆ ಮತ್ತು ಭದ್ರತೆ ಅಷ್ಟೇ ಮುಖ್ಯವಾದುದು. ಈಶಾನ್ಯ ಭಾಗದ ರಾಜ್ಯಗಳಿಗೆ ಹಿಂದಿನ ಕೇಂದ್ರ ಸರಕಾರವು ಗಮನ ಕೊಡುತ್ತಿರಲಿಲ್ಲ. ಆದರೆ, ನರೇಂದ್ರ ಮೋದಿಯವರ ಸರಕಾರ ಆಡಳಿತ ವಹಿಸಿಕೊಂಡ ಬಳಿಕ ಕಳೆದ 10 ವರ್ಷಗಳಲ್ಲಿ 6.5 ಲಕ್ಷ ಕೋಟಿ ನೀಡಿದ್ದು, ಅಲ್ಲಿ ಹೆದ್ದಾರಿ ನಿರ್ಮಾಣ, ಮೂಲಭೂತ ಸೌಕರ್ಯಗಳಿಗಾಗಿ ಖರ್ಚು ಮಾಡಿದ್ದಾರೆ ಎಂದರು.

ಇಡೀ ದೇಶದಲ್ಲಿ ಇವತ್ತು ನಕ್ಸಲಿಸಂ ಬಗ್ಗೆ ಚರ್ಚೆ ಆಗುತ್ತಿಲ್ಲ; 2014ರ ಮೊದಲಿನ ದಿನಗಳಲ್ಲಿ ಪತ್ರಿಕೆಗಳಲ್ಲಿ ನಕ್ಸಲರು ಅಲ್ಲಿ ದಾಳಿ ಮಾಡಿದರು; ಇಲ್ಲಿ ಪೊಲೀಸರು ನಕ್ಸಲರಿಂದ ಸತ್ತರು; ಇಲ್ಲಿ ಬಡವರ ಪ್ರಾಣಹಾನಿ ಆಗಿದೆ ಎಂದು ಪ್ರಕಟವಾಗಿ ಚರ್ಚೆ ಆಗುತ್ತಿತ್ತು.

2014ರ ಪೂರ್ವದಲ್ಲಿ ಹಲವಾರು ರಾಜ್ಯಗಳಲ್ಲಿ ನಕ್ಸಲರ ಕಾಟ ತೀವ್ರವಾಗಿತ್ತು. ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿಯವರ ಸರಕಾರದ ನೀತಿಯಿಂದ, ಅಲ್ಲಿ ಹೆಚ್ಚು ಉದ್ಯೋಗಾವಕಾಶ ಸೇರಿ ಮೂಲಭೂತ ಸೌಕರ್ಯಗಳಿಂದ ನಕ್ಸಲರ ಸಮಸ್ಯೆ ಇಲ್ಲವಾಗಿದೆ ಎಂದು ಗಮನ ಸೆಳೆದರು.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!