ಬೆಂಗಳೂರು: ಮದ್ಯಪಾನ ಮಾಡಿ ಶಾಲಾವಾಹನ ಚಲಾಯಿಸುವ ಚಾಲಕರ ಡಿಎಲ್ಗಳನ್ನು (DL) ಮುಲ್ಲಾಜಿಲ್ಲದೆ ಅಮಾನತು ಮಾಡಲಾಗುತ್ತಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ (RTO) ದೀಪಕ್ ಹೇಳಿದ್ದಾರೆ.
ಗಣರಾಜ್ಯೋತ್ಸವ, ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ನಗರದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಜಾಥಾ ಮತ್ತು ಧ್ವಜಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಸ್ತೆ ಸುರಕ್ಷತಾ ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುತ್ತಿದೆ. ಕಡ್ಡಾಯವಾಗಿ ಚಾಲಕರು ನಿಯಮ ಪಾಲಿಸಬೇಕು ಎಂದರು. ಇದೇ ವೇಳೆ ಮಕ್ಕಳಿಗೆ, ಪಾಲಕರಿಗೆ ಮತ್ತು ಮಾಲೀಕರಿಗೆ ರಸ್ತೆ ಸುರಕ್ಷತಾ ಬಗ್ಗೆ ಅರಿವು ಮೂಡಿಸಿದರು.
(ಸಾಂದರ್ಭಿಕ AI ಚಿತ್ರ ಬಳಸಲಾಗಿದೆ)