ದೊಡ್ಡಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.
ಸಭೆಯಲ್ಲಿ ಪ್ರಮುಖವಾಗಿ ಪಡಿತರ ಚೀಟಿ ವಿಳಂಬಕ್ಕೆ ಸ್ಥಳದಲ್ಲಿಯೇ ಪರಿಹಾರ, ಗೃಹಲಕ್ಷ್ಮಿ ಹಣ ಬರುತ್ತಿಲ್ಲವೆಂದು ತಿಳಿಸಿದ ಫಲಾನುಭವಿಗಳ ಅಕೌಂಟ್ ಪರಿಶೀಲನೆ ಮಾಡಿದಾಗ ಪ್ರತಿ ಬಾರಿ ಯೋಜನೆಯ ಖಾತೆಗೆ ಸಂದಾಯವಾಗಿರುವುದು.
ಕೆಲವು ಫಲಾನುಭವಿಗಳು 2,3 ಬ್ಯಾಂಕ್ ಖಾತೆ ಹೊಂದಿರುವ ಗೊಂದಲದ ಪರಿಹಾರ, ಕೆಲವರ BPL ಕಾರ್ಡ್ APL ಕಾರ್ಡ್ ಆಗಿ ಬದಲಾವಣೆಯಾಗಿರುವುದಕ್ಕೆ ಕಾರಣ ವಿವರಿಸಲಾಯಿತು. ಇದರಲ್ಲಿ ಪ್ರಮುಖವಾಗಿ ಆದಾಯ ತೆರಿಗೆ ಪಾವತಿ, GST, ಸ್ವಂತ ಕಾರು ಹೊಂದಿರುವುದಾಗಿದೆ.
ಇನ್ನೂ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅದ್ಯಕ್ಷ ಎನ್. ವಿಶ್ವನಾಥ ರೆಡ್ಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಕುಂದು ಕೊರತೆ ನಿವಾರಣೆ ಶಿಬಿರಗಳಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಪಾಲ್ಗೊಂಡು ಫಲಾನುಭವಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗಯತ್ತಿದೆ.
ವಿರೋಧ ಪಕ್ಷಗಳ ಸುಳ್ಳು ಆರೋಪದ ನಡುಗೆಯೂ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಐದು ಗ್ಯಾರಂಟಿ ಯೋಜನೆಗಳು ಕುಟುಂಬದ ಆರ್ಥಿಕ ಸದೃಢತೆಗೆ ನೆರವಾಗಿದೆ.
ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000/- ನೀಡುತ್ತಿರುವುದರಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ.
200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿರುವುದರಿಂದ ಮಧ್ಯಮ ಮತ್ತು ಬಡ ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಆಗಿದೆ.
ಪ್ರತಿಯೊಬ್ಬರಿಗೂ ಉಚಿತ ಅಕ್ಕಿ ಮತ್ತು ಪೌಷ್ಟಿಕ ಆಹಾರ ನೀಡುವ ಮೂಲಕ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.
ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ದಾರಿಗಳಿಗೆ ಉದ್ಯೋಗ ಕಂಡುಕೊಳ್ಳುವ ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಗಳ ಮೂಲಕ ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ಥಿರತೆಯನ್ನು ಸಾಧಿಸುವ ಮೂಲಕ ಗ್ಯಾರೆಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಇವು ಜನರ ಜೀವನ ಮಟ್ಟವನ್ನು ಸುಧಾರಿಸಿವೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಕೇವಲ ನಮ್ಮ ರಾಜ್ಯ ಮಾತಾಡ್ತಾ ಇತ್ತು, ಇಂದು ದೇಶ ಮಾತಾಡುತ್ತಿದೆ. ಯಾರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವಿರೋಧಿಸಿ ಟೀಕೆ ಮಾಡಿದ್ದರೋ ಅವರೆ ಇಂದು ಕರ್ನಾಟಕದ ಗ್ಯಾರಂಟಿಗಳನ್ನು ಮಾದರಿಯಾಗಿಟ್ಟುಕೊಂಡು ಬೇರೆ ರಾಜ್ಯಗಳಾದ ಮದ್ಯಪ್ರದೇಶ, ಹರಿಯಾಣ, ದೆಹಲಿ ರಾಜ್ಯಗಳಲ್ಲಿ ಘೋಷಣೆ ಮಾಡಿದ್ದಾರೆ.
ಯಾರು ಮೈಕ್ ಹಿಡಿದುಕೊಂಡು ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡ್ತಿದ್ದಾರೋ ಅವರ ಮನೆಯ ಹೆಂಗಸರು ಗೃಹ ಲಕ್ಷ್ಮಿ ಯೋಜನೆಯನ್ನು, ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಶಕ್ತಿ ಯೋಜನೆಯಡಿ ಬಸ್ಸಿನಲ್ಲಿ ಪ್ರಯಾಣ, ಗೃಹ ಜ್ಯೋತಿಯಡಿ ವಿದ್ಯುತ್ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎಂದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಧಿಕಾರದ ಅಧ್ಯಕ್ಷ ಚುಂಚೇಗೌಡ, ಕಾಂಗ್ರೆಸ್ ಮುಖಂಡ ರಾಮಣ್ಣ, ಗ್ಯಾರಂಟಿ ಸದಸ್ಯರಾದ ನಂಜಪ್ಪ, ನಾಗೇಶ್, ಮಂಜುಳ, ಮಹೇಶ್ವರಿ, ತಿಮ್ಮರಾಯ ಗೌಡ, ಆಹಾರ ಶಿರಸ್ತೇದಾರರು ಶ್ರೀಧರ್, ಅನಂತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ಮಲಾ, ಕೌಶಲ್ಯ ಮತ್ತು ತರಬೇತಿ ಇಲಾಖೆ ಶೋಭಾ , ಕೆಎಸ್‌ಆರ್‌ಟಿಸಿ ವಿಭಾಗದ ಗೀತಾ, ಬೆಸ್ಕಾಂ ಇಲಾಖಡಯ ಹನುಮಂತೆ ಗೌಡ ಮತ್ತಿತರರಿದ್ದರು.