Abacus graduation ceremony in Doddaballapura

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿಯ ಗಣೇಶಪ್ಪ ಚೌಟ್ರಿಯಲ್ಲಿ ಇಂದು ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದಿಂದ ಪದವಿ ಪ್ರದಾನ (Abacus graduation ceremony) ಹಾಗೂ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ಅಧ್ಯಕ್ಷ ಸುಬ್ರಹ್ಮಣ್ಯ (Subramya) ಭಾಗವಹಿಸಿದ್ದರು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅಬಾಕಸ್ ರೀತಿಯ ತರಬೇತಿಗಳು ಬಹಳಷ್ಟು ಸಹಕಾರಿ. ವಿದ್ಯಾರ್ಥಿಗಳಲ್ಲಿನ ಬುದ್ದಿಮತ್ತಿಕೆಯನ್ನು ಹೆಚ್ಚಿಸಲು ಇದು ಮುಖ್ಯ ಪಾತ್ರವಹಿಸುತ್ತದೆ.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಅಬಾಕಸ್ ತರಬೇತಿಯಿಂದ ಗಣಿತ ಪಠ್ಯಕ್ಕೆ ಬಹಳಷ್ಟು ಸಹಕಾರಿಯಾಗಿದ್ದು, ಈ ರೀತಿಯಾದ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಮಕ್ಕಳನ್ನು ಸಿದ್ದಪಡಿಸಿರುವುದು, ಅಚ್ಚುಕಟ್ಟಾದ ವ್ಯವಸ್ಥೆ ಪ್ರಶಂಸನೀಯ.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಪೋಷಕರು ವಿದ್ಯಾರ್ಥಿಗಳನ್ನು ಕೇವಲ ಪಠ್ಯ ಚಟುವಟಿಕೆಗೆ ಮಾತ್ರ ಸೀಮಿತವಾಗಿಸದೆ.‌ ಪಠ್ಯತರ ಚಟುವಟಿಕೆಗಳ ಬಗ್ಗೆ ಆಸಕ್ತಿ ಮೂಡಿಸಬೇಕಿದೆ. ಜೊತೆಗೆ ಉತ್ತಮವಾದ ನ್ಯೂಸ್ ಚಾನಲ್‌ಗಳನ್ನು ನೋಡಲು ಮಕ್ಕಳನ್ನು ಪ್ರೇರೇಪಿಸುವ ಕೆಲಸ ಮಾಡಬೇಕಿದೆ ಎಂದರು‌.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಈ ವೇಳೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನಗರ ಪ್ರದೇಶಕ್ಕೆ ಸೀಮಿತವಾದ ಅಬಾಕಸ್ ಅನ್ನು ಪರಿಚಯಿಸಿ, ಯಶಸ್ವಿಯಾಗಿರುವ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥೆ ಪುಷ್ಪ ಅವರ ಶ್ರಮ ಅಪಾರವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಶ್ರೀ ದೇವರಾಜ್ ಅರಸ್ ಅಂತರ ರಾಷ್ಟ್ರೀಯ ವಸತಿ ಶಾಲೆಯ ವ್ಯವಸ್ಥಾಪಕ ಎಸ್. ರವಿಕುಮಾರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪದವಿ ಪಡೆಯಲು 21 ವಯಸ್ಸಾಗಿರಬೇಕು. ಅಂತದರಲ್ಲಿ ಅಬಾಕಸ್ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿ ಕೇವಲ 12 ರಿಂದ 13 ವಯಸ್ಸಿಗೆ ಪದವಿ ಪಡೆಯುತ್ತಿರುವುದು ಪ್ರಶಂಸನೀಯ ಎಂದರು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಅಬಾಕಸ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್‌‌ಕಮಲ್ ಸ್ವರ್ಣಾಕರ್ ಮಾತನಾಡಿ, ಐದು ಮಕ್ಕಳಿಂದ ಆರಂಭವಾದ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರ ಇಂದು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಹಾಗೂ ಹೆಚ್ಚು ಮಕ್ಕಳಿಗೆ ತರಬೇತಿ ನೀಡುತ್ತಿರುವುದು, ತರಬೇತಿ ಮುಗಿಸಿದ 27 ಮಕ್ಕಳಿಗೆ ಪದವಿ ವಿತರಣೆ ಪ್ರಶಂಸನೀಯ.

ರಾಷ್ಟ್ರ ಮಟ್ಟದಲ್ಲಿ ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಮಾದರಿಯಾಗಿದೆ. ಗ್ರಾಮಾಂತರ ಪ್ರದೇಶವಾದರೂ ಕೂಡ, ಮಕ್ಕಳ ಸಾಧನೆ, ಪೋಷಕರ ಆಸಕ್ತಿ ಯಾವ ಜಿಲ್ಲಾ ಕೇಂದ್ರಗಳಿಗೆ ಕಡಿಮೆ ಇಲ್ಲದಂತಿದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಅಬಾಕಸ್ ತರಬೇತಿ ಕುರಿತು ಪೋಷಕರಾದ ಕೆ.ಪಿ‌. ಮಧುಶ್ರೀ, ಕೆ.ಟಿ. ರಾಮಮೂರ್ತಿ, ದಿವ್ಯ, ಭೈರಮ್ಮ, ಸಂಜೀವ್ ರಾಜ್, ಉಮ್ಮೇ ಸಾಧಿಯ ಅವರು ಅಭಿಪ್ರಾಯ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ 27 ಮಕ್ಕಳಿಗೆ ಪದವಿ ವಿತರಣೆ ಮಾಡಲಾಯಿತು.

ದೊಡ್ಡಬಳ್ಳಾಪುರದಲ್ಲಿ ಅಬಾಕಸ್ ಪದವಿ ಪ್ರದಾನ ಸಮಾರಂಭ

ಕಾರ್ಯಕ್ರಮದಲ್ಲಿ ಎಂಎಸ್‌ವಿ ಶಾಲೆಯ ಉಪಾಧ್ಯಕ್ಷ ಸ್ವರೂಪ್, ಉದ್ಯಮಿ ಸುಮಲತಾ ರಾಮಕೃಷ್ಣಪ್ಪ, ದೊಡ್ಡಬಳ್ಳಾಪುರ ಅಬಾಕಸ್ ತರಬೇತಿ ಕೇಂದ್ರದ ಮುಖ್ಯಸ್ಥೆ ವಿ.ಎ.ಪುಷ್ಪ ಸೇರಿದಂತೆ ನೂರಾರು ಮಂದಿ ಪೋಷಕರು, ವಿದ್ಯಾರ್ಥಿಗಳು ಇದ್ದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!