Social media poses a danger to children: Shashidhar Kosambe

ಸಾಮಾಜಿಕ ಜಾಲತಾಣಗಳಿಂದ ಮಕ್ಕಳಿಗೆ ಆಪತ್ತು: ಶಶಿಧರ್ ಕೋಸಂಬೆ

ಬಳ್ಳಾರಿ: ಸಾಮಾಜಿಕ ಜಾಲತಾಣ (Social media) ಹಾಗೂ ಮೊಬೈಲ್ (Mobile) ವ್ಯಸನದಿಂದ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ (Shashidhar Kosambe) ಅವರು ಹೇಳಿದರು.

ಶನಿವಾರ ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.42ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಮಕ್ಕಳು ದಿನಕ್ಕೆ 6ರಿಂದ 7 ಗಂಟೆಗಳ ಕಾಲ ಮೊಬೈಲ್‌ನಲ್ಲಿ ಕಳೆಯುತ್ತಿರುವುದು ಅವರ ಮೆದುಳಿನ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿ ಕಾಲ ಕಳೆಯುವ ಮೂಲಕ ಅವರನ್ನು ಈ ವ್ಯಸನದಿಂದ ದೂರವಿಡಬಹುದು ಎಂದು ಕಿವಿಮಾತು ಹೇಳಿದರು.

1989ರ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಸಹಿ ಹಾಕಿ ಮೂರು ದಶಕಗಳೇ ಕಳೆದರೂ, ಮಕ್ಕಳ ಸುರಕ್ಷತೆ ಇಂದಿಗೂ ಸವಾಲಾಗಿದೆ. ದೇಶದ ಶೇ.41ರಷ್ಟು ಹಾಗೂ ರಾಜ್ಯದ ಸುಮಾರು 2.5 ಕೋಟಿ ಮಕ್ಕಳ ರಕ್ಷಣೆಯ ಬಗ್ಗೆ ನಮ್ಮೆದುರು ಪ್ರಶ್ನೆಗಳಿವೆ. ಇತ್ತೀಚೆಗೆ ಶಾಲೆಗಳಲ್ಲಿ ಸಂಭವಿಸುತ್ತಿರುವ ವಿದ್ಯುತ್ ಸ್ಪರ್ಶದಂತಹ ದುರಂತಗಳು ಮತ್ತು ವಾಹನ ಅಪಘಾತಗಳು ಅಧಿಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿವೆ.

ಮಗು 18 ವರ್ಷ ತುಂಬುವವರೆಗೆ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸುವುದು ಎಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾದೇವಿ, ಡಿಡಿಪಿಐ ಬಿ.ಉಮಾದೇವಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಸದಸ್ಯೆ ಗೌಸಿಯಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!