No more land acquisition in Channarayapatna hobli: M.B.Patil

ಕೇಂದ್ರ ಬಜೆಟ್.. ದೊಡ್ಡಬಳ್ಳಾಪುರದ ಕ್ವಿನ್ ಸಿಟಿ ಯೋಜನೆಯ ಕಾಪಿ: ಎಂ.ಬಿ. ಪಾಟೀಲ

ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು- ಚೆನ್ನೈ ನಡುವೆ ಹೈಸ್ಪೀಡ್ ರೈಲು ಕಾರಿಡಾರ್ ಅಭಿವೃದ್ಧಿ ಘೋಷಣೆ ಮಾಡಿರುವುದು ಸ್ವಾಗತಾರ್ಹವಾದರೂ ಇದರಿಂದ ರಾಜ್ಯಕ್ಕೆ ಹೆಚ್ಚು ಪ್ರಯೋಜನವೇನೂ ಇಲ್ಲ. ಇದರ ಬದಲು ಬೆಂಗಳೂರು-ಪುಣೆ ನಡುವೆ ಇಂಥ ಕಾರಿಡಾರ್ ಬರಬೇಕು. ಇದಕ್ಕಾಗಿ ರಾಜ್ಯದ ಮತ್ತು ಮಹಾರಾಷ್ಟ್ರದ ಸಂಸದರು ಪಕ್ಷಾತೀತವಾಗಿ ಧ್ವನಿ ಎತ್ತಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (M.B. Patila) ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಮಂಡಿಸಿದ 2026-27ನೇ ಸಾಲಿನ ಬಜೆಟ್ ಬಗ್ಗೆ ಅವರು ಸುದ್ದಿ ಮಾಧ್ಯಮಗಳ ಜತೆ ಮಾತನಾಡಿದ್ದಾರೆ.

ಈಗ ಘೋಷಿಸಿರುವ ಎರಡೂ ಮಾರ್ಗಗಳಲ್ಲಿ ರೈಲುಗಳು ಕರ್ನಾಟಕದೊಳಗೆ ನೂರು ಕಿಲೋಮೀಟರ್ ಕೂಡ ಓಡುವುದಿಲ್ಲ. ಇದನ್ನು ಮೋದಿ ಸರಕಾರವು ಪರಿಗಣಿಸಿಲ್ಲದೆ ಇರುವುದು ದುರ್ದೈವದ ಸಂಗತಿ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಘೋಣಿಸಿರುವ 5,600 ಕೋಟಿ ರೂಪಾಯಿ ನೆರವನ್ನು ಬಿಡುಗಡೆ ಮಾಡಬೇಕು ಎನ್ನುವುದು ನಮ್ಮ ಆಗ್ರಹವಾಗಿತ್ತು. ಬಜೆಟ್ಟಿನಲ್ಲಿ ಇವುಗಳ ಪ್ರಸ್ತಾಪವೇ ಇಲ್ಲ. ಮಿಕ್ಕಂತೆ ರೈತ ಸಮುದಾಯಕ್ಕೆ ನೆರವಾಗುವಂತಹ ಒಂದು ಯೋಜನೆಯೂ ಇದರಲ್ಲಿ ಇಲ್ಲ ಎಂದು ಅವರು ಬೊಟ್ಟು ಮಾಡಿದ್ದಾರೆ.

ಈ ಬಜೆಟ್ ರಾಜ್ಯದ ಪಾಲಿಗೆ ಎಂದಿನಂತೆಯೇ ನಿರಾಶಾದಾಯಕವಾಗಿದೆ. ಆದರೆ, ಅದು ಪ್ರಕಟಿಸಿರುವ ವಿಶ್ವವಿದ್ಯಾಲಯ ಟೌನ್‌ ಶಿಪ್ ಗಳ ನಿರ್ಮಾಣ ಮತ್ತು 5 ಪ್ರಾದೇಶಿಕ ವೈದ್ಯಕೀಯ ಪ್ರವಾಸೋದ್ಯಮ ಹಬ್ ಅಭಿವೃದ್ಧಿ ಯೋಜನೆಗಳು ನಮ್ಮ ಕ್ವಿನ್ ಸಿಟಿ ಪರಿಕಲ್ಪನೆಯಿಂದ ಪ್ರಭಾವಿತವಾಗಿವೆ ಎಂದು ಅವರು ವಿಶ್ಲೇಷಿಸಿದ್ದಾರೆ.

ನಾವು ರಾಜ್ಯಕ್ಕೆ ಎರಡು ರಕ್ಷಣಾ ಕಾರಿಡಾರ್ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ಕೋರಿದ್ದೆವು. ರಾಜ್ಯದಲ್ಲಿರುವ ವೈಮಾಂತರಿಕ್ಷ ಮತ್ತು ರಕ್ಷಣಾ ಉದ್ಯಮ ಕಾರ್ಯಪರಿಸರ ಅತ್ಯುತ್ತಮವಾಗಿರುವ ಹಿನ್ನೆಲೆಯಲ್ಲಿ ಇದನ್ನು ಬಜೆಟ್ಟಿನಲ್ಲಿ ಪರಿಗಣಿಸಬೇಕಾಗಿತ್ತು. ಆದರೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಚಕಾರವನ್ನೂ ಎತ್ತಿಲ್ಲ. ಇದರಿಂದ ನಮಗೆ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡಬಳ್ಳಾಪುರ ಸಮೀಪದ ಕ್ವಿನ್ ಸಿಟಿ ಯೋಜನೆ ಒಟ್ಟು 5 ಸಾವಿರ ಎಕರೆಯಲ್ಲಿ ಜಾರಿಗೆ ಬರಲಿದೆ. ಮೊದಲ ಹಂತದಲ್ಲಿ 2 ಸಾವಿರ ಎಕರೆಯಲ್ಲಿ ಇದು ಅನುಷ್ಠಾನಗೊಳ್ಳುತ್ತಿದ್ದು, ಕೆಲಸಗಳು ಪ್ರಗತಿಯಲ್ಲಿವೆ. ಇಲ್ಲಿ ಜಗತ್ತಿನ ಅತ್ಯುತ್ತಮ ವಿಶ್ವವಿದ್ಯಾಲಯಗಳ ಕ್ಯಾಂಪಸ್, ಗುಣಮಟ್ಟದ ಆಸ್ಪತ್ರೆಗಳು, ಸಂಶೋಧನಾ ಸಂಸ್ಥೆಗಳು ಎಲ್ಲವೂ ಬರಲಿವೆ.

ಈಗಾಗಲೇ ಈ ನಿಟ್ಟಿನಲ್ಲಿ ಹಲವು ಒಡಂಬಡಿಕೆಗಳು ಆಗಿವೆ. ಇನ್ನು ಎರಡು ವರ್ಷಗಳಲ್ಲಿ ಇವೆಲ್ಲವೂ ಸಂಪೂರ್ಣ ಜಾರಿಗೆ ಬರಲಿವೆ. ಕೇಂದ್ರ ಸರಕಾರವು ಬಜೆಟ್ಟಿನಲ್ಲಿ ಈಗ ಇಂತಹುದೇ ಯೋಜನೆಗಳನ್ನು ಘೋಷಿಸುವ ಮೂಲಕ ನಮ್ಮನ್ನು ಅನುಸರಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಯೋಫಾರ್ಮಾ ಹಬ್ ಯೋಜನೆ ಕೂಡ ನಮ್ಮ ಉಪಕ್ರಮಗಳ ಪ್ರತಿಫಲನವೇ ಆಗಿದೆ. ಇದಕ್ಕಾಗಿ ನಾವು ರಾಜ್ಯದಲ್ಲಿ ಪ್ರತ್ಯೇಕ ವಿಷನ್ ಗ್ರೂಪನ್ನೇ ರಚಿಸಿದ್ದೇವೆ. ಕೇಂದ್ರ ಸರಕಾರದ ಬಜೆಟ್ಟಿನಲ್ಲಿ ಕರ್ನಾಟಕದ ಅಭಿವೃದ್ಧಿ ಚಿಂತನೆಯ ಮಾದರಿಗಳನ್ನು ಅನುಕರಿಸುತ್ತಿರುವುದು ಸ್ಪಷ್ಟವಾಗಿದೆ.

ತೆರಿಗೆ ಪಾಲು, ಕೈಗಾರಿಕಾ ಬೆಳವಣಿಗೆ ಇತ್ಯಾದಿಗಳಲ್ಲಿ ಹೆಚ್ಚಿನ ಕೊಡುಗೆ ನೀಡುತ್ತಿರುವ ರಾಜ್ಯಕ್ಕೆ ಕೇಂದ್ರ ಸರಕಾರವು ಹೆಚ್ಚು ಲಾಭದಾಯಕ ಯೋಜನೆಗಳನ್ನು ಕೊಡಬೇಕು ಎಂದು ಅಪೇಕ್ಷಿಸುವುದು ನಮ್ಮ ನ್ಯಾಯಬದ್ಧ ಹಕ್ಕಾಗಿದೆ ಎಂದು ಪಾಟೀಲ ಹೇಳಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ನಗರಸಭೆ (Doddaballapur Municipal Council) ವತಿಯಿಂದ 2026-27ನೇ ಸಾಲಿನ ಆಯ-ವ್ಯಯ (Budget) ಕುರಿತ ಸಾರ್ವಜನಿಕ ಸಮಾಲೋಚನೆಯ ಸಭೆ ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ಆದರೆ

[ccc_my_favorite_select_button post_id="119326"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!