Inauguration of the state's first District Consumer Disputes Redressal Commission Mediation Center

ರಾಜ್ಯದ ಮೊದಲ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರ ಉದ್ಘಾಟನೆ

ಬಳ್ಳಾರಿ: ರಾಜ್ಯದಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿಯಾದ ಪ್ರಕರಣಗಳ ಇತ್ಯರ್ಥದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ (State Consumer Disputes Redressal Commission) ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ ಶಿವಶಂಕರೇಗೌಡ (Justice T.G. Shivashankar Gowda) ಅವರು ಹೇಳಿದರು.

ಶನಿವಾರದಂದು ಜಿಲ್ಲಾಡಳಿತ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ನಗರದ ರೈಲ್ವೇ ನಿಲ್ದಾಣ ಎದುರುಗಡೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಬಳ್ಳಾರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಹಕರ ಕುಂದುಕೊರತೆಗಳನ್ನು ನಿಗದಿತ ಅವಧಿಯೊಳಗೆ ಮತ್ತು ಸಾರಾಂಶ ಕಾರ್ಯವಿಧಾನವನ್ನು ಅನುಸರಿಸುವ ಮೂಲಕ ಉಚಿತವಾಗಿ ಪರಿಹಾರ ಒದಗಿಸುವುದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳ ಮುಖ್ಯ ಉದ್ದೇಶ ಮತ್ತು ಕರ್ತವ್ಯವಾಗಿದೆ ಎಂದು ತಿಳಿಸಿದರು.

ಭಾರತ ದೇಶವು ಜಾಗತೀಕರಣ ಹೊಂದುತ್ತಿದೆ. ಅಭಿವೃದ್ಧಿಯತ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ ಗ್ರಾಹಕರ ಹಕ್ಕುಗಳಿಗೆ ಚ್ಯುತಿಯಾಗದಂತೆ ಅವರ ಹಿತಾಸಕ್ತಿ ಕಾಪಾಡಲು ದೇಶದಲ್ಲಿ ರಾಷ್ಟ್ರೀಯ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ಜಾರಿಗೆ ತರಲಾಯಿತು. ಸಾರ್ವಜನಿಕರು ಗ್ರಾಹಕ ಕಾಯ್ದೆ, ಹಕ್ಕುಗಳ ಕುರಿತು ಜಾಗೃತಿ ಹೊಂದಬೇಕು ಎಂದರು.

ರಾಜ್ಯದಲ್ಲಿ 34 ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಗಳಿದ್ದು, ಗ್ರಾಹಕರ ವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕಾಗಿ ಹಂತ-ಹAತವಾಗಿ ಎಲ್ಲಾ ಜಿಲ್ಲೆಗಳಲ್ಲೂ ಮಧ್ಯಸ್ಥಿಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಸಮಾಜದಲ್ಲಿ ಡಿಜಿಟಲ್ ಖರೀದಿ ಹೆಚ್ಚಾಗಿದ್ದು, ಆನ್‌ಲೈನ್ ಮೂಲಕ ಅತಿ ಹೆಚ್ಚು ವಂಚನೆಗಳು ಆಗುತ್ತಿವೆ. ಈ ಕುರಿತು ಎಚ್ಚರಿಕೆಯಿಂದ ವ್ಯವಹರಿಸಬೇಕು. ಪ್ರಸ್ತುತದಲ್ಲಿ ಗ್ರಾಹಕರಿಗಿರುವ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಅಧ್ಯಕ್ಷರು, ಗ್ರಾಹಕರ ಹಕ್ಕುಗಳ ರಕ್ಷಣೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರಥಮ ಸ್ಥಾನಕ್ಕೆ ತರಲು ನಾವೆಲ್ಲರೂ ಪ್ರಯತ್ನಿಸೋಣ ಎಂದು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ. ಶಾಂತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಧ್ಯಸ್ಥಿಕೆ ಕೇಂದ್ರ ಆರಂಭಗೊಂಡಿರುವುದು ಸಂತಸದ ವಿಷಯವಾಗಿದ್ದು, ನಮ್ಮ ಕಲ್ಯಾಣ ಕರ್ನಾಟಕ ಭಾಗವು ಇನ್ನಷ್ಟು ಅಭಿವೃದ್ಧಿಯಾಗಲಿ ಎಂದು ಆಶಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ನುರಿತ ಮಧ್ಯಸ್ಥಿಕೆದಾರರು ಇದ್ದು, ಮಧ್ಯಸ್ಥಿಕೆ ಕೇಂದ್ರಕ್ಕೆ ಬೇಕಾದ ಅಗತ್ಯ ಸಹಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಒದಗಿಸಲಾಗುವುದು ಎಂದು ಹೇಳಿದರು.

‘ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು’ ಎನ್ನುವಂತೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವುದು. ಕಕ್ಷಿದಾರರಿಗೆ ಸಕಾಲದಲ್ಲಿ ನ್ಯಾಯ ದೊರಕಿಸಿಕೊಡುವುದು ಆದ್ಯತೆಯಾಗುವುದರಿಂದ ನೂತನ ಕೇಂದ್ರಗಳಿಗೆ ಮನ್ನಣೆ ಬರಲಿದೆ ಎಂದರು.

ವ್ಯಾಜ್ಯಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸುವುದರ ಮೂಲಕ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೇಶಕ್ಕೆ ಮಾದರಿಯಾಗಬೇಕು. ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಶುಭ ಹಾರೈಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಧ್ಯಸ್ಥಿಕೆಯ ಮೂಲಕ ಗ್ರಾಹಕರ ವ್ಯಾಜ್ಯಗಳ ಇತ್ಯರ್ಥ ಪಡಿಸುವಲ್ಲಿ ಬಳ್ಳಾರಿ ಜಿಲ್ಲೆಯು ಎರಡನೆ ಸ್ಥಾನದಲ್ಲಿದೆ. ಇದಕ್ಕೆ ವಕೀಲರ ಸಹಕಾರವು ಒಳಗೊಂಡಿದೆ ಎಂದು ತಿಳಿಸಿದ ಅವರು, ಮಧ್ಯಸ್ಥಿಕೆ ಕೇಂದ್ರ ಆರಂಭಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದವರೆಲ್ಲರಿಗೂ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಶಿರಸ್ತೇದಾರ ತೋಟದ ರವಿಕುಮಾರ ಅವರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನಡೆದುಬಂದ ಹಾದಿಯ ಬಗ್ಗೆ ಪ್ರಸ್ತುತಪಡಿಸಿದರು.

ಕಾರ್ಯಕ್ರಮದಲ್ಲಿ ರಾಜಿಯಾದಂತಹ ಕಕ್ಷಿದಾರರಿಗೆ ಪರಿಹಾರವಾಗಿ ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್. ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟಾರ್ ಮತ್ತು ಆಡಳಿತಾಧಿಕಾರಿ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ, ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾದ ಕೆ.ಕೋಟೇಶ್ವರ ರಾವ್, ಜೆ.ಎಂ. ಅನಿಲ್ ಕುಮಾರ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಮಾರ್ಲಾ ಶಶಿಕಲಾ ಸೇರಿದಂತೆ ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ವಕೀಲರು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧಿಕಾರಿ-ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ಮುಂದೆ ತಿರುವು ಪಡೆಯುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ (Accident) ಕಂಟೈನರ್‌ ಮುಗುಚಿ ಬಿದ್ದು, ಚಾಲಕರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಸೋಮವಾರ

[ccc_my_favorite_select_button post_id="119069"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!