ದೊಡ್ಡಬಳ್ಳಾಪುರ: ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಸಕ್ಕರೆಗೊಲ್ಲಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಅಂಗಡಿ ಮುಂದೆ ಕುಳಿತಿದ್ದ ರಾಮಯ್ಯ (70 ವರ್ಷ) ಎಂಬ ವೃದ್ಧನ ಎರಡು ಕಾಲುಗಳು ಮುರಿದಿದೆ ಎನ್ನಲಾಗುತ್ತಿದ್ದು, ತೀವ್ರವಾದ ಗಾಯಗಳಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಚಿಕ್ಕಬೆಳವಂಗಲದಿಂದ ಸಾಸಲು ಮಾರ್ಗವಾಗಿ ತೆರಳುವ ಗೂಡ್ಸ್ ವಾಹನ ಸಕ್ಕರೆಗೊಲ್ಲಹಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ಟಿ ಅಂಗಡಿಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಅಂಗಡಿ ಬಾಗಿಲು ಮುಚ್ಚಿದ್ದ ಕಾರಣ ಹೆಚ್ಚಿನ ತೊಂದರೆ ಉಂಟಾಗಿಲ್ಲವಾದರು, ಅಂಗಡಿ ಮುಂದೆ ಕುಳಿತಿದ್ದ ವೃದ್ಧ ರಾಮಯ್ಯ ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ದೊಡ್ಡಬೆಳವಂಗಲ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.