Violence in the political arena of Andhra Pradesh

ಆಂಧ್ರಪ್ರದೇಶದ ರಾಜಕೀಯ ಅಖಾಡದಲ್ಲಿ ಹಿಂಸಾಚಾರದ ಕಿಡಿ..!| Video

ಗುಂಟೂರು: ನೆರೆಯ ಆಂಧ್ರಪ್ರದೇಶದ (Andhra Pradesh) ರಾಜಕೀಯ (Political) ಅಖಾಡದಲ್ಲಿ ಹಿಂಸಾಚಾರದ (Violence) ಕಿಡಿ ಹೊತ್ತಿಕೊಂಡಿದ್ದು, ವೈಎಸ್‌ಆರ್‌ಸಿಪಿ (YSRCP) ನಾಯಕರ ಮನೆಗಳ ಮೇಲೆ ನಡೆದ ಸರಣಿ ದಾಳಿಗಳು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿವೆ.

ಇದರಿಂದಾಗಿ ಆಂಧ್ರಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಠಿಣ ನಿಲುವು ತಳೆದಿದ್ದು, ತಮ್ಮದೇ ಪಕ್ಷದ ಟಿಡಿಪಿ ಕಾರ್ಯಕರ್ತರಾಗಿದ್ದರೂ ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ.

ಈ ಬೆಳವಣಿಗೆಯು ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಇಷ್ಟಕ್ಕೂ ಆಗಿದ್ದು ಏನೆಂದು ನೋಡುವುದಾದರೆ, ತಿರುಮಲ ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಪ್ರಕರಣ ಸಂಬಂಧಿಸಿದಂತೆ ಆಂಧ್ರಪ್ರದೇಶದಲ್ಲಿ ದೊಡ್ಡಮಟ್ಟದ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಅಂತೆಯೇ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕರು ಮಹಾಪಾಪಂ ಎಂಬ ಶೀರ್ಷಿಕೆಯ ಫ್ರೆಕ್ಸ್ ಅನ್ನು ಅಳವಡಿಸಿದ್ದಾರೆ.

ಇದರಿಂದ ಕೆರಳಿದ ವೈಎಸ್‌ಆರ್‌ಸಿಪಿ ನಾಯಕ ಅಂಬಟಿ ರಾಂಬಾಬು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಪೊಲೀಸರು ಬೇಡ ಅಂದರೂ ಸಹ ಆ ಪ್ಲೆಕ್ಸ್ ಅನ್ನು ಕೆಡುವುದಾಗಿ ತೆರಳಿದ್ದರು.

ಇದಕ್ಕೆ ತಿರುಗಿ ಬಿದ್ದ ಟಿಡಿಪಿ ಕಾರ್ಯಕರ್ತರು, ಅವರ ಕಾರನ್ನು ತಡೆದರು. ಈ ವೇಳೆ ಅಂಬಟಿ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಯಾಗಿ ಮಾತನಾಡಿದ್ದಾರೆ.

ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಯಿಂದ ಕೆರಳಿದ ಪ್ರತಿಭಟನಾಕಾರರು ನಾಕಾರರು, ಅಂಬಟಿ ಮನೆಗೆ ನುಗ್ಗಿ ಪೀಠೋ ಪಕರಣ, ಎಸಿ ಹಾಗೂ ಕಾರುಗಳನ್ನು ಧ್ವಂಸಗೊಳಿಸಿ ದ್ದಾರೆ. ಜೊತೆಗೆ ಕಲ್ಲು ಮತ್ತು ಮೊಟ್ಟೆಗಳನ್ನು ಎಸೆಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆಯಿಂದಾಗಿ ಗುಂಟೂ ರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣ ವಾಗಿದ್ದು, ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮತ್ತೊಂದೆಡೆ, ಮಾಜಿ ಸಚಿವ ಅಂಬಟಿ ರಾಂಬಾಬು ಸಿಎಂ ಚಂದ್ರಬಾಬು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತೆಯೇ, ಮತ್ತೋರ್ವ ವೈಎಸ್ ಆರ್‌ಪಿ ನಾಯಕ ಜೋಗಿ ರಮೇಶ್ ಕೂಡ ಸಚಿವ ನಾರಾ ಲೋಕೇಶ್ ವಿರುದ್ಧ ಇದೇ ರೀತಿಯ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ದೊಡ್ಡಬಳ್ಳಾಪುರ: ಟಿಪ್ಪರ್ ಡಿಕ್ಕಿ.. ಕಂಟೈನರ್ ಪಲ್ಟಿ

ಮುಂದೆ ತಿರುವು ಪಡೆಯುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ (Accident) ಕಂಟೈನರ್‌ ಮುಗುಚಿ ಬಿದ್ದು, ಚಾಲಕರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಸೋಮವಾರ

[ccc_my_favorite_select_button post_id="119069"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!