Save Karnataka; H.D. Deve Gowda sobs in Rajya Sabha

ಕರ್ನಾಟಕವನ್ನು ರಕ್ಷಿಸಿ; ರಾಜ್ಯಸಭೆಯಲ್ಲಿ ಗದ್ಗದಿತರಾದ ಹೆಚ್.ಡಿ. ದೇವೇಗೌಡ

ನವದೆಹಲಿ: ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿದ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ (H.D. Deve Gowda) ಅವರು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರು.

ರಾಜ್ಯಸಭೆಯಲ್ಲಿ ಬುಧವಾರ ನಡೆದ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಮಾಜಿ ಪ್ರಧಾನಿಗಳು ಮಾತನಾಡಿದರು.

ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಕರ್ನಾಟಕ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯರೂ ಆಗಿರುವ ಮಾಜಿ ಪ್ರಧಾನಿಗಳು ಕೇಂದ್ರ ಸರಕಾರವನ್ನು ಕೈ ಮುಗಿದು ವಿನಂತಿಸಿದರು.

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅವರು: ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ‘ ಎಂದು ಮಾಜಿ ಪ್ರಧಾನಿಗಳು ಮನವಿ ಮಾಡಿದರು.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ ಎಂದ ಮಾಜಿ ಪ್ರಧಾನಿಗಳು, ಕರ್ನಾಟಕ ರಾಜ್ಯಕ್ಕೆ ನೀರಿನದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರ ಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ಮನವಿ ಮಾಡಿಕೊಂಡರು.

ನರೇಂದ್ರ ಮೋದಿ ಅವರ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೇ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ದೇವೇಗೌಡರು ಕೋರಿಕೊಂಡರು.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿಗಳು, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.

ಮೋದಿ ಅವರನ್ನು ವಿನಾಕಾರಣ ಟೀಕೆ ಮಾಡುತ್ತಿರುವ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಹೇಳಿದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!