Doddaballapur: Concluding the cultural programs of Jatra..

ದೊಡ್ಡಬಳ್ಳಾಪುರ: ಜಾತ್ರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ.. ಸನ್ಮಾನ

ದೊಡ್ಡಬಳ್ಳಾಪುರ (Doddaballapura): ರಂಗ ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಈ ಕಾರ್ಯಕ್ರಮಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಲಾವಿದರಿಗೆ ಹೆಚ್ಚಿನ ನೆರವು ನೀಡುವ ಅಗತ್ಯವಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ (T. Venkataramanaiah) ಹೇಳಿದರು.

ದೊಡ್ಡಬಳ್ಳಾಪುರ: ಜಾತ್ರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ.. ಸನ್ಮಾನ

ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಜಾತ್ರಾ ಸಾಂಸ್ಕೃತಿಕ ಸಮಿತಿ, ತಾಲ್ಲೂಕು ಕಲಾವಿದರ ಸಂಘ ಸಹಯೋಗದೊಂದಿಗೆ ನಗರದ ತೇರಿನ ಬೀದಿಯಲ್ಲಿ ನಡೆದ ನಾಟಕೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ನಾಟಕ ಪ್ರದರ್ಶನಕ್ಕೆ ಅರಳು ಮಲ್ಲಿಗೆ ಶಾಲೆಯ ಆಟದ ಮೈದಾನ ನೀಡದಿರುವ ಸಂಗತಿ ವಿವಾದಕ್ಕೀಡಾಗಿದ್ದು, ಇದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕಲಾ ಪ್ರದರ್ಶನಕ್ಕೆ ರಂಗ ಮಂದಿರದ ಅಗತ್ಯತೆಯನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಕಲೆಯ ಉತ್ತೇಜನಕ್ಕೆ ಸರ್ಕಾರ ಹಾಗೂ ಸಮುದಾಯ ಸ್ಪಂಧಿಸಿದಾಗ ಕಲಾವಿದರು ಅಸ್ತಿತ್ವ ಉಳಿಸಿಕೊಳ್ಳಲಿದ್ದಾರೆ ಎಂದರು.

ಜಿಲ್ಲಾ ರಂಗಭೂಮಿ ಕಲಾವಿದ ಸಂಘದ ಗೌ.ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಕಲಾವಿದರಿಗೆ ಸರ್ಕಾರ ಮಾಸಾಶನ ನೀಡುತ್ತಿರುವುದು ಸ್ವಾಗತಾರ್ಹ. ಆದರೆ 2.5 ಸಾವಿರ ರೂ ಮಾಸಾಶನ ಕಲಾವಿದರು ಜೀವನ ನಡೆಸಲು ಸಾಲುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ 5 ಸಾವಿರ ರೂ ಮಾಸಾಶನ ಹೆಚ್ಚಿಸಬೇಕು. ಕಲಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಲಾವಿದರು ವಿಭಿನ್ನ ಪ್ರದರ್ಶನಗಳನ್ನು ನೀಡುವ ಮೂಲಕ ರಂಗಭೂಮಿಯ ಜೀವಂತಿಕೆಗೆ ಶ್ರಮಿಸಬೇಕು ಎಂದರು.

ದೊಡ್ಡಬಳ್ಳಾಪುರ: ಜಾತ್ರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ.. ಸನ್ಮಾನ

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರಾದ ಕೆ.ಟಿ.ಮಾದೇಶ್, ವೀರಭದ್ರಪ್ಪ, ಗಂಗಮ್ಮ, ತೇರು ನಿರ್ಮಾಣ ಮಾಡುವ ಸುಬ್ಬಣ್ಣ, ಜಯಣ್ಣ, ನಾಣ್ಯ ಸಂಗ್ರಹಕಾರ ಎಂ.ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ, ಸದಸ್ಯರಾದ ಪ್ರಭಾ ನಾಗರಾಜ್, ಎಚ್.ಎಸ್.ಶಿವಶಂಕರ್, ಚಂದ್ರ ಮೋಹನ್, ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ವಿಶ್ವನಾಥ ರೆಡ್ಡಿ, ಕರವೇ (ಪ್ರವಿಣ್ ಶೆಟ್ಟಿಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ತಾಲೂಕು ಶಿವರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಚೌಡರಾಜ್ ಮುಖಂಡರಾದ ಬಿ.ಜಿ.ಹೇಮಂತ ರಾಜ್, ಪರಮೇಶ್, ಶ್ರೀಧರ್ ಗೌಡ, ರಾಜ್ ಗೋಪಾಲ್ ಕಂಟನ ಕುಂಟೆ, ವೆಂಕಟ ರಾಜು, ನಾಗೇಶ್, ನಾಗೇಂದ್ರ, ಸಂಚಾಲಕರಾದ ಪ್ರಕಾಶ್‌ ರಾವ್‌, ಡಿ.ವೆಂಕಟೇಶ್, ,ಗಂಗರಾಜು ಶಿರವಾರ, ನಂದ ಕುಮಾರ್ ಮೊದಲಾದವರು ಭಾಗವಹಿಸಿದ್ದರು.

ನಾಟಕೋತ್ಸವದ ಅಂಗವಾಗಿ ಪದ್ಮಪ್ರಿಯಾ ಕಲಾ ಟ್ರಸ್ಟ್‌ ಬೀಡಿಕೆರೆ ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಹಾಗೂ ರಾತ್ರಿ ತಬಲ ಕಾಂತರಾಜು ಅಭಿಮಾನ ಬಳಗ, ತುಮಕೂರು ಇವರಿಂದ ದುರ್ಯೋಧನನ ಗರ್ವಭಂಗ ಪೌರಾಣಿಕ ನಾಟಕ ಪ್ರದರ್ಶನಗಳು ನಡೆದವು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!