JDS support not needed: Preetham Gowda

ಜೆಡಿಎಸ್ ಬೆಂಬಲ ಬೇಕಿಲ್ಲ: ಪ್ರೀತಂ ಗೌಡ

ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ, ಮಾಜಿ ಸಿಎಂ, ಜೆಡಿಎಸ್ (JDS) ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಮಾತು ವ್ಯಾಪಕವಾಗಿದೆ. ಇದರ ಬೆನ್ನಲ್ಲೇ ಮೈತ್ರಿ ಕುರಿತಂತೆ ಬಿಜೆಪಿ (BJP) ಪಾಳಯದಲ್ಲಿ ಅಸಮಾಧಾನದ ಮಾತುಗಳು ಕೆಳಿಬರುತ್ತಿವೆ.

ಇದಕ್ಕೆ ಪೂರಕ ಎಂಬಂತೆ ಬಿಜೆಪಿ ಶಕ್ತಿಯು ತವಾಗಿರುವ ಜಿಲ್ಲೆಗಳಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿ ಸೋಣ ಎನ್ನುವುದು ಮುಖಂಡರು, ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದ್ದಾರೆ.

ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲೇ ಬಿಜೆಪಿ ಶಕ್ತಿಶಾಲಿಯಾಗಿದೆ ಎನ್ನುವುದು ಜೆಡಿಎಸ್‌ ಗೂ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯ ಕರ್ತರು ಸಹ ಅಭಿಪ್ರಾಯವನ್ನು ತಿಳಿಸಿದ್ದಾರೆ.

ಮೈತ್ರಿಗೆ ಅವಕಾಶ ನೀಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಶೇ.50ರಷ್ಟು ಅವಕಾಶ ಕಲ್ಪಿಸ ಬೇಕು ಎಂದು ಒತ್ತಾಯಿಸಿದ್ದಾರೆ. ಈ ವಿಚಾರವನ್ನು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖಂಡರಿಗೆ ತಿಳಿಸುವುದಾಗಿ ಹೇಳಿದ್ದಾರೆ.

ಮೈತ್ರಿ ಬಗ್ಗೆ ರಾಜ್ಯಾಧ್ಯಕ್ಷರು, ಕೋರ್‌ಕಮಿಟಿ ಮುಂದೆ ಕಾರ್ಯಕತರ್ಕರ ಅಭಿಪ್ರಾಯವನ್ನು ಇಡಲಾಗುವುದು. ಅಲ್ಲಿನ ನಿರ್ಣಯವನ್ನು ದೆಹಲಿಗೆ ಕಳುಹಿಸಲಾಗುವುದು. ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಗೆಲ್ಲುವ ಕ್ಷೇತ್ರಗಳ ಸಮೀಕ್ಷೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ದಲ್ಲಿ ಯಾವ್ಯಾವ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ ಗೆಲುವು ಸಾಧಿಸಲಿದೆ ಎಂಬ ಸಮೀಕ್ಷೆಯ ಆಧಾರದ ಮೇಲೆ ಸ್ಪರ್ಧೆಗೆ ಅವಕಾಶ ನೀಡಲಾಗುವುದೇ ಹೊರತು, ಜೆಡಿಎಸ್‌ ಅಥವಾ ಬಿಜೆಪಿ ಪ್ರಾಬಲ್ಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಆಗುವುದಿಲ್ಲ.

ಬಿಜೆಪಿ 150, ಜೆಡಿಎಸ್ 30 ಸೇರಿ 180 ಸ್ಥಾನಗಳನ್ನು ಗೆಲ್ಲುವಂತಹ ಗುರಿ ಹೊಂದಲಾಗಿದ್ದು, ಗೆಲ್ಲುವ ಸಾಮರ್ಥ್ಯವಿರುವ ವರದಿಗಳನ್ನು ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗುವುದು.

ಹಳೆ ಮೈಸೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರಭಾವ ಹೆಚ್ಚಿ, ಜೆಡಿಎಸ್ ಪ್ರಭಾವ ಕುಸಿಯುತ್ತಿದೆ ಎಂದರು.

ಮೈತ್ರಿ ಬಗ್ಗೆ ಯಾವುದೇ ಗೊಂದಲವಿಲ್ಲದಿದ್ದರೂ, ರಾಜ್ಯದಲ್ಲಿ ಎರಡೂ ಪಕ್ಷಗಳ ವಾತಾವರಣ ತಿಳಿಯಾಗಬೇಕು. ಮೈತ್ರಿಗೆ ತಕ್ಕಂತೆ ಅವಕಾಶಗಳನ್ನು ನಿರ್ಮಿಸಬೇಕು. ಅದು ಬಿಟ್ಟು ಇವರೇ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ಘೋಷಣೆ ಮಾಡುವಂತಿಲ್ಲ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಕುಮಾರಸ್ವಾಮಿ ಯವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡುತ್ತಿರುವುದನ್ನು ವಿರೋಧಿಸಿದರು.

ನಮ್ಮಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವುದಿಲ್ಲ. ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ಬದ್ದರಾಗಬೇಕು. ಅದು ಬಿಟ್ಟು ಮೊದಲೇ ಇವರೇ ಸಿಎಂ, ಅವರೇ ಸಿಎಂ ಎನ್ನುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!