ದೊಡ್ಡಬಳ್ಳಾಪುರ: ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯದ (Ghati Temple) ಪ್ರಧಾನ ಅರ್ಚಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಟಿ.ಎನ್. ರಾಮನಾಥ್ ಶರ್ಮ (T.N. Ramnath Sharma) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಇಂದು ಬೆಳಗ್ಗೆ 4.30 ರ ಸುಮಾರಿಗೆ ಉಸಿರಾಟದ ತೊಂದರೆಯಿಂದ ರಾಮನಾಥ ಶರ್ಮ ಅವರು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಮೃತರು ಮೂರು ಜನ ಮಕ್ಕಳು ಸೇರಿದಂತೆ ಅಪಾರ ಶಿಷ್ಯ ವರ್ಗವನ್ನು ಅಗಲಿದ್ದಾರೆ.
ರಾಮನಾಥ ಶರ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ಇಂದು ಮಧ್ಯಾಹ್ನ 1.30 ರ ವರೆಗೆ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸ್ವಗೃಹದ ಬಳಿ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ.
ಸುಮಾರು 60 ವರ್ಷಗಳ ಕಾಲ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರಿಗೆ ಸೇವೆ ಸಲ್ಲಿಸಿದ ಕೀರ್ತಿ ರಾಮನಾಥ ಶರ್ಮ ಅವರದ್ದಾಗಿದೆ.