ದೊಡ್ಡಬಳ್ಳಾಪುರ: ಸಂಕಷ್ಟ ಚತುರ್ಥಿ (Sankashta Chaturthi) ಹಿನ್ನೆಲೆಯಲ್ಲಿ ಇಂದು ತಾಲೂಕಿನ ಆರೂಢಿ (Arudi) ಗ್ರಾಮದ ಬಸ್ ನಿಲ್ದಾಣ ಬಳಿಯಿರುವ ಬಲಮುರಿ ಗಣಪತಿ ದೇವಾಲಯದಲ್ಲಿ ಬೆಣ್ಣೆ ಅಲಂಕಾರ, ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು.
ಸಂಕಷ್ಟ ಚತುರ್ಥಿ ಹಿನ್ನೆಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ದೇವಾಲಯಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೂ ದೇವಾಲಯದ ಆವರಣದಲ್ಲಿ ಪ್ರಸಾದ ವಿನಿಯೋಗ ಕೈಗೊಳ್ಳಲಾಗಿತ್ತು.
ಸ್ಥಳೀಯ ವರ್ತಕರು ಈ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಸಂಜೆ ಭಜನಾ ಕಾರ್ಯಕ್ರಮ ಆಯೋಜಿಸಲಾಗಿದೆ.